ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಕುಟುಂಬದವರಿಗೆ ಮಣೆ
ಬೆಂಗಳೂರು: ಮಂತ್ರಿಗಳು, ಪಕ್ಷದ ಹಿರಿಯ ಮುಖಂಡರ ಸಂಬಂಧಿಕರೇ ರಾಜ್ಯದ ಲೋಕಸಭೆಯ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಕಲಿಗಳಾಗಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಉಳಿದ 21 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳೇ ದೊರೆಯದೆ ತಮ್ಮ ತಮ್ಮ ಕುಟುಂಬದವರಿಗೆ ಮಣೆ ಹಾಕಿದ್ದಾರೆ.

ಶೇಕಡ 60 ರಷ್ಟು ಕ್ಷೇತ್ರಗಳಲ್ಲಿ ಸಚಿವರು ಮತ್ತು ಅಧಿಕಾರಸ್ಥರ ಮಕ್ಕಳು ಮತ್ತು ಸಂಬಂಧಿಕರಿಗೆ ಟಿಕೆಟ್ ನೀಡಲಾಗಿದೆ. ಮೊದಲ ಪಟ್ಟಿಯಲ್ಲೂ ಎರಡು ಕ್ಷೇತ್ರಗಳಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಪಕ್ಷದ ಕಾರ್ಯಕರ್ತರಿಗೆ ದೊರೆತಿರುವುದು ಬೆರಳೆಣಿಕೆ ಕ್ಷೇತ್ರಗಳಿಗೆ ಮಾತ್ರ. ಉಳಿದವೆಲ್ಲವೂ ಉದ್ದಿಮೆದಾರರು ಮತ್ತು ರಾಜಕಾರಣಿಗಳ ಕುಟುಂಬಗಳವರಿಗೆ ದೊರೆತಿದೆ.
ಡಿ.ಕೆ.ಶಿವಕುಮಾರ್ ಅನುಕಂಪ ನಮಗೆ ಬೇಕಿಲ್ಲ: ಹೆಚ್ ಡಿಕೆ
ಕಳೆದ ಎರಡು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ, ರಾಜ್ಯದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ನಗರಕ್ಕೆ ಹಿಂತಿರುಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದಾರೆ.
ಸಚಿವರಾದ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ (ಬೆಂಗಳೂರು ದಕ್ಷಿಣ), ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ), ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ), ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಶಿವಾನಂದ ಪಾಟೀಲ್ (ಬಾಗಲಕೋಟೆ), ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ (ದಾವಣಗೆರೆ), ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ(ಬೀದರ್) ಅವರು ಕಣಕ್ಕಿಳಿಯಲಿದ್ದಾರೆ.
ಅತೃಪ್ತರು ಬಿಜೆಪಿ ಬಿಟ್ಟರೆ ಏನು ಮಾಡಕ್ಕಾಗುತ್ತೆ!
ಸಚಿವರಾದ ಕೃಷ್ಣಬೈರೇಗೌಡ, ಡಾ.ಸುಧಾಕರ್ ಅವರ ಸೋದರ ಸಂಬಂಧಿ ಪ್ರೊ.ರಾಜೀವ್‌ಗೌಡ (ಬೆಂಗಳೂರು ಉತ್ತರ) ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಮಹಾರಾಷ್ಟ್ರ ಕಾಂಗ್ರೆಸ್‌ನ ಪ್ರಭಾವಿ ನಾಯಕರ ಪುತ್ರಿ ಹಾಗೂ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಪತ್ನಿ ಅಂಜಲಿ ನಿಂಬಾಳ್ಕರ್ (ಉತ್ತರ ಕನ್ನಡ) ಅವರನ್ನು ಕಣಕ್ಕಿಳಿಸಿದೆ.
ಕಾಂಗ್ರೆಸ್‌ನ ಹಿರಿಯ ಸದಸ್ಯ ಹಾಗೂ ಉಪ ಸಭಾಪತಿಯಾಗಿದ್ದ ಕೆ. ರೆಹೆಮಾನ್ ಖಾನ್ ಪುತ್ರ ಮನ್ಸೂರ್ ಆಲಿ ಖಾನ್ (ಬೆಂಗಳೂರು ಉತ್ತರ) ಕಣದಲ್ಲಿದ್ದಾರೆ.
ಪಕ್ಷಕ್ಕೆ ದುಡಿದ ಕೆಲವೇ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿರುವವರಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವು ಹಿರಿಯ ಕಾರ್ಯಕರ್ತರಿಗೆ ದೊರೆತಿದೆ. ಈ ಕ್ಷೇತ್ರದಿಂದ ಪಕ್ಷದ ವಕ್ತಾರ ಲಕ್ಷ್ಮಣ್ ಕಣಕ್ಕಿಳಿಯುತ್ತಿದ್ದಾರೆ.
ಸಿದ್ದರಾಮಯ್ಯ ಅತ್ಯಂತ ದುರ್ಬಲ ಮುಖ್ಯಮಂತ್ರಿ!
ಇನ್ನು ಬೀದರ್ ಕ್ಷೇತ್ರಕ್ಕೆ ಪಕ್ಷದ ಹಿರಿಯ ಮುಖಂಡ ರಾಜಶೇಖರ್ ಪಾಟೀಲ್, ದಕ್ಷಿಣ ಕನ್ನಡದಿಂದ ಪದ್ಮರಾಜ್ ಪಾಟೀಲ್, ಉಡುಪಿ-ಚಿಕ್ಕಮಗಳೂರಿನಿಂದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಗಡೆ, ಕೊಪ್ಪಳದಿಂದ ರಾಜಶೇಖರ್ ಹಿಟ್ನಾಳ್ ಅವರಿಗೆ ಟಿಕೆಟ್ ದೊರೆತಿದೆ.
ಚಿತ್ರದುರ್ಗದಿಂದ ಚಂದ್ರಪ್ಪ, ಹುಬ್ಬಳ್ಳಿ-ಧಾರವಾಡದಿಂದ ವಿನೋದ್ ಅಸುಟಿ, ರಾಯಚೂರುನಿಂದ ಕುಮಾರ್ ನಾಯ್ಕ್ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಕ್ಷೇತ್ರಗಳಾ ಆಯ್ಕೆ ಕಗ್ಗಂಟಾಗಿದೆ.