ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿದರು.
ಬಿಜೆಪಿ ಕಚೇರಿಗೆ ಭೇಟಿ ನೀಡಿದ ಮಂಜುನಾಥ್ ಅವರನ್ನು ಪಕ್ಷದ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿ ವಿಶ್ವನಾಥ ಅಣಜಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದು ಅವರನ್ನು ಸ್ವಾಗತಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಬಿಜೆಪಿ ಕಚೇರಿಗೆ ಮಂಜುನಾಥ್ ಭೇಟಿ ನೀಡಿದರು. ಇತ್ತೀಚೆಗೆ ನವದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸುವಂತೆ ಕೋರಿದ್ದರು.