Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರದ ವಿರುದ್ಧ ತೊಡೆ ತಟ್ಟಿದ ಸಿದ್ದರಾಮಯ್ಯ

by admin March 23, 2024
written by admin March 23, 2024 0 comments 2 minutes read
0FacebookTwitterPinterestEmail
196

ಬರ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್ ಮೊರೆ

ಬೆಂಗಳೂರು:ಬರ ಪರಿಹಾರ ನಿರ್ವಹಣೆಗೆ ಕೇಂದ್ರದ ಅನುದಾನ ದೊರಕಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ರಾಜ್ಯ ಸರ್ಕಾರ ಇದೀಗ ನ್ಯಾಯಾಲಯದ ಮೂಲಕ ಅನುದಾನ ಪಡೆಯಲು ಮುಂದಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಕ್ಕೆ ಎನ್‌ಡಿಆರ್‌ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದೇವೆ ಎಂದರು.

ಕಾದು-ಕಾದು ಸಾಕಾಯಿತು

ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು-ಕಾದು ಸಾಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು.

ಸಂವಿಧಾನ ಪರಿಚ್ಛೇಧ 32ರ ಅಡಿಯಲ್ಲಿ ನಾವು ನಮ್ಮ ಕಾನೂನು ಬದ್ಧ ಹಕ್ಕನ್ನು ಚಲಾಯಿಸಿದ್ದೇವೆ ಎಂದು ಸಮರ್ಥಿಸಿಕೊಂಡರು.

ನಮ್ಮ ಪಾಲನ್ನು ಇಂದು ಕೊಡುತ್ತಾರೆ, ನಾಳೆ ಕೊಡುತ್ತಾರೆ, ಇವತ್ತು ಬರುತ್ತೆ, ನಾಳೆ ಬರುತ್ತೆ ಎಂದು ಐದು ತಿಂಗಳಿನಿಂದ ಕಾದು, ನಮಗೆ ಬೇರೆ ದಾರಿ ಕಾಣದೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದೇವೆ ಎಂದರು.

ಬರ ಹಾಗೂ ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ, ಆದರೆ, ಇದುವರೆಗೂ ಕೇಂದ್ರ ಕಾನೂನು ಬದ್ಧವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ಕೋಲಾರ, ಹಾಸನ, ಮಂಡ್ಯ ಜೆಡಿಎಸ್‌ಗೆ
223 ತಾಲ್ಲೂಕುಗಳು ಬರಪೀಡಿತ

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ, ರಾಜ್ಯದಲ್ಲಿ 240 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ಕೇಂದ್ರಕ್ಕೆ ಐಎಂಸಿಟಿ ವರದಿ ನೀಡಿದೆ.

ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು ಎನ್‌ಡಿಆರ್‌ಎಫ್ ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಪರಿಹಾರ ಕೊಡಲಿಲ್ಲ

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ.

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ.

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ ರೂ., ಕುಡಿಯುವ ನೀರಿಗೆ 870 ಕೋಟಿ ರೂ. ಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂ. ಬರ ನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ
ಎನ್‌ಡಿಆರ್‌ಎಫ್ ನಿಧಿ ಬಂದೇ ಇಲ್ಲ

4,600 ಕೋಟಿ ರೂ. ಇನ್‌ಪುಟ್ ಸಬ್ಸಿಡಿಗೆ ಹಣ ಬೇಕು, ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್‌ಡಿಆರ್‌ಎಫ್ ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂಕೋರ್ಟ್ ಬಾಗಿಲು ಬಡಿಯಬೇಕಾಯಿತು.

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, ಎನ್‌ಡಿಆರ್‌ಎಫ್ ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ ಎಂದರು.

ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central govt. not helping state in droughtkarnataka govt. to go to supreem courtseeking drought relief
0 FacebookTwitterPinterestEmail
admin

previous post
ಕೋಲಾರ, ಹಾಸನ, ಮಂಡ್ಯ ಜೆಡಿಎಸ್‌ಗೆ
next post
ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ