Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮೇಕೆದಾಟು ಜಲಾಶಯ ಕಟ್ಟುತ್ತೇವೆ : ಗುಡುಗಿದ ಹೆಚ್.ಡಿ.ದೇವೇಗೌಡರು

by admin March 24, 2024
written by admin March 24, 2024 0 comments 3 minutes read
1FacebookTwitterPinterestEmail
420
ಬಿಜೆಪಿ, ಕಾಂಗ್ರೆಸ್ ಸೇರಿ ರಾಜ್ಯದ ಎಲ್ಲಾ ಪಕ್ಷಗಳು ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸಲಿ

ಬೆಂಗಳೂರು: ರಾಜ್ಯಕ್ಕೆ ಅತ್ಯಗತ್ಯವಾಗಿ ಬೇಕಿರುವ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿಯೇ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಮಾಜಿ ಪ್ರಧಾನಿಗಳು ಹಾಗೂ ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಕಠಿಣ ಶಬ್ದಗಳಲ್ಲಿ  ಖಂಡಿಸಿದ್ದಾರೆ.

ಅಲ್ಲದೆ, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲಾ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಅವರು ಆಗ್ರಹಪಡಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ಅಂಶವನ್ನು ಸೇರಿಸುವುದನ್ನು ಜೆಡಿಎಸ್ ಖಂಡಿಸುತ್ತದೆ. ನಾವು ಕೂಡ ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಬೆಂಬಲಿಸಿ ಆ ಕುಡಿಯುವ ನೀರಿನ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಜನರಿಗೆ ತಿಳಿಸುತ್ತೇವೆ ಎಂದು ಗುಡುಗಿದರು.

ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ

ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು, ಬಿಜೆಪಿ ನಾಯಕರಾದ  ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ.

ಅದಕ್ಕೂ ಮೊದಲು ಮೇಕೆದಾಟು ಕಟ್ಟಲು ಮ್ಯಾನಿಫೆಸ್ಟೋದಲ್ಲಿ ಹಾಕೋಣ ಹಾಗೂ ಆ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರಿಗೆ ಭರವಸೆ ನೀಡೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಕೂಡ ಮೇಕೆದಾಟು ಯೋಜನೆ ಬೆಂಬಲಿಸಿ ಪ್ರಣಾಳಿಕೆಯಲ್ಲಿ ಜನತೆಗೆ ಭರವಸೆ ನೀಡಲಿ ಎಂದು ಗೌಡರು ಆಗ್ರಹಪಡಿಸಿದರು.

ತಮಿಳುನಾಡು ಪರ ವಕೀಲ ಶೇಖರ್ ನಫಾರ್ಡ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸುವಾಗ ಮೇಕೆದಾಟು ಅಣೆಕಟ್ಟು ಕಟ್ಟಲಿ. ನಮ್ಮದೇನೂ ಅಭ್ಯಂತರ ಇಲ್ಲ ಎಂದು  ಹೇಳಿದ್ದಾರೆ. ಅದರಿಂದ ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಡಿಎಂಕೆ ಅವರು ಪ್ರಣಾಳಿಕೆಯಲ್ಲಿ ಮೇಕೆದಾಟು ವಿರೋಧಿ ನಿಲುವು ಪ್ರಕಟಿಸಿದಂತೆ, ಇವರು ಕೂಡ ಪ್ರಣಾಳಿಕೆಯಲ್ಲಿ ಮೇಕೆದಾಟು ಪರವಾಗಿ ನಿಲುವು ಪ್ರಕಟಿಸಲಿ ಎಂದರು.

ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲೇ ಮೇಕೆದಾಟು ಯೋಜನೆಗೆ ಅವಕಾಶ ಮಾಡಿದ್ದಾರೆ. ನಾವು ಮೂರು ಪಕ್ಷಗಳು ಒಟ್ಟುಗೂಡಿಯೇ ಹೋರಾಡಬೇಕು. ದೇವೇಗೌಡರು ಒಬ್ಬರು ಮಾತ್ರ ವೈಯಕ್ತಿಕವಾಗಿ ಹೆಸರು ತಗೋಬೇಕಿಲ್ಲ ಎಂದು ತಿಳಿಸಿದರು.

ಇದು ಕಾಂಗ್ರೆಸ್, ಬಿಜೆಪಿ, ಡಿಎಂಕೆ ಅಥವಾ ಯಾವ ಪಕ್ಷದ ಯೋಜನೆ ಅಲ್ಲ. ಜನಪರವಾದ ಯೋಜನೆ. ಕುಡಿಯುವ ನೀರಿಗಾಗಿ ಜನ ಸಮಸ್ಯೆಗೆ ಒಳಗಾಗಿದ್ದಾರೆ. ಕಾವೇರಿ ಕೊಳ್ಳದ ಒಂಬತ್ತು ಜಿಲ್ಲೆಗಳಲ್ಲಿ ಜಲ ಸಂಕಷ್ಟ ಎದುರಾಗಿದೆ. ನಾನು ಕೈ ಮುಗಿದು ಎಲ್ಲರಿಗೂ ಮನವಿ‌ ಮಾಡುತ್ತೇನೆ. ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆ ಆಗಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು ಎಂದು ಕೋರಿದರು.

ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಯೋಜನೆಯ ಬಗ್ಗೆ 2018ರಲ್ಲಿಯೆ ಕೇಂದ್ರ ಸರ್ಕಾರ ಈ ಯೋಜನೆಯ ಕಾರ್ಯ ಸಾಧ್ಯತೆಯ ವರದಿಯನ್ನು ಕೇಂದ್ರೀಯ ಜಲ ಆಯೋಗಕ್ಕೆ ಸಲ್ಲಿಸಿತ್ತು.

ಮೇಕೆದಾಟು ಯೋಜನೆ ಕಾರ್ಯಗತಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು

ಈ ವರದಿಯನ್ನು ಒಪ್ಪಿದ ನಂತರ ಸಮಗ್ರ ಯೋಜನಾ ವರದಿ (DPR) ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತ್ತು. ಅದರಂತೆ 2019ರಲ್ಲಿ ರಾಜ್ಯ ಸರ್ಕಾರ DPR ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿಗಳು ಅನುಮತಿ ಕೊಡಿಸಬೇಕು ಹಾಗೂ ಈ ಮೇಕೆದಾಟು ಯೋಜನೆ ವಿಷಯದಲ್ಲಿ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತ್ ಅವರಿಗೆ ವಿವರವಾಗಿ ಮೇಕೆದಾಟು ಯೋಜನೆ ಬಗ್ಗೆ ಪತ್ರ ಬರೆದಿದ್ದೇನೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಯಂತ್ರಿಸಬೇಕು ಎಂದು ಪತ್ರ ಬರೆದಿದ್ದೇನೆ ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು.

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

ರಾಜಕೀಯ ಬೇರೆಸಬೇಡಿ; ನೀರಿಲ್ಲದೆ ಜನರು ಮನೆ ಬಿಟ್ಟು ಹೋಗುತ್ತಿದ್ದಾರೆ. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಅನಗತ್ಯ. ಯಾರೂ ಇದರಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಅಂತಲ್ಲ. ತಮಿಳುನಾಡು ರಾಜ್ಯದವರು ಪ್ರತೀ ದಿ‌ನ ಕೋರ್ಟಿಗೆ ಪಿಟಿಷನ್ ಹಾಕ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು, ಬೆಂಗಳೂರು ನಗರವೂ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದೆ. ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ. ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗ್ತಿದ್ದಾರೆ ಎಂದು ರಾಜ್ಯದ ಜಲ ಸಂಕಷ್ಟವನ್ನು ಎಳೆಎಳೆಯಾಗಿ ಬಿಡಿಸಿಟ್ಟರು ಮಾಜಿ ಪ್ರಧಾನಿಗಳು.

ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು

ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ತಮಿಳುನಾಡಿನ ಜತೆ ಸಂಬಂಧ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ, ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಸ್ಥಾಪಿಸಿ ಒಳ್ಳೆಯ ಬಾಂಧವ್ಯಕ್ಕೆ ನಾಂದಿ ಹಾಡಿದ್ದರು.

ಅವರೂ ಚೆನ್ನೈಗೆ ಹೋಗಿ ಸರ್ವಜ್ಞರ ಪ್ರತಿಮೆಯನ್ನು ಅನಾವರಣ ಮಾಡಿದ್ದರು. ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಕರುಣಾನಿಧಿ ಅವರು ಬೆಂಗಳೂರಿಗೆ ಬಂದು ತಿರುವಳ್ಳುವರ್ ಅವರ ಪುತ್ತಳಿಯನ್ನು ಲೋಕಾರ್ಪಣೆ ಮಾಡಿದ್ದರು. ಎರಡೂ ರಾಜ್ಯಗಳ ಸಂಬಂಧದ ವಿಚಾರದಲ್ಲಿ ಅದೊಂದು ಒಳ್ಳೆಯ ಸಂದರ್ಭ ಎಂದು ದೇವೇಗೌಡರು ಉಲ್ಲೇಖ ಮಾಡಿದರು.

ಸಮಸ್ಯೆ ಬಂತು ಎಂದಾಕ್ಷಣ ಸಂಘರ್ಷಕ್ಕೆ ಇಳಿಯಬೇಕಿಲ್ಲ. ಮಾತುಕತೆ ಮೂಲಕವೂ ಬಗೆಹರಿಸಿಕೊಳ್ಳಬಹುದು. ಇದನ್ನು ನೆರೆ ರಾಜ್ಯ ಅರ್ಥ ಮಾಡಿಕೊಳ್ಳಬೇಕು. ಜನರು ಯಾವ ಸಂಕ್ಷಟದಲ್ಲಿ ಇದ್ದಾರೆ ಎಂಬುದನ್ನು ಅವರು ನೋಡಬೇಕು ಎಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದರು.

ಮೈತ್ರಿಯಿಂದ ಸಮಸ್ಯೆ ಇಲ್ಲ

ಬಿಜೆಪಿ ಜತೆ ಮೈತ್ರಿಯಿಂದ ನಮಗೆ ಸಮಸ್ಯೆ ಇಲ್ಲ. ನಮಗೆ ಮೂರು ಸೀಟು ಕೊಟ್ಟಿದ್ದಾರೆ. ನನ್ನನ್ನು, ಕುಮಾರಸ್ವಾಮಿ ಹಾಗೂ ಜಿಟಿ ದೇವೇಗೌಡರನ್ನು ತಾರಾ ಪ್ರಚಾರಕರನ್ನಾಗಿ (ಸ್ಟಾರ್ ಕ್ಯಾಂಪೇನರ್) ಆಗಿ ಪಟ್ಟಿಗೆ ಸೇರಿಸಿದ್ದಾರೆ. ಇವತ್ತಷ್ಟೇ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಡಾ.ಸಿ.ಎನ್. ಮಂಜುನಾಥ್ ಅವರ ಪರ ನಾವೆಲ್ಲಾ ಪ್ರಚಾರ ಮಾಡ್ತೀವಿ. ಮಂಡ್ಯದಲ್ಲಿ ಏನೂ ಸಮಸ್ಯೆ ಇಲ್ಲ ಎಂದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್, ಡಾ.ಸುಧಾಕರ್ ಶೆಟ್ಟಿ ಇತರರು  ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all partiesbjpBuildcongressDeve GowdaHdmanifestoMekedatu Reservoirstatesupportthundered
1 FacebookTwitterPinterestEmail
admin

previous post
ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ
next post
ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರು ಪೂರೈಕೆ

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ