Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿದ್ಯುತ್ ಕಡಿತವೂ ಇಲ್ಲ, ಲೋಡ್ ಶೆಡ್ಡಿಂಗೂ ಇಲ್ಲ

by admin March 27, 2024
written by admin March 27, 2024 0 comments 2 minutes read
1FacebookTwitterPinterestEmail
153

ಬೆಂಗಳೂರು:ಪ್ರಸಕ್ತ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದರೂ ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು, ಹಿಂದಿನ ವರ್ಷ ಇದೇ ಅವಧಿಯ ವಿದ್ಯುತ್ ಬಳಕೆ ಪ್ರಮಾಣ 300 ಮಿ.ಯೂ.ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15,300 ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17,000 ಮೆ.ವ್ಯಾ.ಗೆ ಏರಿದೆ.

ಬೇಸಿಗೆಯಲ್ಲಿ ವಿದ್ಯುತ್ ಅಭಾವ ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ವಿದ್ಯುತ್ ಕಡಿತವಾಗಲಿ, ಲೋಡ್ ಶೆಡ್ಡಿಂಗ್ ಆಗಲಿ ಮಾಡುವ ಪರಿಸ್ಥಿತಿ ಎದುರಾಗಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೊಂದರೆಯಾಗದಂತೆ ವಿದ್ಯುತ್ ಪೂರೈಕೆ

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಕೃಷಿ ಪಂಪ್‌ಸೆಟ್‌ಗಳಿಗೆ ಏಳು ತಾಸು ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ.

ಬೇಸಿಗೆ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ನಮಗೆ ಬೇಡಿಕೆ ಹೆಚ್ಚುವುದನ್ನು ಮನಗಂಡು ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಎಲ್ಲ ರೀತಿಯ ಸಿದ್ಧತೆ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಸರ್ಕಾರದ ಆದ್ಯತೆಯಾಗಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಪೂರೈಕೆಯಲ್ಲಿ ಸದ್ಯಕ್ಕೆ ಯಾವುದೇ ಬಿಕ್ಕಟ್ಟಿಲ್ಲ, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ವಿದ್ಯುತ್ ಬೇಡಿಕೆ ಪೂರೈಕೆಯಲ್ಲಿ ತೊಂದರೆಯಾಗದಂತೆ ಹಲವು ಕ್ರಮಕೈಗೊಳ್ಳಲಾಗಿದ್ದು, ಪ್ರಸಕ್ತ ಮಾರ್ಚ್, ಏಪ್ರಿಲ್ ಬೇಡಿಕೆಗೆ ಅನುಗುಣವಾಗಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ಉತ್ಪಾದನೆಗೆ ಒತ್ತು ನೀಡಲಾಗಿದೆ.

ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳು ರಾಜ್ಯಕ್ಕೆ ವಿದ್ಯುತ್ ಉತ್ಪಾದನೆಯ ಮುಖ್ಯ ಆಧಾರವಾಗಿದೆ, ಶಾಖೋತ್ಪನ್ನ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22,000 ಮಿ.ಯೂ. ಉತ್ಪಾದನೆಯಾಗಿದೆ, ಪ್ರಸ್ತುತ 3,250 ಮೆ.ವ್ಯಾ ಅಂದರೆ, ದಿನಕ್ಕೆ 75 ಮಿ.ಯೂ.ನಂತೆ ವಿದ್ಯುತ್ ಉತ್ಪಾದನೆ ಆಗುತ್ತಿದೆ.

ಮೈತ್ರಿ ಗೊಂದಲ ನಿವಾರಣೆಗೆ ಜಂಟಿ ಸಭೆ
ಎಚ್ಚರಿಕೆಯಿಂದ ನೀರು ಬಳಕೆ

ಮಳೆ ಅಭಾವದಿಂದ ಈ ವರ್ಷ ಬಹುತೇಕ ಜಲಾಶಯಗಳು ಕೇವಲ ಅರ್ಧದಷ್ಟು ತುಂಬಿದ ಕಾರಣ ನೀರನ್ನು ಸಂರಕ್ಷಿಸಿ, ಬಹಳ ಎಚ್ಚರಿಕೆಯಿಂದ ಬಳಸಲಾಗುತ್ತಿದೆ. ಇದರಿಂದಾಗಿ ಜಲ ವಿದ್ಯುತ್ ಉತ್ಪಾದನೆ ಸ್ವಲ್ಪ ಕುಂಠಿತಗೊಂಡಿದೆ, ಮಾರ್ಚ್ ಮತ್ತು ಏಪ್ರಿಲ್ ಹೆಚ್ಚಿನ ಬೇಡಿಕೆ ಅವಧಿಯಾಗಿದ್ದು, ದಿನಕ್ಕೆ 20 ಮಿ.ಯೂ. ಅಂದರೆ 1000 ಮೆ.ವ್ಯಾ. ವಿದ್ಯುತ್ ಅಗತ್ಯವಿದೆ.

ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳೊಂದಿಗೆ ದ್ವಿಪಕ್ಷೀಯ ವಿನಿಮಯ ಒಪ್ಪಂದ ಮಾಡಿಕೊಳ್ಳುವ ಮೂಲಕ ತೀವ್ರ ವಿದ್ಯುತ್ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಮುಂದಿನ ವರ್ಷ ಈ ರಾಜ್ಯಗಳಿಗೆ ವಿದ್ಯುತ್ ಹಿಂದಿರುಗಿಸುವ ಷರತ್ತಿನ ಮೇಲೆ ವಿನಿಮಯ ಆಧಾರದಲ್ಲಿ ಪ್ರತಿದಿನ ಸರಾಸರಿ 200 ಮೆ.ವ್ಯಾ. ವಿದ್ಯುತ್ ಪಡೆಯಲಾಗುತ್ತಿದೆ.

ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ, ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ, ಪ್ರಸ್ತುತ 500 ಮೆ.ವ್ಯಾ. ವಿದ್ಯುಚ್ಛಕ್ತಿಯನ್ನು ಖಾಸಗಿ ಉತ್ಪಾದಕರಿಂದ ಪಡೆಯಲಾಗುತ್ತಿದೆ.

ಬಹುತೇಕ ಖಾಸಗಿ ವಲಯದ ಸೌರ ಮತ್ತು ಪವನ ವಿದ್ಯುತ್ ಸ್ಥಾವರಗಳು ಸಾಮಾನ್ಯವಾಗಿ ’ಮಸ್ಟ್ ರನ್’ ಆಧಾರದ ಮೇಲೆ ನಡೆಯುತ್ತವೆ. ಹವಾಮಾನ ಬದಲಾವಣೆಗೆ ಅನುಗುಣವಾಗಿ ಈ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಆಗುತ್ತದೆ.

ಕೇಂದ್ರ ಗ್ರಿಡ್‌ನಿಂದ 302 ಮೆ.ವ್ಯಾ.

ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ತಿನ ಅಗತ್ಯ ಇದೆ ಎಂದು ಮನವರಿಕೆ ಮಾಡಿಕೊಟ್ಟು, ಕೇಂದ್ರ ಗ್ರಿಡ್‌ನಿಂದ ಈ ವರ್ಷವೂ 302 ಮೆ.ವ್ಯಾ. ವಿದ್ಯುತ್ ಪಡೆಯಲಾಗಿದೆ.

ಕಳೆದ ವರ್ಷ ಕೇಂದ್ರ ಗ್ರಿಡ್‌ಗೆ ಒಪ್ಪಿಸಲಾಗಿದ್ದ 150 ಮೆಗಾವ್ಯಾಟ್ ವಿದ್ಯುಚ್ಛಕ್ತಿಯನ್ನೂ ವಾಪಸ್ ಪಡೆದಿದ್ದೇವೆ. ಈ ಹೆಚ್ಚುವರಿ ವಿದ್ಯುತ್ ಡಿಸೆಂಬರ್ ತಿಂಗಳಿನಿಂದ ರಾಜ್ಯಕ್ಕೆ ಲಭ್ಯವಾಗಿದೆ.

ಅನಿರೀಕ್ಷಿತ ಅಥವಾ ಹಠಾತ್ ವಿದ್ಯುತ್ ಬೇಡಿಕೆ ಪೂರೈಸಲು, ಕೇಂದ್ರ ಸರ್ಕಾರವು ನಿಗದಿಪಡಿಸಿರುವಂಥ ವಿದ್ಯುತ್ ವಿನಿಮಯ ಕೇಂದ್ರದಿಂದ ಪಾರದರ್ಶಕವಾಗಿ ವಿದ್ಯುತ್ ಖರೀದಿಸಲಾಗುತ್ತಿದೆ.

ಮೇಲ್ವಿಚಾರಣೆಗೆ ಅಧಿಕಾರಿಗಳ ನೇಮಕ

ರಾಜ್ಯಾದ್ಯಂತ ಸಮರ್ಪಕ ವಿದ್ಯುತ್ ಸರಬರಾಜಿನ ಮೇಲ್ವಿಚಾರಣೆಗೆ ಪ್ರತಿ ಜಿಲ್ಲೆಗೆ ಮುಖ್ಯ ಇಂಜಿನಿಯರ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದಂತೆ ಎಸ್ಕಾಂಗಳು, ಕೆಪಿಟಿಸಿಎಲ್ ಹಾಗೂ ರಾಜ್ಯದ ಲೋಡ್ ಡಿಸ್ಪ್ಯಾಚ್ ಸೆಂಟರ್‌ಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳು ವಿದ್ಯುತ್ ಸರಬರಾಜಿನ ಬಗ್ಗೆ ನಿಗಾ ವಹಿಸಿದ್ದಾರೆ.

ಕಲ್ಲಿದ್ದಲು ಸಚಿವಾಲಯದಿಂದ ಹೆಚ್ಚುವರಿ ಕಲ್ಲಿದ್ದಲನ್ನು ಸಕಾಲದಲ್ಲಿ ಪಡೆಯಲಾಗಿದೆ ಮತ್ತು ಆಮದು ಮಾಡಿದ ಹೆಚ್ಚಿನ ವಿದೇಶಿ ಕಲ್ಲಿದ್ದಲನ್ನು ದೇಶೀಯ ಕಲ್ಲಿದ್ದಲಿನೊಂದಿಗೆ ಮಿಶ್ರಣ ಮಾಡಲಾಗುತ್ತಿದೆ.

370 ಮೆ.ವ್ಯಾ. ಸಾಮರ್ಥ್ಯದ ಯಲಹಂಕ ಅನಿಲ ಆಧಾರಿತ ವಿದ್ಯುತ್ ಸ್ಥಾವರದಲ್ಲಿ ಶೀಘ್ರದಲ್ಲೇ ಉತ್ಪಾದನೆ ಆರಂಭವಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all arrangements made to regulate power supplyelectricity - no cut - no load sheddingpower from central gridstudents need not worry
1 FacebookTwitterPinterestEmail
admin

previous post
ದಿನ ಭವಿಷ್ಯ :  ಬುಧವಾರ, 27 ಮಾರ್ಚ್ 2024
next post
ಮೊಳಗಿದ ಚುನಾವಣಾ ರಣಕಹಳೆ!

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ