ಪ್ರಚಾರ ಕಾರ್ಯಕ್ರಮ ರದ್ದು
ಬೆಂಗಳೂರು:ಹಾಸನ, ಕೋಲಾರ ಕಾಂಗ್ರೆಸ್‌ನಲ್ಲಿನ ಆಂತರಿಕ ಕಲಹದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಜಿಲ್ಲೆಗಳಲ್ಲಿ ಏರ್ಪಡಿಸಿದ್ದ ’ಪ್ರಜಾಧ್ವನಿ-2’ ಚುನಾವಣಾ ಪ್ರಚಾರ ಕಾರ್ಯವನ್ನು ರದ್ದುಪಡಿಸಿದ್ದಾರೆ.
ಮುಳುಬಾಗಿಲು ಕುರುಡುಮಲೆ ದೇವಸ್ತಾನದಿಂದ ಉಭಯ ನಾಯಕರು ನಾಳೆ ಬೆಳಗ್ಗೆ ಕೋಲಾರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಬೇಕಿತ್ತು, ಇದೇ ರೀತಿ ಶನಿವಾರ ಹಾಸನದ ಹೊಳೆನರಸೀಪುರದಿಂದ ಪ್ರಚಾರದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೆಪಿಸಿಸಿ ಕಾರ್ಯಾಧ್ಯಕ್ಷರ ಪ್ರಕಟಣೆ
ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಪತ್ರಿಕಾ ಹೇಳಿಕೆ ನೀಡಿ, ಎರಡು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದಿದ್ದಾರೆ.
ಸಚಿವ ಮುನಿಯಪ್ಪ ಹಾಗೂ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ರಮೇಶ್‌ಕುಮಾರ್ ನಡುವೆ ಅಭ್ಯರ್ಥಿ ಆಯ್ಕೆ ವಿಷಯದ ಜಗಳ ಬೀದಿಗೆ ಬಂದಿದೆ.
ಕುರ್ಚಿಗಳನ್ನು ಹಿಡಿದು ಬಡಿದಾಟ
ಇನ್ನು ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಸಮ್ಮುಖದಲ್ಲೇ ಕಾರ್ಯಕರ್ತರು ಕುರ್ಚಿಗಳನ್ನು ಎತ್ತಿ ಬಡಿದಾಡಿಕೊಂಡಿದ್ದರು.
ಹಾಸನ ಲೋಕಸಭಾ ಕ್ಷೇತ್ರಕ್ಕೆ ಮೊದಲ ಸುತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಪ್ರಕಟಿಸಲಾಗಿತ್ತು, ನಂತರದ ದಿನದಲ್ಲಿ ಕಾರ್ಯಕರ್ತರು ಹಾಗೂ ಉಸ್ತುವಾರಿ ಸಚಿವರ ನಡುವೆ ಈ ಗೊಂದಲದಿಂದ ಬೇಸತ್ತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ನಾಳೆಯಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ನಡೆಯಬೇಕಿದ್ದ ಪ್ರವಾಸವನ್ನು ರದ್ದು ಮಾಡಿದ್ದಾರೆ.
1 comment
[…] ರಾಜಕೀಯ […]