Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ

by admin March 29, 2024
written by admin March 29, 2024 0 comments 2 minutes read
2FacebookTwitterPinterestEmail
193

ಎಲ್ಲಿಯೂ ಮೈ ಮರೆಯೋದು ಬೇಡ: ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಬಂದಿದೆ. ನಾವೂ ಎಲ್ಲಿಯೂ ಮೈ ಮರೆಯೋದು ಬೇಡ. ಸೂರ್ಯಚಂದ್ರರು ಹುಟ್ಟೋದು ಎಷ್ಟು ಸತ್ಯವೋ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಮತ್ತೆ ಬರುವುದು ಅಷ್ಟೇ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನಗರದಲ್ಲಿ ನಡೆದ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಎರಡು ಪಕ್ಷಗಳ ಸಮನ್ವಯತೆಯನ್ನು ಬೂತ್ ಮಟ್ಟದಿಂದ ಬಲಪಡಿಸಿಕೊಳ್ಳಬೇಕು. ಇವತ್ತಿನ ಮೈತ್ರಿಗೆ ಈ ಚುನಾವಣೆ ಮೂಲಕ ಭದ್ರ ಬುನಾದಿ ಹಾಕಿದರೆ ಭವಿಷ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡಬಹುದು ಎಂದರು.

ಯಾರೂ ವೈಯಕ್ತಿಕ ಪ್ರತಿಷ್ಠೆಗೆ ಬೀಳುವುದು ಬೇಡ

ಕಾಂಗ್ರೆಸ್ ನವರಿಗೆ ಮೈತ್ರಿಯ ಬಗ್ಗೆ ನಡುಕ ಉಂಟಾಗಿದೆ. ಇಡೀ ರಾಜ್ಯದ ಜನ ನಮ್ಮ ಮೈತ್ರಿಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು ಎಂದು ಎಲ್ಲರೂ ಭಾವಿಸಿದ್ದಾರೆ. ಹೀಗಾಗಿ ನಮ್ಮಲ್ಲಿನ ವಿಶ್ವಾಸಕ್ಕೆ ಕಿಂಚಿತ್ತೂ ವ್ಯತ್ಯಾಸ ಬರಬಾರದು. ಏನೇ ಸಮಸ್ಯೆ ಇದ್ದರೂ, ನಮ್ಮ ಗಮನಕ್ಕೆ ತನ್ನಿ. ಯಾರೂ ವೈಯಕ್ತಿಕ ಪ್ರತಿಷ್ಠೆಗೆ ಬೀಳುವುದು ಬೇಡ. ನಮ್ಮ ಮನಸ್ಸು ಶುದ್ದ, ಮೈತ್ರಿಯು ಈ ಚುನಾವಣೆಗೆ ಮಾತ್ರವಲ್ಲ, ಇದು ಮುಂದೆಯೂ ಮುಂದುವರಿಸಿಕೊಂಡು ಹೋಗಬೇಕು. ಈ ಮೈತ್ರಿ ನಾವು ಅಧಿಕಾರಕ್ಕಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಎಂದು ಅವರು ಒತ್ತಿ ಹೇಳಿದರು.

2006 ರಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿಯಾದಾಗ ದೇಶಕ್ಕೆ ಮಾದರಿಯಾಗುವ ಸರ್ಕಾರ ಮಾಡಿದ್ದೇವೆ. ನಾನು ಮುಖಸ್ತುತಿಗೆ ಈ ಮಾತು ಹೇಳುತ್ತಿಲ್ಲ. ಹಿರಿಯರಾದ ಯಡಿಯೂರಪ್ಪ ಮತ್ತು ನಾನು ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ಆ 20 ತಿಂಗಳುಗಳ ಆಡಳಿತ ಜನರ ಮನಸ್ಸಿನಲ್ಲಿ ಈಗಲೂ ಇದೆ. ಈ ಲೋಕಸಭೆ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಪಡೆಯುವ ಮೂಲಕ ಅಂತಹ ಮಾದರಿ ಸರ್ಕಾರ ತರಲು ನಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಂದು ಇಂದು ಬಿಜೆಪಿಯ ಅನೇಕ ನಾಯಕರು ನನ್ನ ಮೇಲೆ ಅಪಾರವಾದ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ.  ಮೈತ್ರಿ ಸಂದರ್ಭದಲ್ಲಿ ದೇವೇಗೌಡರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದರಿಂದ ಸಮಸ್ಯೆಗಳು ಆದವು. ಆಗಲೇ ನನಗೆ ಬಿಜೆಪಿಯ ಜತೆ ದೀರ್ಘಾವಧಿ ಮೈತ್ರಿಯ ಉದ್ದೇಶ ಇತ್ತು. ಕಾರಣಾಂತರಗಳಿಂದ ಅದು ಸಾಧ್ಯವಾಗದಿರುವ ಬಗ್ಗೆ ನನಗೆ ಬೇಸರವಿದೆ ಎಂದು ಅವರು ಹೇಳಿದರು.

2018 ರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಬೇಕಿತ್ತು. ಆಗ ಮೈತ್ರಿ ಆಗಿದ್ದಿದ್ದರೆ ಬಹುಶಃ ಇಂದಿಗೂ ರಾಜ್ಯದಲ್ಲಿ ನಮ್ಮ ಮೈತ್ರಿ ಸರ್ಕಾರವೇ ಇರುತ್ತಿತ್ತು. ವಿಧಿಯಾಟ; ಅವತ್ತು ಏನೋ ನಡೆದು ಹೋಗಿದೆ ಎಂದು ಅವರು ನುಡಿದರು.

ಕಾಂಗ್ರೆಸ್ ಜನರ ದಿಕ್ಕು ತಪ್ಪಿಸುತ್ತಿದೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ. ಅದನ್ನೇ ನಾವು ಜನರ ಮನಸ್ಸಿಗೆ ಮುಟ್ಟುವಂತೆ ಹೇಳಬೇಕು. ನಿತ್ಯವೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಗ್ಯಾರಂಟಿಗಳನ್ನು ಕೊಟ್ಟು ಏನೋ ಸಾಧನೆ ಮಾಡಿದ್ದೇವೆ ಅಂತಾರೆ. ಐದು ವರ್ಷಗಳಲ್ಲಿ ಯಾವ ರಾಜ್ಯಕ್ಕೆ ಎಷ್ಟು ಹಣ ಹಂಚಿಕೆ ಮಾಡಬೇಕು ಎಂದು ಹಣಕಾಸು ಆಯೋಗ ತೀರ್ಮಾನ ಮಾಡಿರುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದರು.

ನುಡಿದಂತೆ ನಡೆದಿದ್ದೇವೆ ಎಂದು ಪ್ರತಿನಿತ್ಯವೂ  ಪುಟಗಟ್ಟಲೆ ಜಾಹೀರಾತು ಕೊಡುತ್ತಿದ್ದಾರೆ. ಜನರು ಬರಗಾಲದಿಂದ ತತ್ತರಿಸಿದ್ದರೆ, ಇವರು ಸಪ್ಲಿಮೆಂಟರಿ ಬಜೆಟ್ ನಲ್ಲಿ ಪ್ರಚಾರಕ್ಕೆಂದು 200 ಕೋಟಿ ರೂಪಾಯಿ ಅನುದಾನಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ. ಇದರ ಬಗ್ಗೆ ನಾವು ಜನರಿಗೆ ತಿಳಿಸಬೇಕು. ನಿಮ್ಮ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆಂದು ಜನರಿಗೇ ಹೇಳಬೇಕು. ಹಿಂದೆ ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಪಾದಯಾತ್ರೆ ಮಾಡಿದ್ದರು. ಮೇಕೆದಾಟು ಪಾದಯಾತ್ರೆಯೂ ಆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ ಯೋಜನೆಗಳಿಗೆ ಎಷ್ಟು ಹಣ ಕೊಟ್ಟರು? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕನ್ನಡಿಗರಿಗೆ ಅನ್ಯಾಯ ಅಂತಾರೆ, ಪಾಪ ನಿನ್ನೆ ಕಾಂಗ್ರೆಸ್ ಬಾವುಟ ಬಿಟ್ಟು ತಲೆಗೆಲ್ಲ ಕನ್ನಡ ಬಾವುಟ ಕಟ್ಟಿಕೊಂಡು ಹೋಗಿದ್ದನ್ನು ನೋಡಿದ್ದೇವೆ. ಕನ್ನಡಕ್ಕೆ ನಿರಂತರವಾಗಿ ಅನ್ಯಾಯ ಮಾಡಿದ ಇವರಿಗೆ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದ ಇವರಿಗೆ ಕನ್ನಡತನ ಎನ್ನುವುದು ಈಗ ನೆನಪಾಗಿದೆ ಎಂದು ಯಾರನ್ನು ಹೆಸರನ್ನು ಹೇಳದೆಯೇ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
allianceanywherebjpCongress partyforgetjdskumaraswamyshakes
2 FacebookTwitterPinterestEmail
admin

previous post
ದಿನ ಭವಿಷ್ಯ : ಶುಕ್ರವಾರ, 29 ಮಾರ್ಚ್ 2024
next post
ರಾಜ್ಯ-ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ