Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರಾಜ್ಯ-ಕೇಂದ್ರದಲ್ಲಿ ಎನ್ ಡಿಎಗೆ ಅಧಿಕಾರ

by admin March 29, 2024
written by admin March 29, 2024 0 comments 2 minutes read
2FacebookTwitterPinterestEmail
541
ಕರ್ನಾಟಕದಲ್ಲಿ ಕಾಂಗ್ರೆಸ್ ಹೆಸರಿಲ್ಲದಂತಾಗಲಿದೆ

ಬೆಂಗಳೂರು: ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಮೆರೆತು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಒಂದಾಗಿ ಹೋರಾಟ ಮಾಡಿ ಎಂದು ಬಿಜೆಪಿ-ಜೆಡಿಎಸ್ ಮುಖಂಡರು ತಮ್ಮ ಪಕ್ಷಗಳ ಕಾರ್ಯಕರ್ತರು ಮತ್ತು ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ನಾವು ಒಂದಾಗಿ ಮುಂದೆ ಹೋಗುವುದರಿಂದ  ಕರ್ನಾಟಕದಲ್ಲಿ ಕಾಂಗ್ರೆಸ್ ಹೇಳಲು ಹೆಸರಿಲ್ಲದಂತಾಗುತ್ತದೆ. ನಾವೇ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣೆ ಹಿಡಿಯುತ್ತೇವೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ನಂತರ ಉಭಯ ಪಕ್ಷಗಳು ಮುಖಂಡರು ಒಂದಾಗಿದ್ದರೂ, ಅಲ್ಲಲ್ಲಿಯೇ ಕಾರ್ಯಕರ್ತರ ನಡುವೆ ಅಪಸ್ವರ ಇತ್ತು. ಇದರ ಬೆನ್ನೆಲ್ಲೆ ಇಂದು ರಾಜ್ಯಾದ್ಯಂತ ಎರಡೂ ಪಕ್ಷಗಳ ಮುಖಂಡರ ಸಮನ್ವಯ ಸಭೆಯಲ್ಲಿ ನಾಯಕರುಗಳು ನರೇಂದ್ರ ಮೋದಿ ಪ್ರಧಾನಿಯಾಗಲು, ಎಲ್ಲಾ ಬಿನ್ನಾಭಿಪ್ರಾಯ ಮರೆತು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವ ಪಣತೊಟ್ಟಿದ್ದಾರೆ.

ಒಗ್ಗೂಡಿ ಹೋರಾಟ ಮಾಡಲು ಕಿವಿಮಾತು

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಲೋಕಸಭಾ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಜಿ.ಟಿ. ದೇವೇಗೌಡ ಭಾಗವಹಿಸಿ ತಮ್ಮ ಕಾರ್ಯಕರ್ತರು ಮತ್ತು ಮುಖಂಡರಿಗೆ ಒಗ್ಗೂಡಿ ಹೋರಾಟ ಮಾಡಲು ಸಲಹೆ ಮತ್ತು ಕಿವಿಮಾತು ಹೇಳಿದರು.

ಒಟ್ಟಾಗಿ ಹೋರಾಟ ಮಾಡುವುದರಿಂದ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಎನ್‌ಡಿಎ ಕೂಟದ ಪಕ್ಷಗಳ ಪರ ಅಲೆ ಇದೆ. ಈ ಅಲೆಯನ್ನು ನಾವು ಬಳಸಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ

ಇದೇ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ನಮ್ಮ ವಿರೋಧಿಗಳು ಬಲಿಷ್ಠರಿದ್ದಾರೆ. ನಾವು ಭೂತಕಾಲದ ಎಲ್ಲವನ್ನು ಮರೆಯದೆ ಇದ್ದರೆ 28 ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗದು ಎಂದು ಕಿವಿಮಾತು ಹೇಳಿದರು.

ಭಿನ್ನಮತ ದೂರ ಮಾಡಲು ಯಾವುದೇ ನಾಯಕರ ಮನೆಗೆ ಹೋಗಲು ಸಿದ್ಧ

ಕಾಂಗ್ರೆಸ್ ಪಕ್ಷವು ಹಣಬಲದಿಂದ ಗೆಲ್ಲಲು ಮುಂದಾಗಿದೆ. ಬೇರೆ ರಾಜ್ಯಗಳಿಗೂ ಅದು ಚುನಾವಣೆಗೆ ಹಣದ ನೆರವು ನೀಡುತ್ತಿದೆ ಎಂದು ಗಮನ ಸೆಳೆದ ಅವರು, ಇವೆಲ್ಲವನ್ನೂ ನಾವು ಗಮನದಲ್ಲಿ ಇಟ್ಟುಕೊಳ್ಳಬೇಕು. ಭಿನ್ನಮತ ದೂರ ಮಾಡಲು ಯಾವುದೇ ನಾಯಕರ ಮನೆಗೆ ಹೋಗಲು ಸಿದ್ಧ ಎಂದು ನುಡಿದರು.

ಎರಡೂ ಪಕ್ಷದವರು ಜೊತೆಯಾಗಿ ಕೆಲಸ ಮಾಡಿದರೆ ಎಲ್ಲ ಕ್ಷೇತ್ರಗಳಲ್ಲಿ ನಮಗೆ ಗೆಲ್ಲುವ ಸಾಮರ್ಥ್ಯವಿದೆ ಎಂದ ಅವರು, ಮೋದಿಯವರು ಮತ್ತು ತಮ್ಮ ನಡುವಿನ ಆತ್ಮೀಯ ಕ್ಷಣಗಳನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ಯಡಿಯೂರಪ್ಪ ಮಾತನಾಡಿ, ಈ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ 6 ಸಾವಿರ ರೂ. ಜೊತೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ರೂ. ಹೆಚ್ಚುವರಿಯಾಗಿ ಕೊಡುತ್ತಿದ್ದೆ. ಆ 4 ಸಾವಿರ ರೂ. ನಿಂತು ಹೋಗಿದೆ ಎಂದು ಟೀಕಿಸಿದರು. ಸರ್ಕಾರ ದಿವಾಳಿ ಆಗಿರುವುದಕ್ಕೆ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.

ನಾವೆಲ್ಲ ಒಂದೇ ತಾಯಿ ಮಕ್ಕಳಂತೆ

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ. ನಾವೆಲ್ಲ ಒಂದೇ ತಾಯಿ ಮಕ್ಕಳಂತೆ. ಬಿಜೆಪಿ- ಜೆಡಿಎಸ್ ಅಭ್ಯರ್ಥಿ ಯಾರೇ ಇರಲಿ; ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಪಣ ತೊಡಿ. ಆಗ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ನಮ್ಮ ಪ್ರಯತ್ನವನ್ನು ತಡೆಯಲು ಯಾರಿಂದಲೂ ಅಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶ- ವಿದೇಶಗಳಲ್ಲಿ ನಿರಂತರ ಪ್ರವಾಸ ಮಾಡುತ್ತಿರುವ, ಒಂದು ದಿನ ರಜೆ ಪಡೆಯದೆ ದೇಶದ ಅಭಿವೃದ್ಧಿಗೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತು ಈ ಹರೆಯದಲ್ಲೂ ಅತ್ಯಂತ ಉತ್ಸಾಹದಿಂದ ರಾಜ್ಯ ಪ್ರವಾಸ ಮಾಡಲು ಸಿದ್ಧರಾಗಿರುವ ಹೆಚ್.ಡಿ.ದೇವೇಗೌಡರು ನಮ್ಮೆಲ್ಲರಿಗೂ ಆದರ್ಶಪ್ರಾಯರು ಎಂದರಲ್ಲದೆ, ಕಾಯ, ವಾಚ, ಮನಸಾ ಕೆಲಸ ಮಾಡಿ 28 ಕ್ಕೆ 28 ಕ್ಷೇತ್ರ ಗೆಲ್ಲೋಣ ಎಂದು ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Centrecongresskarnatakanamelessndapower
2 FacebookTwitterPinterestEmail
admin

previous post
ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ
next post
545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆಅಂಕಗಳ ಅಂತಿಮ ಪಟ್ಟಿ ಪ್ರಕಟ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ