Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸುಮಲತಾ ಸಹಕಾರ ಕೋರಿದ ಕುಮಾರಸ್ವಾಮಿ

by admin March 31, 2024
written by admin March 31, 2024 0 comments 2 minutes read
1FacebookTwitterPinterestEmail
203

ಏಪ್ರಿಲ್ 4ಕ್ಕೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಸಂಸದರಾದ ಸುಮಲತಾ ಅವರ ಸಹಕಾರ ಕೋರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಕ್ಷೇತ್ರದ ಸಂಸದರಾದ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇವತ್ತಿನ ಮಾತುಕತೆ ಸೌಹಾರ್ದಯುತವಾಗಿ ನಡೆಯಿತು. ಮಾಜಿ ಸಚಿವ ದಿ. ಅಂಬರೀಷ್ ಅವರ ಮನೆ ನನಗೆ ಹೊಸದಲ್ಲ. ಹಲವಾರು ವರ್ಷಗಳ ಕಾಲ ಜತೆಗೂಡಿ ಬದುಕಿದವರು ನಾವು. ನಾನು ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಸುಮಲತಾ ಅವರ ಸಹಕಾರ ಕೋರಿದ್ದೇನೆ.

ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರಿಗೂ ಹಿತೈಷಿಗಳು ಮತ್ತು ಅಂಬರೀಶ್ ಅವರ ಅಭಿಮಾನಿಗಳು ಇದ್ದಾರೆ. ಶನಿವಾರ ಅವರು ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿ, ಏಪ್ರಿಲ್ 3ನೇ ತಾರೀಖು ಮಂಡ್ಯದಲ್ಲಿಯೇ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರೂ ಸುಮಲತಾ ಅವರ ಜತೆ ಚರ್ಚೆ ನಡೆಸಿದ್ದಾರೆ ಎಂದರು.

ಹೃದಯದ ಶಕ್ತಿ ಹೆಚ್ಚಳಕ್ಕೆ ಅಂಜಲಿ ಮುದ್ರೆ

ಎಲ್ಲಾ ವಿಚಾರಗಳ ಬಗ್ಗೆಯೂ ಮುಕ್ತವಾಗಿ ಚರ್ಚೆ ನಡೆಸಿದ್ದೇವೆ. ಅವರು ತಮ್ಮ ಮುಂದೆ ಯಾವ ಬೇಡಿಕೆಯನ್ನು ಇಟ್ಟಿಲ್ಲ. ಅವರು ಬಿಜೆಪಿ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಹೆಚ್ಡಿಕೆ

ಅಮೃತ ಕೊಟ್ಟವರಿಗೆ ವಿಷಾನ? ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪಾಪ.  ಡಿ.ಕೆ.ಶಿವಕುಮಾರ್ ವೈರಿಯಲ್ಲ ನನಗೆ. ಅವರು ನನ್ನ ದೊಡ್ಡಮಟ್ಟದ  ಹಿತೈಷಿಗಳು. ಅವರಷ್ಟು ಹಿತೈಷಿಗಳು ನನಗೆ ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು.

ಐದು ವರ್ಷ ಕಾಲ ಸರ್ಕಾರ ನಡೆಸಲಿ ಎಂದು 39 ಶಾಸಕರಿರುವ ಪಕ್ಷಕ್ಕೆ ಸಿಎಂ ಸ್ಥಾನ ಕೊಟ್ಟೆವು ಎಂದು ಅವರು ಪದೆ ಪದೇ ಹೇಳುತ್ತಿದ್ದಾರೆ.  ಐದು ವರ್ಷ ನಾಮಕಾವಸ್ತೆಯಾಗಿ ನಮಗೆ ಅಧಿಕಾರ ಕೊಟ್ಟರು. ಒಂದು ದಿನವೂ ನೆಮ್ಮದಿಯಾಗಿ ಸರ್ಕಾರ ನಡೆಸಲು ಬಿಡಲಿಲ್ಲ. ಎಷ್ಟು ಚಿತ್ರಹಿಂಸೆ ಕೊಟ್ಟರು ಎಂಬುದು ನನಗಷ್ಟೇ ಗೊತ್ತು. ಅದಕ್ಕೇ ಸಮ್ಮಿಶ್ರ ಸರ್ಕಾರ ಹೋಗಿದ್ದು, ನನ್ನಿಂದ ಆ ಸರ್ಕಾರ ಹೋಗಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ನನ್ನನ್ನು ಮುಖ್ಯಮಂತ್ರಿ ಮಾಡಿಕೊಂಡು ಯಾವ ರೀತಿ ನಡೆಸಿಕೊಂಡರು? ಎಷ್ಟು ಅಪಮಾನ ಮಾಡಿದರು? ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಚಳಿ, ಮಳೆ, ಗಾಳಿ ಯಾವುದನ್ನೂ ಲೆಕ್ಕಿಸದೇ ನನ್ನ ಜೊತೆ ನಿಂತುಕೊಂಡರು ನೋಡಿ. ಅವರು ನನಗೆ ಸಹಕಾರ ನೀಡಿದ್ದರಲ್ಲ, ಅದಕ್ಕೆ ಹದಿನಾಲ್ಕು ತಿಂಗಳಿಗೆ ಸರ್ಕಾರ ಹೋಗಿದ್ದು.

ಸರ್ಕಾರ ಬಂದ ಆರಂಭದಲ್ಲಿಯೇ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೋಳಿ ಘರ್ಷಣೆ ಮಾಡಿಕೊಂಡರಲ್ಲ, ಅದೇನು ಸರ್ಕಾರ ಉಳಿಸೋದಕ್ಕೆ ಘರ್ಷಣೆ ಮಾಡಿದರಾ? ಯಾರು ಶತ್ರು, ಯಾರು ಹಿತೈಷಿ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
April 4cooperationkumaraswamymandyaNominationsoughtSubmissionSumalatha
1 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 31 ಮಾರ್ಚ್ 2024
next post
ದಿನ ಭವಿಷ್ಯ : ಸೋಮವಾರ, 01 ಏಪ್ರಿಲ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ