Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುರ್ಚಿಗಾಗಿ ಸಿಎಂ-ಡಿಸಿಎಂ ಹೋರಾಟ!

by admin April 2, 2024
written by admin April 2, 2024 0 comments 2 minutes read
1FacebookTwitterPinterestEmail
215

ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸಚಿವ ಅಮಿತ್ ಷಾ ತರಾಟೆ

ಬೆಂಗಳೂರು:ಕರ್ನಾಟಕದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಹೋರಾಟ ನಡೆಸಿದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಹೋರಾಟ ಮಾಡಿಕೊಂಡು ಜನರನ್ನು ಮರೆತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಇಲ್ಲಿನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಪ್ರತಿನಿತ್ಯ ಅಧಿಕಾರ ಉಳಿಸಿಕೊಳ್ಳಲು ತಲ್ಲೀನರಾಗುತ್ತಾರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಗಾದಿ ಹೇಗೆ ಪಡೆಯಬೇಕೆಂಬ ಚಿಂತನೆಯಲ್ಲಿರುತ್ತಾರೆ, ಇಂತಹವರು ಒಳ್ಳೆ ಸರ್ಕಾರ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಬರ ತಾಂಡವವಾಡುತ್ತಿದೆ, ಜನ ಸಂಕಷ್ಟದಲ್ಲಿ ಇದ್ದಾರೆ, ಅತ್ತ ಗಮನ ಕೊಡದ ಈ ನಾಯಕರು ಕುರ್ಚಿಯನ್ನು ಒಬ್ಬರು ಮೇಲೆ ಹಿಡಿದುಕೊಂಡರೆ, ಇನ್ನೊಬ್ಬರು ಕೆಳಗೆ ಹಿಡಿದುಕೊಂಡಿದ್ದಾರೆ, ಇವರು ಜನರ ಕಷ್ಟಕ್ಕೆ ಸ್ಪಂದಿಸುತ್ತಾರಾ ಎಂದರು.

ಅಭಿವೃದ್ಧಿ ಕಡೆ ಗಮನವೇ ಇಲ್ಲ

ಬೆಳಗಾದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವುದನ್ನು ಬಿಟ್ಟರೆ ಅಭಿವೃದ್ಧಿ ಕಡೆ ಗಮನವೇ ಹರಿಸುವುದಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಭ್ರಚ್ಟಾಚಾರ ತಾಂಡವವಾಡುತ್ತಿದೆ, ಇದನ್ನು ಕರ್ನಾಟಕದ ಜನತೆ ಸಹಿಸುವುದಿಲ್ಲ, ಒಬ್ಬರು ಸಂಸದರ ಮನೆಯಲ್ಲಿ ಮೂರೂವರೆ ಕೋಟಿ ರೂ. ಸಿಕ್ಕರೆ, ಇನ್ನೊಬ್ಬರ ಮನೆಯಲ್ಲಿ 51 ಕೋಟಿ ರೂ. ಸಿಕ್ಕಿದೆ, ಇಷ್ಟಾದರೂ ಶಿವಕುಮಾರ್ ಅವರಿಗೆ ಏನೂ ಅನಿಸುವುದೇ ಇಲ್ಲ, ಭ್ರಷ್ಟರನ್ನು ಜೈಲಿಗೆ ಕಳುಹಿಸದೆ ಮನೆಯಲ್ಲಿ ಇಟ್ಟುಕೊಳ್ಳಬೇಕೆ ಎಂದರು.

ಅರಮನೆ ಆವರಣದಲ್ಲಿ ಐದು ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಭಾಷಣದ ಉದ್ದಕ್ಕೂ ಕಾಂಗ್ರೆಸ್ ಆಡಳಿತದಲ್ಲಿನ ಭ್ರಷ್ಟಾಚಾರ ಹಾಗೂ ಕುರ್ಚಿಗಾಗಿ ಕಚ್ಚಾಡುವುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ಮನಮೋಹನ್ ಸಿಂಗ್ ನೇತೃತ್ವದ 10 ವರ್ಷಗಳ ಆಡಳಿತದಲ್ಲಿ ಕರ್ನಾಟಕಕ್ಕೆ 1.42 ಲಕ್ಷ ಕೋಟಿ ರೂ. ನೀಡಿದರೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 4.91 ಲಕ್ಷ ಕೋಟಿ ರೂ. ನೀಡಿದೆ.

ಬೆಂಗಳೂರಿಗೆ ಕೊಡುಗೆ ನೀಡಿದ್ದೇವೆ

ನಾವು ಬೆಂಗಳೂರಿನ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದೇವೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೊ ರೈಲು, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ನಮ್ಮ ಸರ್ಕಾರ ಮಾಡಿದೆ ಎಂದರು.

ಕರ್ನಾಟಕದಲ್ಲಿ 3.5 ಕೋಟಿ ಜನ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿದ್ದಾರೆ, ಈ ಅಂಕಿ-ಅಂಶಗಳನ್ನು ಮುಚ್ಚಿಟ್ಟು ಸಿದ್ದರಾಮಯ್ಯ ಕೇಂದ್ರದ ಮೇಲೆ ಗೂಬೆ ಕೂರಿಸಿ ತಮ್ಮ ಸರ್ಕಾರದ ಹುಳುಕುಗಳನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ.

ಇವರು ಅಧಿಕಾರಕ್ಕೆ ಬಂದ ನಂತರ ಹತ್ತು ಹಲವು ಸಮಸ್ಯೆಗಳನ್ನು ರಾಜ್ಯದ ಜನತೆ ಎದುರಿಸುತ್ತಿದ್ದಾರೆ, ಯಾವ ಸಮಸ್ಯೆಯನ್ನೂ ಪರಿಹರಿಸಿಲ್ಲ, ಕುರ್ಚಿ ಉಳಿವಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಮಿತ್ ಷಾ ಟೀಕಿಸಿದರು.

ಕೇಂದ್ರ ಸರ್ಕಾರ ದಲಿತರು, ಬಡವರು, ಆದಿವಾಸಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ, 2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ಶೇಕಡ 43ರಷ್ಟು ಮತ ನೀಡಿದೆ, 2019ರಲ್ಲಿ ಶೇಕಡ 51ರಷ್ಟು ಮತ ನೀಡಿದ್ದು, ಈ ಬಾರಿ ಶೇಕಡ 60ರಷ್ಟು ಮತ ನೀಡುವ ಮೂಲಕ ಎಲ್ಲಾ 28 ಕ್ಷೇತ್ರಗಳಲ್ಲೂ ಎನ್‌ಡಿಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಮೋದಿ ಅವರ ’ಈ ಬಾರಿ 400 ಮೀರಿ’ ಗುರಿ ಮುಟ್ಟಲು ಸಹಕರಿಸಿ ಎಂದು ಮನವಿ ಮಾಡಿದರು.

4 ತಿಂಗಳಾದರೂ ಬರ ಪರಿಹಾರ ನೀಡಿಲ್ಲ
12 ಲಕ್ಷ ಕೋಟಿ ರೂ. ಭ್ರಷ್ಟಾಚಾರ

ಕೇಂದ್ರದಲ್ಲಿ ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿತ್ತು, ಗುಜರಾತ್‌ನ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ 23 ವರ್ಷಗಳ ಆಡಳಿತ ಕಾಲದಲ್ಲಿ 25 ಪೈಸೆ ಭ್ರಷ್ಟಾಚಾರ ಆರೋಪವನ್ನೂ ಹೊರಿಸಲು ಸಾಧ್ಯವಾಗಲಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಐಎನ್‌ಡಿಐಎ ನಡುವೆ ಭ್ರಷ್ಟಾಚಾರ ವಿರೋಧಿಗಳು ಮತ್ತು ಭ್ರಷ್ಟಾಚಾರಿಗಳ ನಡುವೆ ಹೋರಾಟ ನಡೆದಿದೆ.

80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ

ಕೇಂದ್ರದ ಮೋದಿ ಸರ್ಕಾರ, 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲೆತ್ತಿದೆ, 80 ಕೋಟಿ ಜನರಿಗೆ ಉಚಿತವಾಗಿ ಆಹಾರಧಾನ್ಯ ನೀಡುತ್ತಿದೆ, 12 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ, ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಾಣ ಮಾಡಿದೆ, 10 ಕೋಟಿ ಮಹಿಳೆಯರಿಗೆ ಉಚಿತ ಅಡುಗೆ ಅನಿಲ (ಎಲ್‌ಪಿಜಿ) ಸಂಪರ್ಕ ಒದಗಿಸಿದೆ, 14 ಕೋಟಿ ಮನೆಗಳಿಗೆ ಕೊಳಾಯಿ ನೀರು ತಲುಪಿಸಿದೆ, ದೇಶದ 60 ಕೋಟಿ ಜನರು ಆಯಷ್ಮಾನ್ ಆರೋಗ್ಯ ವಿಮೆಯಡಿ ವರ್ಷಕ್ಕೆ ಐದು ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ಲಾಭ ಪಡೆಯುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕೇಂದ್ರದಲ್ಲಿನ ಮೋದಿ ಸರ್ಕಾರ ವಿಕಸಿತ ಭಾರತಕ್ಕಾಗಿ ಕಳೆದ 10 ವರ್ಷಗಳಿಂದ ಶ್ರಮಿಸುತ್ತಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯ ತಲುಪಿಸುವಲ್ಲಿ ಶ್ರಮ ವಹಿಸಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ, ದಲಿತರು, ರೈತರು, ಬಡವರಿಗೆ ಅನ್ಯಾಯ ಮಾಡುತ್ತಿದೆ, ಮತದಾರರು ಶಾಪ ಹಾಕುತ್ತಿದ್ದಾರೆ, ಇದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm-dcm fighting for powerno service to people
1 FacebookTwitterPinterestEmail
admin

previous post
4 ತಿಂಗಳಾದರೂ ಬರ ಪರಿಹಾರ ನೀಡಿಲ್ಲ
next post
ಒಳ ಒಪ್ಪಂದದ ರಾಜಕಾರಣ:  ಅಮಿತ್ ಶಾ ಎಚ್ಚರಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ