Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಒಳ ಒಪ್ಪಂದದ ರಾಜಕಾರಣ:  ಅಮಿತ್ ಶಾ ಎಚ್ಚರಿಕೆ

by admin April 2, 2024
written by admin April 2, 2024 0 comments 2 minutes read
1FacebookTwitterPinterestEmail
213

ಸ್ವಪ್ರತಿಷ್ಠೆ ಬದಿಗಿರಿಸಿ ಒಗ್ಗಟ್ಟಿನಿಂದ ಕೆಲಸ ಮಾಡಿ

ಬೆಂಗಳೂರು: ಒಳ ಒಪ್ಪಂದದ ರಾಜಕಾರಣನ್ನು ದೂರವಿರಿಸಿ, ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಲು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಬಿಜೆಪಿ ನಾಯಕರಿಗೆ ತಾಕೀತು ಮತ್ತು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಕಳೆದ ರಾತ್ರಿ ನಗರಕ್ಕೆ ಧಾವಿಸಿದ ಅಮಿತ್ ಶಾ, ಇಡೀ ದಿನ ಪ್ರತ್ಯೇಕ ಸಭೆಗಳನ್ನು ನಡೆಸಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ನೀಡಿದ್ದಾರೆ.

ನಗರದ ಪಂಚತಾರಾ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆಯಲ್ಲೂ, ಎನ್‌ಡಿಎ ಕೂಟದ ಮಿತ್ರ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಮ್ಮ ಗುರಿ ತಲುಪುವುದು ಸುಲಭವಾಗುತ್ತದೆ ಎಂದಿದ್ದಾರೆ. 

ಕುರ್ಚಿಗಾಗಿ ಸಿಎಂ-ಡಿಸಿಎಂ ಹೋರಾಟ!

ಕರ್ನಾಟಕದಲ್ಲಿ ಮೈತ್ರಿ ಕೂಟಕ್ಕೆ ಒಳ್ಳೆಯ ವಾತಾವರಣವಿದೆ.ನಮ್ಮ ಹೊಂದಾಣಿಕೆಯನ್ನು ಜನತೆ ಸ್ವಾಗತಿಸಿದ್ದಾರೆ. ನೀವು ಇದರ ಲಾಭ ಪಡೆದುಕೊಳ್ಳಿ ಎಂದು ಉಭಯ ಪಕ್ಷಗಳ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ರಾಜ್ಯಮಟ್ಟದಲ್ಲಿ ಸಮನ್ವಯತೆ ಇರುವಂತೆಯೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಮನ್ವಯತೆ ಕಾಪಾಡಿಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನೀವು ರೂವಾರಿಯಾಗಿ.

ನಿಮ್ಮ ಸ್ವಪ್ರತಿಷ್ಠೆಗಳು ಏನೇ ಇರಲಿ ಅವುಗಳನ್ನು ಬದಿಗಿರಿಸಿ, ಕೇಂದ್ರದಲ್ಲಿ ಮತ್ತೆ ಎನ್‌ಡಿಎ ಆಡಳಿತವನ್ನು ತರಲು ಶ್ರಮಿಸಿ, ನಿಮಗೆ ಒಳ್ಳೆಯ ಭವಿಷ್ಯವಿದೆ ಎಂದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಡೆದಿರುವ ವಿದ್ಯಮಾನಗಳ ಪೂರ್ಣ ಅರಿವಿದೆ. ಅದು ಲೋಕಸಭಾ ಚುನಾವಣೆಯಲ್ಲೂ ಮರುಕಳಿಸಬಾರದು. ನಾನು ಈ ಬಗ್ಗೆ ಹೆಚ್ಚಿನ ಚರ್ಚೆ ಬಯಸುವುದಿಲ್ಲ. ಮುಂದೆ ದೊಡ್ಡ ಸಮರ ಇದೆ. ಅದನ್ನು ಎದುರಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ.

ಕೆಲವು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ನಂತರದ ಗೊಂದಲ ಮತ್ತು ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ಅವರು ನಿಮ್ಮ ಮುಂದೆಯೇ ಎಲ್ಲವನ್ನೂ ಬಿಡಿಸಿಟ್ಟಿದ್ದಾರೆ. ಆ ಸಮಸ್ಯೆಗಳನ್ನು ನೀವೂ ಬಗೆಹರಿಸಿಕೊಳ್ಳಿ ನಾನೂ ಬಗೆಹರಿಸುತ್ತೇನೆ, ಯಾವುದನ್ನೂ ಎಳೆಯುವುದು ಬೇಡ.

4 ತಿಂಗಳಾದರೂ ಬರ ಪರಿಹಾರ ನೀಡಿಲ್ಲ

ಗೆಲುವಿನ ಮಾನದಂಡ ಇಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದನ್ನು ಎಲ್ಲರೂ ಗೌರವಿಸಬೇಕು. ಇದನ್ನೇ ಕಾರಣವಾಗಿಟ್ಟುಕೊಂಡು ಕಾಲೆಳೆಯುವುದು ಬೇಡ. ಒಂದು ವೇಳೆ ಇದನ್ನೇ ಮುಂದು ಮಾಡಿಕೊಂಡು ಹೋದರೆ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕದ ಮಟ್ಟಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಉಭಯ ಪಕ್ಷಗಳಿಗೂ ಲಾಭ ಬಂದಿದೆ. ಅದನ್ನು ಮತಗಳಾಗಿ ಪರಿವರ್ತಿಸುವ ಕಾರ್ಯ ನಿಮ್ಮ ಕೈಯಲ್ಲಿದೆ ಎಂದಿದ್ದಾರೆ.

ರಾಜ್ಯದ ರಾಜಕೀಯ ಪರಿಸ್ಥಿತಿ ಮತ್ತು ಮೈತ್ರಿಯಲ್ಲಿನ ಸಮಸ್ಯೆಗಳ ಬಗ್ಗೆ ಕುಮಾರಸ್ವಾಮಿ ನಿರಂತರವಾಗಿ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಅವರು ಯಾವುದನ್ನೂ ಮುಚ್ಚಿಡದೆ ಎಲ್ಲಾ ಮಾಹಿತಿ ನೀಡುತ್ತಿದ್ದು, ಇದು ನಮಗೆ ಸಹಕಾರಿಯಾಗಿದೆ ಎಂದು ಷಾ ಸಭೆಗೆ ತಿಳಿಸಿದ್ದಾರೆ.

ಅಮಿತ್ ಷಾ ಮಾತನಾಡುವುದಕ್ಕೂ ಮುನ್ನಾ ಕುಮಾರಸ್ವಾಮಿ, ರಾಜ್ಯದ 28 ಕ್ಷೇತ್ರಗಳು ಅದರಲ್ಲೂ ಮೊದಲ ಹಂತದ ಚುನಾವಣೆ ಎದುರಿಸುತ್ತಿರುವ 14 ಕ್ಷೇತ್ರಗಳ ಚಿತ್ರಣವನ್ನು ಕೇಂದ್ರ ಸಚಿವರ ಮುಂದಿಟ್ಟರು.

ನಾವು ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರಿದ ನಂತರ ರಾಜ್ಯ ಬಿಜೆಪಿ ನಾಯಕರು ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ.  ಅದರಲ್ಲೂ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ನಮ್ಮೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಿದ್ದೇವೆ.

ಚಿಕ್ಕಬಳ್ಳಾಪುರ, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಇನ್ನೂ ಸಮಸ್ಯೆ ಇದೆ. ರಾಜ್ಯ ನಾಯಕರು ಇದನ್ನು ಬಗೆಹರಿಸಲು ನಿರಂತರ ಪ್ರಯತ್ನ ಮಾಡಿದ್ದಾರೆ. ಇದನ್ನೂ ಮೀರಿದ ವಿಷಯದಲ್ಲಿ ಮಧ್ಯೆ ಪ್ರವೇಶ ಮಾಡಿ ಬಗೆಹರಿಸಬೇಕೆಂದು ಷಾ ಅವರಲ್ಲಿ ಮವನಿ ಮಾಡಿದರು.

ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ನಡೆಸಿದ ಸಮನ್ವಯ ಸಭೆಗಳು ಭಾರೀ ಯಶ್ವಸ್ವಿಯಾಗಿವೆ. ಮುಂದೆಯೂ ಪ್ರಯತ್ನಿಸುತ್ತೇವೆ ಎನ್ನುತ್ತಿದ್ದಂತೆ ಷಾ ಮಧ್ಯೆ ಪ್ರತವೇಶಿಸಿ, ವಿಧಾನಸಭಾ ಮಟ್ಟದಲ್ಲೂ ಇಂತಹ ಸಭೆಗಳು ನಡೆಯಬೇಕು ಎಂದರು.

ಉಭಯ ಪಕ್ಷಗಳ ಕೋರ್ ಕಮಿಟಿ ಸಭೆ ನಂತರ ಅಮಿತ್ ಷಾ ಅವರು ಕುಮಾರಸ್ವಾಮಿ ಅವರನ್ನು ಹೋಟೆಲ್‌ನ ತಮ್ಮ ಕೊಠಡಿಗೆ ಕರೆದುಕೊಂಡು ಹೋಗಿ ಕಾಂಗ್ರೆಸ್ ಚುನಾವಣಾ ತಂತ್ರಗಾರಿಕೆ ಬಗ್ಗೆ ಮಾಹಿತಿ ಪಡೆದರು ಎನ್ನಲಾಗಿದೆ.

ಗೆಲುವಿಗಾಗಿ ಕಾಂಗ್ರೆಸ್ ನಡೆಸುತ್ತಿರುವ ರಾಜಕೀಯ ತಂತ್ರಗಾರಿಕೆ, ಎಲ್ಲಿ ಆ ಪಕ್ಷ ಬಲಾಢ್ಯವಾಗಿದೆ ಅಲ್ಲಿ ನಾವು ಯಾವ ರೀತಿ ತಂತ್ರಗಾರಿಕೆ ಬಳಸಿ ಬಲಾಢ್ಯರಾಗಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ.

ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಮತದಾರರನ್ನು ಹೇಗೆ ಓಲೈಸುತ್ತಿದೆ ಎಂಬುದನ್ನು ಕುಮಾರಸ್ವಾಮಿ ವಿವರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit Shah cautionsbjp-jds meetingbsyhdkLok Sabha electionsno insider agreementpoliticswork together
1 FacebookTwitterPinterestEmail
admin

previous post
ಕುರ್ಚಿಗಾಗಿ ಸಿಎಂ-ಡಿಸಿಎಂ ಹೋರಾಟ!
next post
ಗೊಂಬೆನಾಡು ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಷೋ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ