Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿಗಾಗಿ ಹಿಂದೆ ಸರಿದ ಸುಮಲತಾ

by admin April 3, 2024
written by admin April 3, 2024 0 comments 2 minutes read
3FacebookTwitterPinterestEmail
437

ಬೆಂಗಳೂರು:ಲೋಕಸಭಾ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿರುವ ಸಂಸದೆ ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಎನ್‌ಡಿಎ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ.

ಚುನಾವಣಾ ಕಣಕ್ಕಿಳಿಯುವ ಬಗ್ಗೆ ಕಳೆದ ಆರು ತಿಂಗಳಿಂದ ಗೊಂದಲದಲ್ಲಿದ್ದ ಸುಮಲತಾ ದೆಹಲಿ ಬಿಜೆಪಿ ನಾಯಕರ ಮಾತಿಗೆ ಮಣಿದು ಈ ತೀರ್ಮಾನ ಕೈಗೊಂಡಿದ್ದಾರೆ.

ಬಿಜೆಪಿಯನ್ನು ಬೆಂಬಲಿಸುತ್ತೇನೆ

ಸ್ಪರ್ಧಾ ಕಣದಿಂದ ಹಿಂದೆ ಸರಿಯುವುದಕ್ಕೂ ಮುನ್ನ ತಮ್ಮ ಆಪ್ತರು ಮತ್ತು ಬೆಂಬಲಿಗರ ಸಭೆ ನಡೆಸಿ ಈ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಹಾಗೆಂದು ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬರ್ಥ ಅಲ್ಲ, ಸದ್ಯದ ಪರಿಸ್ಥಿತಿಯಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ.

ಕಳೆದ ಚುನಾವಣೆಯಲ್ಲಿ ಮಂಡ್ಯದ ಮತದಾರರು ನನ್ನನ್ನು ಪಕ್ಷೇತರ ಅಭ್ಯರ್ಥಿಯಾಗಿ ಸಂಸತ್‌ಗೆ ಕಳುಹಿಸಿಕೊಟ್ಟರು, ಅವರಿಗೆ ನಾನು ಋಣಿಯಾಗಿದ್ದೇನೆ, ನಾನು ಎಂದಿಗೂ ಈ ಜಿಲ್ಲೆಯಲ್ಲೇ ರಾಜಕಾರಣ ಮಾಡುವವಳು.

ಪ್ರಧಾನಿ ಮೋದಿ ಅವರಿಗೆ ಚಿರಋಣಿ

ನಾನು ಪಕ್ಷೇತರರಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಕ್ಷೇತ್ರಕ್ಕೆ 4.000 ಕೋಟಿ ರೂ. ಅನುದಾನ ನೀಡಿದ್ದಾರೆ, ಅವರಿಗೆ ನಾನು ಚಿರಋಣಿ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದೆ, ಮುಂದೆ ಆ ಪಕ್ಷದ ಜೊತೆ ಇರುತ್ತೇನೆ ಎನ್ನುವ ಮೂಲಕ ಬಿಜೆಪಿ ಸೇರುವ ಮುನ್ಸೂಚನೆ ನೀಡಿದರು.

ಇದು ನನ್ನ ಕಾರ್ಯಕರ್ತರ ಹಾಗೂ ಮಂಡ್ಯ ಜಿಲ್ಲೆಯ ಜನತೆಯ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರವಾಗಿದೆ. ಮಂಡ್ಯವೇ ನನ್ನ ಕರ್ಮ ಭೂಮಿ. ನನ್ನ ರಾಜಕಾರಣ ಮಂಡ್ಯ ಬಿಟ್ಟು ಒಂದಿಂಚೂ ಸಾಗದು ಎಂದರು.

ಬದಲಾದ ಸನ್ನಿವೇಶ ಹಾಗೂ ಪರಿಸ್ಥಿತಿಯಲ್ಲಿ ನಾನು ಈ ತೀರ್ಮಾನವನ್ನು ತೆಗೆದಕೊಂಡಿದ್ದೇನೆ. ಪಕ್ಷೇತರವಾಗಿಯೂ ನಾನು ಸ್ಪರ್ಧೆ ಮಾಡಬಹುದಿತ್ತು, ಆದರೆ, ಇದರಿಂದ ಯಾರಿಗೆ ಲಾಭ ಆಗುತ್ತದೆ ಎಂಬುದು ಮುಖ್ಯ ಪ್ರಶ್ನೆ ಆಗುತ್ತದೆ ಎಂದರು.

ಟಿಪಿಕಲ್ ರಾಜಕಾರಣಿ ಅಲ್ಲ

ನಾನು ಎಲ್ಲರಂತೆ ಟಿಪಿಕಲ್ ರಾಜಕಾರಣಿ ಅಲ್ಲ. ನನಗೆ ಬಿಜೆಪಿ ಹೈಕಮಾಂಡ್ ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸಾಕಷ್ಟು ಅವಕಾಶ ನೀಡಿತ್ತು, ಆದರೆ, ನನಗೆ ಮಂಡ್ಯ ಬಿಟ್ಟು ರಾಜಕಾರಣ ಮಾಡಲು ಆಗುವುದಿಲ್ಲ, ನಿಮ್ಮನ್ನು ಹಾಗೂ ಅಂಬರೀಶ್ ಅವರ ಕನಸನ್ನು ಬಿಟ್ಟು ಹೋದರೆ ಯಾರೂ ಮೆಚ್ಚಲಾರರು, ನಾನು ಮಂಡ್ಯದಲ್ಲಿಯೇ ಇರುತ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದರು.

ಇಂದು ನಾನು ಸಂಸದೆ, ಆದರೆ, ನಾಳೆ ನನ್ನ ಜಾಗಕ್ಕೆ ಇನ್ನೊಬ್ಬರು ಬರುತ್ತಾರೆ, ಕೊನೆಯವರೆಗೂ ನಾನು ಅಂಬರೀಶ್ ಪತ್ನಿ ಎಂಬುದನ್ನು ಯಾರಿಂದಲೂ ಕಿತ್ತುಕೊಳ್ಳಲಾಗದು.

ನನ್ನ ಮುಂದಿನ ದಾರಿ ಏನೆಂಬುದನ್ನು ನೋಡಿದೆ, ಸ್ವತಂತ್ರ ಸ್ಪರ್ಧೆ ಮಾಡುವುದು ಸೂಕ್ತ ಅಲ್ಲ ಎನಿಸಿತು, ಕಾಂಗ್ರೆಸ್‌ನವರೇ ನನ್ನನ್ನು ಬೇಡ ಎಂದ ಮೇಲೆ ಆ ಪಕ್ಷಕ್ಕೆ ನಾನು ಎಂದೂ ಹೋಗಲಾರೆ, ಆದರೆ, ನಾನು ಪಕ್ಷೇತರವಾಗಿ ಸ್ಪರ್ಧೆ ಮಾಡಿ ಗೆದ್ದಿದ್ದರೂ ನನಗೆ ನನ್ನ ಕ್ಷೇತ್ರಕ್ಕೆ 4 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಬಿಜೆಪಿ ಕೊಟ್ಟಿದೆ.

ಬರಕ್ಕೆ ಸ್ಪಂದಿಸದ ಕೇಂದ್ರಕ್ಕೆ ಜನರಿಂದ ತಕ್ಕ ಪಾಠ
ಮೋದಿ ನನ್ನ ಬೆಂಬಲಕ್ಕೆ ಸದಾ ಇದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲ, ನನ್ನ ಬೆಂಬಲಕ್ಕೆ ಸದಾ ಇದ್ದಾರೆ, ಅಲ್ಲದೆ, ನಾನು ಪಕ್ಷೇತರವಾಗಿ ಸ್ಪರ್ಧೆ ಮಾಡುವುದು ಬೇಡ ಎಂದು ಸ್ವತಃ ಪ್ರಧಾನಿಯವರೇ ಕರೆದು ಹೇಳಿದ್ದಾರೆ, ಒಬ್ಬ ಪ್ರಧಾನಿಯೇ ನನಗೆ ಗೌರವ ಕೊಡುವಾಗ ನನಗೆ ಇನ್ನೇನು ಬೇಕು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದೇನೆ ಎಂದರು.

ನಾನು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ, ಆದರೆ, ಅದರ ಬಗ್ಗೆ ಪ್ರಚಾರ ತೆಗೆದುಕೊಳ್ಳಲು ಹೋಗಿಲ್ಲ, ಸಾಧನೆಗಳು ನಮ್ಮ ಬಗ್ಗೆ ಮಾತನಾಡಬೇಕು, ನಾವು ಸಾಧನೆಗಳ ಬಗ್ಗೆ ಮಾತನಾಡಬಾರದು ಎಂದು ಅಂಬರೀಶ್ ಸದಾ ಹೇಳುತ್ತಿದ್ದರು, ಅದನ್ನೇ ನಂಬಿಕೊಂಡು ಬಂದವಳು ನಾನು ಎಂದರು.

ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವ ನಿರ್ಧಾರ ಕೈಗೊಂಡ ನಂತರ ಸುಮಲತಾ ಅವರ ಮನೆಗೆ ತೆರಳಿ ಬೆಂಬಲ ಕೋರಿದ್ದರು.

ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ಏಪ್ರಿಲ್ ೩ರಂದು ಕರೆದಿದ್ದು ಅಂದು ಒಳ್ಳೆ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
like to join bjploka sabha election - 2024sumalata - kumara swamysumalata not to contest from mandya
3 FacebookTwitterPinterestEmail
admin

previous post
ಬರಕ್ಕೆ ಸ್ಪಂದಿಸದ ಕೇಂದ್ರಕ್ಕೆ ಜನರಿಂದ ತಕ್ಕ ಪಾಠ
next post
ಶೇಕಡ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ