Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬಾಲಕಿಯರೇ ಮುಂದು

by admin April 10, 2024
written by admin April 10, 2024 0 comments 2 minutes read
0FacebookTwitterPinterestEmail
290

ಬೆಂಗಳೂರು:ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಹೆಣ್ಣು ಮಕ್ಕಳೇ ಮುಂದಿದ್ದಾರೆ.

ರಾಜ್ಯದಲ್ಲಿ ಒಟ್ಟು ಶೇಕಡ 81.15 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 5,52,690 ಮಂದಿ ತೇರ್ಗಡೆಯಾಗಿದ್ದಾರೆ.

ಬಾಲಕಿಯರು ಶೇಕಡ 84.87 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ಬಾಲಕರು 76.98 ವಿದ್ಯಾರ್ಥಿಗಳು ತೇರ್ಗಡೆಗೊಳ್ಳುವ ಮೂಲಕ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

1,53,370 ವಿದ್ಯಾರ್ಥಿಗಳು ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆದಿದ್ದರೆ, ಶೇಕಡ 85ಕ್ಕಿಂತ ಕಡಿಮೆ ಹಾಗೂ ಶೇಕಡ 60ಕ್ಕಿಂತ ಹೆಚ್ಚು ಅಂಕ ಪಡೆದವರು 2,89,733, ಶೇಕಡ 60ಕ್ಕಿಂತ ಕಡಿಮೆ ಹಾಗೂ ಶೇಕಡ 50ಕ್ಕಿಂತ ಹೆಚ್ಚು 72,098, ಶೇಕಡ 50ಕ್ಕಿಂತ ಕಡಿಮೆ ಪಡೆದವರು 37,489 ವಿದ್ಯಾರ್ಥಿಗಳು.

ವಿಜ್ಞಾನ ವಿಭಾಗದಲ್ಲಿ 89.96 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 80.94 ರಷ್ಟು, ಕಲಾ ವಿಭಾಗದಲ್ಲಿ 68.36 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ

ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ ಶೇಕಡ 97.37 ರಷ್ಟು ವಿದ್ಯಾರ್ಥಿಗಳು ಸಾಧನೆ ಮಾಡಿ ಮೊದಲ ಸ್ಥಾನದಲ್ಲಿದ್ದು, ಗದಗ ಕೊನೆಯ ಸ್ಥಾನಕ್ಕೆ ನಿಂತಿದೆ. ಉಡುಪಿ ಶೇಕಡ 96.80, ವಿಜಯಪುರ ಶೇಕಡ 94.89 ತೇರ್ಗಡೆಗೊಂಡು ನಂತರದ ಸ್ಥಾನ ಪಡೆದುಕೊಂಡಿವೆ.

ಇನ್ನು ಕೊಡಗು ಶೇಕಡ 92.13, ಹಾಸನ 85.83, ಚಾಮರಾಜನಗರ 84.99, ಮೈಸೂರು ಶೇಕಡ 83.13, ದಾವಣಗೆರೆ ಶೇಕಡ 80.96, ಮಂಡ್ಯ ಶೇಕಡ 80.56ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.

ಮೂರೂ ವಿಭಾಗಗಳಲ್ಲಿ ಪ್ರಥಮ ಸ್ಥಾನಗಳನ್ನು ನಗರ ಪ್ರದೇಶದ ಜೊತೆ ಗ್ರಾಮೀಣ ವಿದ್ಯಾರ್ಥಿಗಳು ಹಂಚಿಕೆ ಮಾಡಿಕೊಂಡಿದ್ದಾರೆ.

ವಿದ್ಯಾಲಕ್ಷ್ಮಿ ಪ್ರಥಮ

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾನಿಕೇತನದ ವಿದ್ಯಾಲಕ್ಷ್ಮಿ ಗರಿಷ್ಟ 600 ಅಂಕಗಳ ಪೈಕಿ 598 ಅಂಕ ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ.

ನಂತರದಲ್ಲಿ ಉಡುಪಿಯ ವಿದ್ಯೋದಯ ಪಿಯು ಕಾಲೇಜಿನ ವೈಷ್ಣವಿ ಹಾಗೂ ಮೈಸೂರು ಆದಿಚುಂಚನಗಿರಿ ಪಿಯು ಕಾಲೇಜಿನ ಕೆ.ಎಚ್.ಉರ್ಮಿಶ್ 597 ಅಂಕ ಪಡೆದು ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.

ಇನ್ನು ವಾಣಿಜ್ಯ ವಿಭಾಗದಲ್ಲಿ ತುಮಕೂರು ವಿದ್ಯಾನಿಧಿ ಕಾಲೇಜಿನ ಗಾನವಿ 597 ಅಂಕ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಶಿವಮೊಗ್ಗದ ಕುಮದ್ವತಿ ಪಿಯು ಕಾಲೇಜಿನ ಪವನ್ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಹರ್ಷಿತ್ 594 ಅಂಕ ಪಡೆದು ಎರಡನೇ ಸ್ಥಾನ ಹಂಚಿಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರಿನ ಎನ್‌ಎಂಕೆಆರ್‌ವಿ ಪಿಯು ಕಾಲೇಜಿನ ಮೇಧಾ ಡಿ. 596 ಅಂಕ ಪಡೆದು ಪ್ರಥಮ ಸ್ಥಾನದಲ್ಲಿದ್ದಾರೆ.

ಕಲಾ ವಿಭಾಗದಲ್ಲಿ ಮೂವರು ಪ್ರಥಮ

ಮೂರೂ ವಿಭಾಗಗಳಲ್ಲಿ ಬಾಲಕಿಯರೇ ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರು ಜಯನಗರದ ಎನ್‌ಎಂಕೆಆರ್‌ವಿಯ ಮೇಧಾ, ವಿಜಯಪುರದ ಎಸ್‌ಎಸ್ ಪಿಯು ಕಾಲೇಜಿನ ವೇದಾಂತ್ ಹಾಗೂ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಕವಿತಾ ಬಿ.ವಿ ತಲಾ 596 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಧಾರವಾಡ ಕೆಇಬಿ ಪಿಯು ಕಾಲೇಜಿನ ರವೀನಾ ಸೋಮಪ್ಪ ಲಮಾಣಿ 595 ಅಂಕ ಪಡೆದು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಗಣಿತದಲ್ಲಿ 6,960 ಮಂದಿ, ಜೀವಶಾಸ್ತ್ರದಲ್ಲಿ 5,925 ಮಂದಿ, ಕನ್ನಡದಲ್ಲಿ 2,570 ಮಂದಿ, ಸಂಸ್ಕೃತದಲ್ಲಿ 1,499 ಮಂದಿ, ಅರ್ಥಶಾಸ್ತ್ರದಲ್ಲಿ 1,403 ಮಂದಿ, ಗಣಕ ವಿಜ್ಞಾನದಲ್ಲಿ 2,661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ ಶೇಕಡ 41.98 ಮಂದಿ ಹಾಗೂ ಖಾಸಗಿಯಾಗಿ ಪರೀಕ್ಷೆ ಬರೆದವರಲ್ಲಿ ಶೇಕಡ 48.16 ಮಂದಿ ಉತ್ತೀರ್ಣರಾಗಿದ್ದಾರೆ.

ಹೊಸತೊಡಕು: ಎಚ್‌ಡಿಕೆ-ಡಿಕೆಶಿ ಮಾತಿನ ಕಾಳಗ!
ಮರುಮೌಲ್ಯಮಾಪನ

ಅಧಿಕೃತ ವೆಬ್‌ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಿಕೊಳ್ಳಬಹುದಾಗಿದೆ, ಇದೇ ವೇಳೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್ಲೋಡ್ ಮಾಡಿಕೊಳ್ಳಲು ಹಾಗೂ ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನೂ ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವಿದೆ, ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ, ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ಪಾವತಿಸಬೇಕಿದ್ದು, ಮರುಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1,670 ರೂ. ಆಗಿರುತ್ತದೆ.

ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2nd puc resultgadaga lastgirls firstmore than five and half lakh total students passedsouth canara firsttotal result 81.15%
0 FacebookTwitterPinterestEmail
admin

previous post
ದಿನ ಭವಿಷ್ಯ :  ಬುಧವಾರ, 10 ಏಪ್ರಿಲ್ 2024
next post
ಹೊಸತೊಡಕು: ಎಚ್‌ಡಿಕೆ-ಡಿಕೆಶಿ ಮಾತಿನ ಕಾಳಗ!

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ