Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೋದಿ-ದೇವೇಗೌಡ ಒಗ್ಗಟ್ಟಿನ ಪ್ರಚಾರ

by KM Shivaraju April 12, 2024
written by KM Shivaraju April 12, 2024 0 comments 1 minutes read
0FacebookTwitterPinterestEmail
382

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರುಗಳು ಕಾಂಗ್ರೆಸ್ ವಿರುದ್ಧ ಸಮರ ಸಾರಲು ಒಂದೇ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಮೋದಿ ಅವರು ಇದೇ 14 ರಂದು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಏಳು ಲೋಕಸಭಾ ಕ್ಷೇತ್ರ

ಅಂದು ಮೈಸೂರು ಹಾಗೂ ಮಂಗಳೂರಿನಲ್ಲಿ ಏಳು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಜೆಡಿಎಸ್, ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡ ನಂತರ ಇದೇ ಮೊದಲ ಬಾರಿಗೆ ಮೋದಿ ಹಾಗೂ ಗೌಡರು ಮೈಸೂರಿನ ಮಹಾರಾಜ ಕಾಲೇಜಿನ ಆವರಣದಲ್ಲಿ ನಡೆಯುವ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಲಿದ್ದಾರೆ.

ಅಂದು ಸಂಜೆ 4 ಗಂಟೆಗೆ ನಡೆಯುವ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಉಭಯ ನಾಯಕರು ಮತ ಯಾಚಿಸಲಿದ್ದಾರೆ.

ಎನ್‌ಡಿಎ ಅಭ್ಯರ್ಥಿಗಳ ಪರ ಮತ ಯಾಚನೆ

ಕಳೆದ ವಿಧಾನಸಭಾ ಚುನಾವಣೆವರೆಗೂ ಸಿದ್ಧಾಂತದ ಆಧಾರದ ಮೇಲೆ ರಾಜಕೀಯ ಮಾಡಿಕೊಂಡು ಬಂದ ಈ ನಾಯಕರು, ಇಂದು ತಮ್ಮ ಹಳೆಯ ಎಲ್ಲಾ ರಾಜಕೀಯ ವೈಮಸ್ಸನ್ನು ದೂರವಿಟ್ಟು ಎನ್‌ಡಿಎ ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ.

ಚುನಾವಣೆಗೆ ಸಂಬಂಧಿಸಿದಂತೆ ಈ ಇಬ್ಬರು ನಾಯಕರು ಇದೇ ಪ್ರಥಮ ಬಾರಿಗೆ ವೇದಿಕೆ ಹಂಚಿಕೊಂಡು ಕಾಂಗ್ರೆಸ್ ವಿರುದ್ಧ ರಾಜಕೀಯ ಟೀಕಾಸ್ತ್ರಗಳನ್ನು ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ.

ಮಹಾರಾಜ ಕಾಲೇಜಿನ ಆವರಣಲ್ಲಿ ನಡೆಯುವ ಸಮಾರಂಭ ಬಿಜೆಪಿ-ಜೆಡಿಎಸ್ ಜಂಟಿ ಸಮಾವೇಶವಾಗಿದ್ದು, ಇದರಲ್ಲಿ ಮೋದಿ ಹಾಗೂ ದೇವೇಗೌಡರಲ್ಲದೆ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿರುವರು.

ಮೈಸೂರು ಪ್ರವಾಸ ಮುಗಿಸಿ ಪ್ರಧಾನಿ ಅವರು, ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಕಾಂಗ್ರೆಸ್ ಚುನಾವಣಾ ಗಿಮಿಕ್ ಬಣ್ಣ ಬಯಲು!

ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ಮೋದಿ ಅವರು, ಶಿವಮೊಗ್ಗದಲ್ಲಿ ಬೃಹತ್ ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದರು.

ಅಂದು ಐದು ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳನ್ನು ವೇದಿಕೆ ಮೇಲೆ ಪಕ್ಕದಲ್ಲಿ ನಿಲ್ಲಿಸಿಕೊಂಡು ಮತದಾರರಿಗೆ ಪರಿಚಯ ಮಾಡಿಸಿದ್ದರು.

ಎರಡನೇ ಬಾರಿಗೆ ರಾಜ್ಯದಲ್ಲಿ

ಇದಾದ ನಂತರ ಮೋದಿ ಎರಡನೇ ಬಾರಿಗೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದಾರೆ.

ಮೋದಿ ಅವರು ಹಿಂತಿರುಗುತ್ತಿದ್ದಂತೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಏಪ್ರಿಲ್ 16ರಂದು ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
14th of this month in mysorenda candidatespm narendra modi and devegowda joint campaignpmo
0 FacebookTwitterPinterestEmail
KM Shivaraju

previous post
ಮೋದಿ ಏನು ಅಭಿವೃದ್ಧಿ ಮಾಡಿದ್ದಾರೆ ಹೇಳಲಿ!
next post
ದಿನ ಭವಿಷ್ಯ : ಶನಿವಾರ, 13 ಏಪ್ರಿಲ್ 2024

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ