400ಕ್ಕೂ ಹೆಚ್ಚು ಸ್ಥಾನ ಹೇಳಿಕೆ ಜನರ ದಾರಿತಪ್ಪಿಸುವ ತಂತ್ರ
ಮೈಸೂರು:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ, 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದು ಜನರ ದಾರಿತಪ್ಪಿಸುವ ತಂತ್ರ ಎಂದರು.
ರಾಜ್ಯಕ್ಕೆ ಕೊಡುಗೆ ಏನು
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯಕ್ಕೆ ನೀಡಿರುವ ಕೊಡುಗೆಯನ್ನು ಜನತೆಗೆ ತಿಳಿಸಬೇಕು ಎಂದು ಒತ್ತಾಯಿಸಿದರು.
ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇದುವರೆಗೂ ಏಕೆ ಪರಿಹಾರ ನೀಡಿಲ್ಲ ಎಂಬುದಕ್ಕೆ ಉತ್ತರ ನೀಡಲಿ.
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ, ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಹೇಳುತ್ತಿರುವ ಮೋದಿ ಅವರು, ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ, ಸಂವಿಧಾನ ಜಾರಿಗೆ ಬಂದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ವಿರೋಧಿಸಿದ್ದರು ಎಂದರು.