Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಏ.18ರಿಂದ ವಿದ್ಯಾರ್ಥಿ ಜೀವನದ ಮಹತ್ವದ ಸಿಇಟಿ ಪರೀಕ್ಷೆ

by admin April 17, 2024
written by admin April 17, 2024 0 comments 2 minutes read
0FacebookTwitterPinterestEmail
436

ಬೆಂಗಳೂರು:ಲೋಕಸಭಾ ಚುನಾವಣಾ ಕಾವಿನ ಮಧ್ಯದಲ್ಲೇ ವಿದ್ಯಾರ್ಥಿ ಜೀವನದ ಬದಲಾವಣೆಯ ಮಹತ್ವದ ಘಟ್ಟದಲ್ಲಿರುವವರು ಏ.18ರಿಂದ ವೃತ್ತಿ ಶಿಕ್ಷಣ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎದುರಿಸಲಿದ್ದಾರೆ.

ಹಿಂದಿನ ಕಹಿ ಅನುಭವಗಳ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಮಯ ನೋಡಲು ಗಡಿಯಾರವನ್ನೂ ಕಟ್ಟಿಕೊಂಡು ಹೋಗುವಂತಿಲ್ಲ.

ಅಕ್ರಮಗಳಿಗೆ ಅವಕಾಶವಿಲ್ಲದಂತೆ ಭಾರೀ ಬಿಗಿಭದ್ರತೆಯೊಂದಿಗೆ 2024ನೇ ಸಾಲಿನ ಸಿಇಟಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಒಳಗೊಂಡ ಪ್ರವೇಶ ಪತ್ರಗಳನ್ನು ಪರೀಕ್ಷಾ ಪ್ರಾಧಿಕಾರ ಈಗಾಗಲೇ ಕಳುಹಿಸಿಕೊಟ್ಟಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ಸಿಇಟಿ ಪರೀಕ್ಷೆ ನಡೆಯುತ್ತಿದೆ.

ರಾಜ್ಯಾದ್ಯಂತ 737 ಪರೀಕ್ಷೆ ಕೇಂದ್ರಗಳು

ಬೆಂಗಳೂರಿನಲ್ಲಿ 167 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ, ಸುಗಮ ಪರೀಕ್ಷೆಗೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲ ಬಗೆಹರಿಸಿದ್ದು, ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ

ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ, ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಕೆಡೆಟ್‌ಗಳು ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ, ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿ ನಿಯೋಜಿಸಲಾಗಿದೆ.

ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಈ ಬಾರಿ ಒಟ್ಟು 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯತ್ತಿದ್ದು, ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ

ನಾಳೆ ಬೆಳಗ್ಗೆ 10.30ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ.

ಏಪ್ರಿಲ್ 19ರಂದು ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಏಪ್ರಿಲ್ 20ರಂದು ಬೆಂಗಳೂರು, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಹೊರನಾಡು ಹಾಗೂ ಗಡಿನಾಡಿನ 1,545 ಕನ್ನಡ ಅಭ್ಯರ್ಥಿಗಳು ಬೆಳಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ಬರೆಯಲಿದ್ದಾರೆ.

ಇಂಗ್ಲಿಷ್ ಮತ್ತು ಕನ್ನಡದಲ್ಲಿ ಪ್ರಶ್ನೆಪತ್ರಿಕೆ

ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ, ಒಂದು ವೇಳೆ ಅಭ್ಯರ್ಥಿಗಳಿಗೆ ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು, ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ.

ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ.

ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ, ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಸತಕ್ಕದ್ದು, ತುಂಬುದೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ, ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲುಕುಲೇಟರ್, ನೋಟ್ ಪ್ಯಾಡ್, ಐ-ಪ್ಯಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.

ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ, ಓಎಂಆರ್ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯ, ಓಎಂಆರ್ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು, ಓಎಂಆರ್ ಶೀಟ್‌ನಲ್ಲಿರುವ ಟೈಮಿಂಗ್ ಮಾರ್ಕ್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.

ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು, ಬೆಳಿಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
738 exam centersapril 18 to april 20thCET exammore than 3.81 lakhs students
0 FacebookTwitterPinterestEmail
admin

previous post
ದಿನ ಭವಿಷ್ಯ :  ಬುಧವಾರ, 17 ಏಪ್ರಿಲ್ 2024
next post
ಬಿಜೆಪಿ ತೊರೆದು ಹಸ್ತದ ಕೈಹಿಡಿದ ಸಂಸದ ಕರಡಿ ಸಂಗಣ್ಣ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ