Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಲೋಕಸಭೆ ಚುನಾವಣೆಗೆ 5.47 ಕೋಟಿ ಮತದಾರರು

by admin April 21, 2024
written by admin April 21, 2024 0 comments 2 minutes read
0FacebookTwitterPinterestEmail
473

ಕರ್ನಾಟಕದಲ್ಲಿ 58,834 ಮತಗಟ್ಟೆಗಳು

ಬೆಂಗಳೂರು: ಪ್ರಸ್ತುತ ಲೋಕಸಭಾ ಸಾರ್ವತ್ರಿಕ ಚುನಾವಣೆ ರಾಜ್ಯದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಒಟ್ಟು 5.47 ಕೋಟಿ ಮತದಾರರು ಹಾಗೂ ಅವರಿಗಾಗಿ ಒಟ್ಟು 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 1832 ವಿಶೇಷ ಮತಗಟ್ಟೆಗಳನ್ನು ವಿವಿಧ ವಿಷಯವಾರು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ. 

ಪ್ರಜಾಪ್ರಭುತ್ವದ ಹಬ್ಬದ ರೀತಿ ಚುನಾಣೆ

ಪ್ರತಿ ಚುನಾವಣೆಯಲ್ಲಿ ಸಹ ಭಾರತ ಚುನಾವಣಾ ಆಯೋಗ ವಿಶೇಷ ಘೋಷ ವಾಕ್ಯ ಹಾಗೂ ಲೋಗೋವನ್ನು ಘೋಷಣೆ ಮಾಡುತ್ತದೆ. ಅದೇ ರೀತಿ ಈ ಚುನಾವಣೆಗಾಗಿ “ಚುನಾವಣಾ ಪರ್ವ – ದೇಶದ ಗರ್ವ” ಎನ್ನುವ ಘೋಷ ವಾಕ್ಯವನ್ನು ಅಳವಡಿಸಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಎಲ್ಲರನ್ನೂ ಒಳಗೊಳ್ಳುವ, ಸುಗಮ, ನೈತಿಕ, ಭಾಗವಹಿಸುವಿಕೆಯ ಜೊತೆಗೆ ಮಾಹಿತಿಯುಕ್ತ ಚುನಾವಣೆಯನ್ನು  ರಾಜ್ಯದಾದಂತ್ಯ ಪ್ರಜಾಪ್ರಭುತ್ವದ ಹಬ್ಬದ ರೀತಿ ಆಚರಿಸಲಾಗುವುದು ಎಂದು ಹೇಳಿದರು.

SVEEP (Systematic Voters Education Electoral Participation)  ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ ಅಡಿಯಲ್ಲಿ ಎಲ್ಲಾ ಮತದಾರರಲ್ಲಿ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲು SVEEP Interventions ನಲ್ಲಿ ಮುಖ್ಯವಾಗಿ ಮಹಿಳಾ ಮತದಾರರು, ಯುವ ಮತದಾರರು, ವಿಶೇಷ ಚೇತನರು, ಆದಿವಾಸಿ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ SVEEP Awareness ಕಾರ್ಯಕ್ರಮಗಳು ನಡೆಯುತ್ತಿವೆ.

ಮಹಿಳಾ ಮತದಾರರನ್ನು ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 5 ಸಖಿ ಮತಗಟ್ಟೆಗಳನ್ನು ರಾಜ್ಯಾದ್ಯಂತ ಒಟ್ಟು 1120 ಮತಗಟ್ಟೆಗಳನ್ನು ಮಹಿಳೆಯರಿಂದಲೇ ನಿರ್ವಹಿಸಲಾಗುತ್ತದೆ. ಈ ಮತಗಟ್ಟೆಗಲ್ಲಿ ಆರಕ್ಷಕ ಸಿಬ್ಬಂದಿ, ಗ್ರೂಪ್ ಡಿ ನೌಕರರು ಹಾಗೂ ಎಲ್ಲಾ ಮತಗಟ್ಟೆಯ ಅಧಿಕಾರಿಗಳು ಮಹಿಳೆಯರೇ ಆಗಿರುತ್ತಾರೆ.

ವಿಶೇಷ ಚೇತನ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 1 ವಿಶೇಷ ಚೇತನ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ವಿಶೇಷ ಚೇತನ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ.

ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 1 ಯುವ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಯುವ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ನಿರ್ವಹಿಸಲಾಗುತ್ತದೆ.

ಎಲ್ಲಾ ಮತದಾರರಲ್ಲಿ ಚುನಾವಣೆ ಮತ್ತು ಮತದಾನದ ಬಗ್ಗೆ ಆಸಕ್ತಿ ಮೂಡಿಸಲು ಹಾಗೂ ಭಾಗವಹಿಸುವಂತೆ ಪ್ರೇರೇಪಿಸಲು ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಟ 1 ಧ್ಯೇಯ ಆಧಾರಿತ ಮತಗಟ್ಟೆಯನ್ನು ರಾಜ್ಯಾದ್ಯಂತ ಒಟ್ಟು 224 ಮತಗಟ್ಟೆಗಳನ್ನು ಆಯಾ ಜಿಲ್ಲೆಗಳ ವಿಶೇಷತೆ, ಪ್ರಾದೇಶಿಕ ಸಾಂಸ್ಕೃತಿಕ ಸೊಗಡಿನ ಹಿನ್ನೆಲೆಯಲ್ಲಿ, ಪಾರಂಪರಿಕ ಕುಶಲ ಕಲೆಗಳು, ವಿನೂತನ ಪ್ರಯೋಗಗಳು, ಜಾಗತಿಕ ಸಂದೇಶ ಸಾರುವಂತಹ ಮಾದರಿಯಲ್ಲಿ ರಚಿಸಲು ನಿರ್ದೇಶಿಸಲಾಗಿದೆ.

ಆದಿವಾಸಿಗಳ ಮತಗಟ್ಟೆಗಳನ್ನು ಕಾಡಿನ ಅಂಚಿನಲ್ಲಿರುವ ಅಥವಾ ಕಾಡಿನಲ್ಲಿ ಜೀವಿಸುವ ಆದಿವಾಸಿ ಜನರಿಂದ ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 40 ಮತಗಟ್ಟೆಗಳನ್ನು ಸಾಂಪ್ರದಾಯಿಕ ಬುಡಕಟ್ಟು ಜನರ ಸಾಂಸ್ಕೃತಿಕ ಹಿನ್ನೆಲೆ ಬಿಂಬಿಸುವ ರೀತಿಯಲ್ಲಿ ಅಲಂಕರಿಸುವ ಮೂಲಕ ಆದಿವಾಸಿ ಮತದಾರರನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಆಕರ್ಷಿತರನ್ನಾಗಿ ಮಾಡಲು ಈ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಈ ಮೂಲಕ ಮುಖ್ಯ ಚುನಾವಣಾಧಿಕಾರಿಯವರ ಕಛೇರಿಯು ಎಲ್ಲಾ ವರ್ಗದ ಮತದಾರರನ್ನು ಒಳಗೊಂಡಂತೆ ಮತದಾನ ಪ್ರಕ್ರಿಯೆಯಲ್ಲಿ ಸುಗಮವಾಗಿ ಭಾಗವಹಿಸುವಂತೆ ಮಾಡಲು “ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು, ಪ್ರತಿ ಮತವೂ ಅಮೂಲ್ಯವಾದುದ್ದು” ಎಂಬ ಧ್ಯೇಯವನ್ನು ಹೊಂದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1832 special polling booths 5.47 crore voters58834 polling boothskarnataka
0 FacebookTwitterPinterestEmail
admin

previous post
ವಾರ ಭವಿಷ್ಯ : ಭಾನುವಾರ, 21 ಏಪ್ರಿಲ್ 2024
next post
ಶ್ರೀಕೃಷ್ಣನಂತಾಗಲು ಶಂಖಮುದ್ರೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ