Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕದ ಮೊದಲ ಹಂತದಲ್ಲಿ‌ ಮತದಾನ‌ ಶಾಂತಿಯುತ

by admin April 26, 2024
written by admin April 26, 2024 0 comments 2 minutes read
0FacebookTwitterPinterestEmail
230

ಫಲಿತಾಂಶಕ್ಕೆ ಅಭ್ಯರ್ಥಿಗಳು 6 ವಾರ ಕಾಯಬೇಕು

ಬೆಂಗಳೂರು: ಕರ್ನಾಟಕದ ಮೊದಲ ಹಂತದ ೧೪ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಚಾಮರಾಜನಗರ ಘಟನೆ ಹೊರತುಪಡಿಸಿ, ಉಳಿದಂತೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.‌
ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಆರುವಾರಗಳ ಕಾಲ ಅಂದರೆ ಜೂನ್ 4ರ ವರೆಗೆ ಕಾಯಬೇಕಿದೆ.
ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದಲ್ಲಿ ಮತದಾನ ಬಿರುಸಿನಿಂದ ನಡೆದಿದ್ದು, ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ಮತದಾನ ಪ್ರಮಾಣ ಹೆಚ್ಚಾಗಿದೆ.
ಕರಾವಳಿ ಹೊರತುಪಡಿಸಿದರೆ ಮೈಸೂರು-ಕೊಡಗು, ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆದಿದೆ.
ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಆರಂಭದಲ್ಲಿ ಭಾರೀ ಕಡಿಮೆ ಇತ್ತು.
ಚುನಾವಣಾ ಆಯೋಗ ಅತ್ಯಂತ ಬಿಗಿಬಂದೋಬಸ್ತ್ ಕೈಗೊಂಡಿದ್ದರಿಂದ ಸಣ್ಣ-ಪುಟ್ಟ ಘಟನೆಗಳು ಹೊರತುಪಡಿಸಿ ಚುನಾವಣೆ ನಡೆದ ಎಲ್ಲ ಕ್ಷೇತ್ರಗಳಲ್ಲೂ ಶಾಂತಿಯುತವಾಗಿತ್ತು.
ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಿಫ್ಟ್ ಕೂಪನ್ ಹಾಗೂ ಹಣದ ಆಮಿಷ ಒಡ್ಡುತ್ತಿದ್ದಾರೆಂಬ ಆರೋಪ ಕೇಳಿಬಂದಿದ್ದಲ್ಲದೆ, ಕೆಲವೆಡೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ತನಿಖಾಧಿಕಾರಿಗಳಿಗೆ ಒಪ್ಪಿಸಿದರೆ, ಮತ್ತೆ ಕೆಲವೆಡೆ ಈ ಪಕ್ಷಗಳ ಕಾರ್ಯಕರ್ತರ ನಡುವೆ ಕೈ-ಕೈ ಮಿಲಾಯಿಸುವ ಹಂತ ತಲುಪಿತ್ತು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪಡುವಲಹಿಪ್ಪೆಯಲ್ಲೂ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರು ಉತ್ತರ ಕ್ಷೇತ್ರದಲ್ಲೂ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಜೊತೆಗೆ ಸಿದ್ದರಾಮನಹುಂಡಿಯಲ್ಲೂ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಆಲಹಳ್ಳಿಯಲ್ಲೂ ಮತ ಚಲಾಯಿಸಿದರು.
ಚಿತ್ರನಟ ಸುದೀಪ್, ರವಿಚಂದ್ರನ್, ಯಶ್, ದರ್ಶನ್ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.
ಆಸ್ಪತ್ರೆಗೆ ದಾಖಲಾಗಿದ್ದ ಇನ್ಫೋಸಿಸ್‌ನ ನಾರಾಯಣ ಮೂರ್ತಿ ಡಿಸ್ಚಾರ್ಜ್ ಆಗಿ ನೇರವಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.

ನವ ವಧು- ವರರು ಮತದಾನ

ಚಿತ್ರದುರ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರಿನ ಮೂರು ಕಡೆಗಳಲ್ಲಿ ವಧು-ವರರು ಮದುವೆ ಮುಗಿಸಿಕೊಂಡು ಬಂದು ಮತದಾನದ ಹಕ್ಕು ಚಲಾಯಿಸಿದರು.
ನೇತ್ರಾವತಿ ನದಿಗೆ ಸೇತುವೆ ಸಂಪರ್ಕ ಇಲ್ಲದಿದ್ದರೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾವೂರು ಉಳಿಯ ದ್ವೀಪದ ೧೫೦ಕ್ಕೂ ಹೆಚ್ಚು ಮತದಾರರು ದೋಣಿಗಳಲ್ಲಿ ಬಂದು ಮತ ಚಲಾಯಿಸಿದರು.
ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ಚುನಾವಣೆಯಲ್ಲಿ ಮತ ಚಲಾಯಿಸುಲು ದುಬೈನಿಂದ ಆಗಮಿಸಿದರೆ, ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಿವಾಸಿ ಲಿಖಿತ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದ್ದು ವಿಶೇಷವಾಗಿತ್ತು.
ನ್ಯಾಯಾಧೀಶ ಆರ್.ಎಸ್.ಜೀತು ಅವರು ಉಡುಪಿಯಿಂದ ಆಗಮಿಸಿ ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿನ ಮತಗಟ್ಟೆ ಸಂಖ್ಯೆ 114ರಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಮತಗಟ್ಟೆಯಲ್ಲಿ 90 ವರ್ಷದ ಪುಟ್ಟಮ್ಮ ಮತದಾನದ ಹಕ್ಕನ್ನು ಚಲಾಯಿಸಿ ವಾಪಸಾಗುತ್ತಿದ್ದಾಗ ದಿಢೀರ್ ಕುಸಿದುಬಿದ್ದು, ಮೃತಪಟ್ಟ ಘಟನೆ ವರದಿಯಾಗಿದೆ.

ಮತದಾನ ಬಹಿಷ್ಕಾರ

ಚಾಫಲಿತಾಂಶಕ್ಕೆ ಅಭ್ಯರ್ಥಿಗಳು 6 ವಾರ ಕಾಯಬೇಕು

ಕಾಂಗ್ರೆಸ್‌ನಿಂದ ಗಿಫ್ಟ್ ಕೂಪನ್ ಹಂಚಿಕೆ

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ.

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.
ಆಕ್ಸಿಜನ್ ಸಹಿತ ಬಂದು ಮತದಾನ

ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ.
ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ಥಂಭನ ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ವೈದ್ಯರು‌ಬಂದಿದ್ದರಿಂದ ಅವರ ಜೀವ ಉಳಿದಿದೆ.
ಮಹಿಳೆ ಕುಸಿದ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.
ಪರೀಕೆ ಮಾಡಿದ ವೈದ್ಯರು, ಪಲ್ಸ್ ರೇಟ್ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
candidatesfirst phasejune 4 countingkarnatakapeacefulPollingresultwait 6 weeks
0 FacebookTwitterPinterestEmail
admin

previous post
ಕಾಂಗ್ರೆಸ್‌ನಿಂದ ಗಿಫ್ಟ್ ಕೂಪನ್ ಹಂಚಿಕೆ
next post
ದಿನ ಭವಿಷ್ಯ : ಶನಿವಾರ, 27 ಏಪ್ರಿಲ್ 2024

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ