Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೂಟಿಗೆ ಮತ್ತೊಂದು ಹೆಸರೇ ಕಾಂಗ್ರೆಸ್!

by admin April 29, 2024
written by admin April 29, 2024 0 comments 2 minutes read
0FacebookTwitterPinterestEmail
168

ಬೆಂಗಳೂರು:ಲೂಟಿಗೆ ಮತ್ತೊಂದು ಹೆಸರೇ ಕಾಂಗ್ರೆಸ್, ಇಂತಹ ಪಕ್ಷದ ಕೈಯಲ್ಲಿ ದೇಶ ಕೊಡಲು ಸಾಧ್ಯವೇ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕವನ್ನೂ ಲೂಟಿಯ ಎಟಿಎಂ ಮಾಡಿಕೊಂಡಿದೆ, ಆಡಳಿತಕ್ಕೆ ಬಂದ ಅತ್ಯಂತ ಕಡಿಮೆ ಸಮಯದಲ್ಲೇ ಸರ್ಕಾರಿ ಖಜಾನೆ ಖಾಲಿಯಾಗಿದೆ, ರಾಜ್ಯ ಸರಕಾರಿ ನೌಕರರಿಗೆ ವೇತನ ಕೊಡಲೂ ಸಾಧ್ಯವಾಗದ ಸ್ಥಿತಿ ಬರಲಿದೆ ಎಂದರು.

ಹಸಿವಿನಿಂದ ಒದ್ದಾಡುವ ಸ್ಥಿತಿ

ಮುಂದೆ ರಾಜ್ಯದ ಜನತೆಯ ಮಕ್ಕಳೂ ಹಸಿವಿನಿಂದ ಒದ್ದಾಡುವ ಸ್ಥಿತಿ ಬಂದೀತು ಎಂದು ಎಚ್ಚರಿಸಿದರು.

ಕೇಂದ್ರದ ಎನ್‌ಡಿಎ ಸರ್ಕಾರ ಕರ್ನಾಟಕದಲ್ಲಿ ಹಲವು ವಿಮಾನ ನಿಲ್ದಾಣಗಳನ್ನು ನಿರ್ಮಿಸುತ್ತಿದೆ, ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ, ಕಳೆದ 10 ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ.

ವಂಚಿತ ವರ್ಗದ ಏಳಿಗೆಗೆ ಆದ್ಯತೆ ಕೊಟ್ಟಿದ್ದೇವೆ, ತಾವು ಅಧಿಕಾರಕ್ಕೆ ಬರುವ ಮೊದಲು ದೇಶದ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ, ಈ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ.

11 ಕೋಟಿ ಮನೆಗಳಿಗೆ ನಲ್ಲಿ ನೀರು

ದೇಶದಲ್ಲಿನ ನೀರಿನ ಸಮಸ್ಯೆ ಪರಿಹಾರಕ್ಕೆ ಜಲಜೀವನ್ ಮಿಷನ್ ಕಾರ್ಯಕ್ರಮ ಅನುಷ್ಠಾನ ಮಾಡಿದ್ದು, ಶೇ.75ಕ್ಕೂ ಹೆಚ್ಚು ಅಂದರೆ, 11 ಕೋಟಿ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಒದಗಿಸಲಾಗಿದೆ.

ಅಭಿವೃದ್ಧಿ ಎಂಬುದು ದೇಶದ ಎಲ್ಲ ಗ್ರಾಮಗಳನ್ನು ತಲುಪುತ್ತಿದೆ, ಎಸ್‌ಸಿ, ಎಸ್‌ಟಿ ಸಮುದಾಯ ಅಭಿವೃದ್ಧಿ ವಂಚಿತವಾಗಿತ್ತು, ಗ್ಯಾಸ್ ಸಿಲಿಂಡರ್‌ಗಳನ್ನು ನೀಡಿದ್ದು, ಎಸ್‌ಸಿ, ಎಸ್‌ಟಿ ಒಬಿಸಿ ಸಮುದಾಯದವರಿಗೆ ಗರಿಷ್ಠ ಪ್ರಯೋಜನ ಲಭಿಸಿದೆ ಎಂದರು.

ಯಡಿಯೂರಪ್ಪ ಅವರು ರೈತರಿಗೆ ನೆರವಾದವರು, ನಾವು ಇಥೇನಾಲ್ ಮೂಲಕ ರೈತರಿಗೆ ನೆರವಾಗಿದ್ದೇವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್

ಕಾಂಗ್ರೆಸ್ಸಿಗೆ ಬಡವರ, ದಲಿತರ, ವಂಚಿತರ ಕಡೆ ಗಮನ ನೀಡಲು ಪುರುಸೊತ್ತಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್ ನಡೆಸುತ್ತಿದೆ, ಭ್ರಷ್ಟಾಚಾರದ ಮೂಲಕ ವಸೂಲಿ ಮಾಡುವುದೇ ಇವರ ದಂಧೆಯಾಗಿದೆ.

ಟೆಕ್ ಹಬ್ ಎಂಬ ಖ್ಯಾತಿ ಗಳಿಸಿದ್ದ ಬೆಂಗಳೂರನ್ನು ಟ್ಯಾಂಕರ್ ಹಬ್ ಮಾಡಿದ್ದಾರೆ, ನೀರಿಗಾಗಿ ಟ್ಯಾಂಕರ್ ಮಾಫಿಯಾ ಮೂಲಕ ಕಾಂಗ್ರೆಸ್ ಕಮಿಷನ್ ಪಡೆಯುತ್ತಿದೆ.

ಕಾಂಗ್ರೆಸ್ಸಿಗರು 2ಜಿ ಹಗರಣದಂಥ ಭ್ರಷ್ಟಾಚಾರದ ದೊಡ್ಡ ಹಗರಣ ಮಾಡಲು ಕಾಯುತ್ತಿದ್ದಾರೆ, ಭ್ರಷ್ಟಾಚಾರಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ಮೋದಿ ಮನವಿ ಮಾಡಿದರು.

ದಲಿತರನ್ನು ವಂಚಿಸುವ ಹುನ್ನಾರ

ಕಾಂಗ್ರೆಸ್ಸಿಗರು ಮುಸ್ಲಿಮರಿಗೆ ಒಬಿಸಿ ಮೀಸಲಾತಿಯಡಿ ಅವಕಾಶ ಕೊಟ್ಟಿದ್ದಾರೆ, ದಲಿತರನ್ನು ವಂಚಿಸುವ ಹುನ್ನಾರವಿದು, ಧರ್ಮದ ಆಧಾರದಲ್ಲಿ ತಮ್ಮ ಮತಬ್ಯಾಂಕ್ ರಕ್ಷಿಸಲು ಮುಂದಾಗಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿ ಸಂಸದರು ಹೆಚ್ಚಾಗಿ ಬಿಜೆಪಿಯಲ್ಲಿದ್ದಾರೆ, ಈ ಕಾರಣಕ್ಕೆ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸಲು ಕಾಂಗ್ರೆಸ್ಸಿಗರು ಮುಂದಾಗಿದ್ದಾರೆ, ಕಾಂಗ್ರೆಸ್‌ನ ಇಂಥ ಹುನ್ನಾರ ಅನುಷ್ಠಾನಕ್ಕೆ ಮೋದಿ ಅವಕಾಶ ಕೊಡುವುದಿಲ್ಲ ಎಂದರು.

ವಿರೋಧ ಪಕ್ಷದವರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ನನ್ನ ಧ್ವನಿಯಲ್ಲಿ ಡೀಪ್ ಫೇಕ್ (ನಕಲಿ) ವಿಡಿಯೋ ಮಾಡುತ್ತಿದ್ದಾರೆ, ಇಂಥ ವಿಡಿಯೋ ಕಂಡರೆ ನಮ್ಮ ಪಕ್ಷದವರ ಗಮನಕ್ಕೆ ತನ್ನಿ, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಹುಬ್ಬಳ್ಳಿ ಘಟನೆ ಆತಂಕಕಾರಿ

ಯುವತಿಯನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ ಹುಬ್ಬಳ್ಳಿ ಘಟನೆ ಆತಂಕಕಾರಿಯಾಗಿದೆ, ಕಾಂಗ್ರೆಸ್ ಈ ಘಟನೆಯನ್ನು ಮತಬ್ಯಾಂಕ್‌ಗಾಗಿ, ತುಷ್ಟೀಕರಣಕ್ಕಾಗಿ ಪ್ರಮುಖ ವಿಚಾರವಾಗಿ ಪರಿಗಣಿಸುತ್ತಿಲ್ಲ.

ಹನುಮಾನ್ ಚಾಲೀಸ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ಆಗುತ್ತದೆ, ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದರೆ ಸಿಲಿಂಡರ್ ಸ್ಫೋಟ ಎಂದು ಸರ್ಕಾರದ ಪ್ರತಿನಿಧಿ ಹೇಳುತ್ತಾರೆ, ಇವೆಲ್ಲವೂ ಆತಂಕವಾದ, ಭಯೋತ್ಪಾದನೆಯ ಮಾನಸಿಕವಾದದ ಪ್ರತಿಬಿಂಬ, ಕಾಂಗ್ರೆಸ್ ಪಕ್ಷ ಮತಕ್ಕಾಗಿ ಇಂಥವರನ್ನು ಬೆಂಬಲಿಸುತ್ತದೆ, ದೇಶದ ನಿರ್ದೋಷಿ ನಾಗರಿಕರನ್ನು ಕೊಲ್ಲಲು ಬಯಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದರು.

ವಿಕಸಿತ ಕರ್ನಾಟಕ, ವಿಕಸಿತ ಭಾರತಕ್ಕಾಗಿ ಮತ ಕೊಡಿ, 2024ರ ಚುನಾವಣೆಯು ವಿಕಸಿತ ಭಾರತದ ಸಂಕಲ್ಪ ಹೊಂದಿದ ಚುನಾವಣೆಯಾಗಿದೆ, ಆತ್ಮನಿರ್ಭರ ಭಾರತದ ಚುನಾವಣೆ.

ಸಿಇಟಿ: 50 ಅಂಕ ಹೊರತುಪಡಿಸಿ ಮೌಲ್ಯಮಾಪನ
ವಿಶ್ವದ 3ನೇ ಆರ್ಥಿಕ ಶಕ್ತಿ

ಭಾರತವು ವಿಶ್ವದ 3ನೇ ಪ್ರಮುಖ ಆರ್ಥಿಕ ಶಕ್ತಿಯಾಗಲು ಇದು ಪೂರಕ ಚುನಾವಣೆ, ನಿಮ್ಮ ಒಂದು ಮತ ಈ ಸಂಕಲ್ಪ ಸಾಧನೆಗೆ ಸಹಕಾರಿಯಾಗಲಿದೆ, ಮೋದಿಗೆ ಶಕ್ತಿ ಕೊಡಲು ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಭಾರತವನ್ನು ಕೌಶಲ್ಯಯುಕ್ತ ದೇಶ, ಉತ್ಪಾದನಾ ಹಬ್ ಆಗಿ ಪರಿವರ್ತಿಸಲು ದೂರದೃಷ್ಟಿ ಬೇಕು, ಇದು ಮೋಜು ಮಾಡುವವರಿಂದ ಸಾಧ್ಯವಿಲ್ಲ, ಒಂದು ಸಂಕಲ್ಪಕ್ಕಾಗಿ 24 x 7 ಗಂಟೆ ಕೆಲಸ ಮಾಡುವವರ ಅಗತ್ಯವಿದೆ, ಮೋದಿಯ ದೂರದೃಷ್ಟಿ ಸ್ಪಷ್ಟವಾಗಿದೆ, ಮೋದಿಯ ಜೀವನವೂ ಸುಸ್ಪಷ್ಟವಾಗಿದೆ ಎಂದರು.

ಕೇಂದ್ರದ ಮಾಜಿ ಸಚಿವ ಶ್ರೀನಿವಾಸಪ್ರಸಾದ್ ಅವರ ನಿಧನ ದುಃಖದ ವಿಚಾರ, ನೈಜ ಜನಸೇವಕರೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ ಎಂದು ನುಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
election campaignkarnataka has become congres ATMNDA govt. done developmental workspm modi in karnataka
0 FacebookTwitterPinterestEmail
admin

previous post
ಸಿಇಟಿ: 50 ಅಂಕ ಹೊರತುಪಡಿಸಿ ಮೌಲ್ಯಮಾಪನ
next post
ಪ್ರಜ್ವಲ್ ರೇವಣ್ಣ ವಿಷಯಕ್ಕೆ ಟ್ವೀಟ್ ಸಮರ!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ