ಬೆಂಗಳೂರು:ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಹಿರಂಗಗೊಂಡ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ವಿವರಣೆ ಕೋರಿ ಜೆಡಿಎಸ್ ಶೋಕಾಸ್ ನೋಟೀಸ್ ಜಾರಿ ಮಾಡಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕಾನೂನಿನ ಚೌಕಟ್ಟಿನಡಿ ಕ್ರಮ
ಅವರನ್ನು ಪಕ್ಷದಿಂದ ಉಚ್ಛಾಟಿಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾದರೂ, ಅವರು ಲೋಕಸಭಾ ಸದಸ್ಯರಾಗಿರುವುದರಿಂದ ಅವರನ್ನು ಏಕಾಏಕಿ ಉಚ್ಛಾಟಿಸಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ಪಕ್ಷದ ಕಾನೂನಿನ ಚೌಕಟ್ಟಿನಲ್ಲಿ ಅಮಾನತುಗೊಳಿಸಲಾಗಿದೆ.
ಈ ಕಾರಣಕ್ಕಾಗಿ ಅವರು ವಿದೇಶದಲ್ಲಿ ಇರುವುದರಿಂದ ನೋಟಿಸ್ ನೀಡಿ ವಿವರಣೆ ಪಡೆಯದೆ ಅಮಾನತು ಮಾಡುವ ತೀರ್ಮಾನ ಕೈಗೊಂಡಿತು.
ಇದೇ ಸಂದರ್ಭದಲ್ಲಿ ಎಸ್‌ಐಟಿ, ರೇವಣ್ಣ ಅವರನ್ನು ಪ್ರಮುಖ ಆರೋಪಿ ಸ್ಥಾನದಲ್ಲಿ ಕೂಡಿಸಿರುವುದರಿಂದ ಈ ಸಂಬಂಧ ವಿವರಣೆ ಪಡೆದು ಮುಂದಿನ ಕ್ರಮದ ಹಿನ್ನೆಲೆಯಲ್ಲಿ ನೋಟೀಸ್ ಜಾರಿ ಮಾಡಲಾಗಿದೆ.