Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ರೇವಣ್ಣ ಮೇ 4ಕ್ಕೆ ಎಸ್‌ಐಟಿ ಮುಂದೆ ಹಾಜರಿ

by KM Shivaraju May 1, 2024
written by KM Shivaraju May 1, 2024 0 comments 2 minutes read
1FacebookTwitterPinterestEmail
362

ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಮೇ 4ರಂದು ನಗರಕ್ಕೆ ಹಿಂತಿರುಗಲಿದ್ದು, ಅಂದೇ ಎಸ್‌ಐಟಿ ಮುಂದೆ ಹಾಜರಾಗಲಿದ್ದಾರೆ.

ಜರ್ಮನಿ ಪ್ರವಾಸ ಕೈಗೊಂಡಿರುವ ಪ್ರಜ್ವಲ್ ಕುಟುಂಬದವರ ಸಲಹೆಯಂತೆ ದೇಶಕ್ಕೆ ಹಿಂತಿರುಗುತ್ತಿದ್ದಾರೆ.

ಪ್ರಜ್ವಲ್ ಹಾಗೂ ಅವರ ತಂದೆ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣ ಆರೋಪ ಹಾಗೂ ಅವರ ಮನೆಯ ಕೆಲಸದಾಕೆ ನೀಡಿರುವ ದೂರಿನ ಆಧಾರದ ಮೇಲೆ ಎಸ್‌ಐಟಿ ಈ ಇಬ್ಬರ ಮೇಲೂ ಪ್ರಕರಣ ದಾಖಲಿಸಿಕೊಂಡಿದೆ.

ಪೆನ್ ಡ್ರೈವ್ ಹಾಗೂ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆಗಾಗಿ ವಿಶೇಷ ಎಸ್‌ಐಟಿ ರಚನೆ ಮಾಡಿದೆ.

ಕಾನೂನು ತಜ್ಞರ ಮೊರೆ

ಎಸ್‌ಐಟಿ ಪ್ರಕರಣ ದಾಖಲು ಮಾಡುತ್ತಿದ್ದಂತೆ ಕಾನೂನು ತಜ್ಞರ ಮೊರೆ ಹೋಗಿರುವ ರೇವಣ್ಣ ಕುಟುಂಬ, ಅವರ ಸಲಹೆಯಂತೆ ಪ್ರಜ್ವಲ್ ಅವರನ್ನು ವಿದೇಶದಿಂದ ಹಿಂದಕ್ಕೆ ಕರೆಸುತ್ತಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಈಗಾಗಲೇ ಹಾಸನಕ್ಕೆ ತೆರಳಿ ಸಂತ್ರಸ್ತೆಯರಿಂದ ಮಾಹಿತಿ ಸಂಗ್ರಹಿಸುತ್ತಿರುವುದಲ್ಲದೆ, ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ವಿಚಾರಣೆಗೆ ಕರೆಸಲು ಅಣಿಯಾಗುತ್ತಿದ್ದಾರೆ.

ಎಚ್.ಡಿ.ರೇವಣ್ಣ, ಹಾಸನ ಮತ್ತು ಬೆಂಗಳೂರಿನಲ್ಲೇ ಇದ್ದರೂ ಇದುವರೆಗೂ ಎಸ್‌ಐಟಿ ತಂಡ ಅವರನ್ನು ಭೇಟಿಯೂ ಆಗಿಲ್ಲ, ವಿಚಾರಣೆಯನ್ನೂ ಮಾಡಿಲ್ಲ.

ಇವರುಗಳ ವಿಚಾರಣೆಗೂ ಮುನ್ನ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಹಾಗೂ ಹಾಸನದ ವಕೀಲ ಮತ್ತು ಬಿಜೆಪಿ ನಾಯಕ ದೇವರಾಜೇಗೌಡ ಅವರಿಂದ ಮಾಹಿತಿ ಸಂಗ್ರಹಿಸಬೇಕಿದೆ.

ದೇವರಾಜೇಗೌಡ ಅವರಿಗೆ ನೋಟೀಸ್

ಕಾರ್ತಿಕ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗಾಗಿ ತನಿಖಾ ತಂಡ ಮುಂದಾಗಿದೆ. ಇದರ ಮಧ್ಯೆ ದೇವರಾಜೇಗೌಡ ಅವರಿಗೆ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ.

ಅವರಿಂದ ಮಾಹಿತಿ ಮತ್ತು ದಾಖಲೆ ಪಡೆದ ನಂತರ ಪ್ರಮುಖ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುತ್ತಾರೆಂದು ಉನ್ನತ ಮೂಲಗಳು ತಿಳಿಸಿವೆ.

ರೇವಣ್ಣ ಅವರಿಗೆ ಪಕ್ಷದ ಶೋಕಾಸ್ ನೋಟಿಸ್
ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ

ಪೆನ್ ಡ್ರೈವ್ ಪ್ರಕರಣವನ್ನು ಕಾಂಗ್ರೆಸ್‌ನ ಕೆಲವು ಮುಖಂಡರು ರಾಜಕೀಯವಾಗಿ ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿರುವ ರೇವಣ್ಣ, ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರಿ ಓಡಿ ಹೋಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದರೆ ಹೋಗುವುದಾಗಿಯೂ ತಿಳಿಸಿದ್ದಾರೆ. ಪ್ರಜ್ವಲ್ ರೇವಣ್ಣ ಕೂಡ, ವಿಚಾರಣೆಗೆ ಕರೆದಲ್ಲಿ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಪ್ರಕರಣ ದಾಖಲಿಸಿ, ಎಫ್‌ಐಆರ್ ಸಿದ್ಧಪಡಿಸುತ್ತಿದ್ದಂತೆ ರೇವಣ್ಣ ಕುಟುಂಬ ರಾಜ್ಯ ಹೈಕೋರ್ಟ್‌ನ ಹಿರಿಯ ವಕೀಲರ ಸಲಹೆ, ಸೂಚನೆ ಪಡೆದು ಅವರ ಮಾರ್ಗದರ್ಶನದಂತೆ ನಡೆಯಲು ಮುಂದಾಗಿದ್ದಾರೆ.

ಏಕಾಏಕಿ ಬಂಧನ ಸಾಧ್ಯವಿಲ್ಲ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಮತ್ತು ಪುರಾವೆ ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ, ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು ಎಂದರು.

ಅದ್ದರಿಂದಲೇ ಸಿಆರ್‌ಪಿಸಿ ಸೆಕ್ಷನ್ 41ಎ ಅಡಿ ನೋಟಿಸ್ ಕೊಟ್ಟಿದ್ದು, ನೋಟಿಸ್ ಪಡೆದವರು 24 ಗಂಟೆ ಒಳಗೆ ತನಿಖಾಧಿಕಾರಿಗಳ ಮುಂದೆ ಬಂದು ಹಾಜರಾಗಬೇಕು, ಹಾಗೊಂದು ವೇಳೆ ಹಾಜರಾಗದಿದ್ದಲ್ಲಿ, ವಿಶೇಷ ತನಿಖಾ ತಂಡ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಕೈಗೊಳ್ಳುತ್ತಾರೆ ಎಂದರು.

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ, ರೇವಣ್ಣ ಪ್ರಮುಖ ಆರೋಪಿ (ಎ1) ಆಗಿದ್ದರೂ, ಪ್ರಕರಣಗಳು ಬೆಳಕಿಗೆ ಬಂದಿದ್ದು ಸಂಶಯಾಸ್ಪದ ವಿಡಿಯೊಗಳಿಂದ, ಹೀಗಾಗಿ ಪ್ರಜ್ವಲ್ ರೇವಣ್ಣ ಅವರ ಹೇಳಿಕೆ ಇಲ್ಲಿ ಅಗತ್ಯವಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no sudden arrest possible - dr.parameshwarprajval coming back to bengaluruprajval revanna before SIT on 4th Mayrevanna family taking advice from lawyers
1 FacebookTwitterPinterestEmail
KM Shivaraju

previous post
ರೇವಣ್ಣ ಅವರಿಗೆ ಪಕ್ಷದ ಶೋಕಾಸ್ ನೋಟಿಸ್
next post
ಪ್ರಜ್ವಲ್ ರೇವಣ್ಣ ಕರೆತರಲು ಸಹಕಾರ ಕೋರಿ ಪ್ರಧಾನಿ ಮೋದಿ ಅವರಿಗೆ ಸಿದ್ದರಾಮಯ್ಯ ಪತ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ