ಮುಖ್ಯಮಂತ್ರಿಗೆ ರಾಹುಲ್ ಗಾಂಧಿ ಪತ್ರ
ಬೆಂಗಳೂರು:ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಿ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಡಿಸೆಂಬರ್ ೨೦೨೩ರಲ್ಲೇ ದೇವೇರಾಜೇಗೌಡ ಎಂಬುವವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಗಮನಕ್ಕೆ ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಗಮನಕ್ಕೆ ತಂದಿದ್ದರೂ, ಕೇಂದ್ರದ ಉನ್ನತ ನಾಯಕರು ಆರೋಪಿ ಪರ ಚುನಾವಣಾ ಪ್ರಚಾರ ಕೈಗೊಂಡಿರುವುದು ಸೋಜಿಗದ ಸಂಗತಿಯಾಗಿದೆ ಎಂದಿದ್ದಾರೆ.
ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ಆರೋಪಿ ದೇಶ ಬಿಟ್ಟು ಓಡಿಹೋಗುವಂತೆ ಅವಕಾಶ ಮಾಡಿಕೊಟ್ಟಿದೆ.
ಮಹಿಳೆಯರ ಮೇಲಿನ ತೀವ್ರ ತೆರನಾದ ದೌರ್ಜನ್ಯ ಪ್ರಕರಣದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ತೋರಿದ್ದನ್ನು ತಮ್ಮ ಎರಡು ದಶಕಗಳ ರಾಜಕೀಯ ಜೀವನದಲ್ಲಿ ಕಂಡಿಲ್ಲ.
ಇಂತಹ ಸನ್ನಿವೇಶದಲ್ಲಿ ಶೋಷಣೆಗೆ ಒಳಗಾದ ನಮ್ಮ ತಾಯಂದಿರು ಮತ್ತು ಸಹೋದರಿಯರ ನ್ಯಾಯಕ್ಕಾಗಿ ಹೋರಾಟ ಮಾಡುವುದು ಕಾಂಗ್ರೆಸ್ ಪಕ್ಷದ ನೈತಿಕ ಹೊಣೆಗಾರಿಕೆಯಾಗಿದೆ.
ಘಟನೆ ಸಂಬಂಧ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ರಾಹುಲ್ ಗಾಂಧಿ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.