ಬೆಂಗಳೂರು:ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಬೆಳಗ್ಗೆ 10-30ಕ್ಕೆ ಪ್ರಕಟವಾಗಲಿದೆ.
ಫಲಿತಾಂಶ ಪ್ರಕಟಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸಿದ್ಧತೆ ನಡೆಸಿದೆ.
ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಫಲಿತಾಂಶ ಬಿಡುಗಡೆ ತಡವಾಗಿತ್ತು.
ಈ ವರ್ಷದ ಮಾರ್ಚ್ 25ರಿಂದ ಏಪ್ರಿಲ್ 6 ರವರೆಗೆ ರಾಜ್ಯದ 2,570 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು.
ವೆಬ್ ಸೈಟ್‌ನಲ್ಲೂ ಫಲಿತಾಂಶ
ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ ಸೈಟ್‌ನಲ್ಲೂ ನೋಡಬಹುದಾಗಿದೆ, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದು.
kseab.karnataka.gov.in ಗೆ ಭೇಟಿ ನೀಡಬಹುದು, ಅಲ್ಲದೆ, karresults.nic.in ವೆಬ್ ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.