Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಪ್ರಜ್ವಲ್ ಪ್ರಕರಣ ಸಿಬಿಐಗೆ ಇಲ್ಲ : ಮುಖ್ಯಮಂತ್ರಿ

by admin May 10, 2024
written by admin May 10, 2024 0 comments 1 minutes read
1FacebookTwitterPinterestEmail
191

ಮೈಸೂರು:ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಇಲ್ಲ, ನಮ್ಮ ಪೊಲೀಸರಿಂದಲೇ ತನಿಖೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುನಾವಣೆಯ ನಿರಂತರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಮೂರು ದಿನ ಊಟಿಯಲ್ಲಿ ವಿಶ್ರಾಂತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ, ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದರು.

ಎಸ್‌ಐಟಿ ಮೇಲೆ ವಿಶ್ವಾಸವಿದೆ

ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್ ಆಗಲೀ ಭಾಗಿಯಾಗಿಲ್ಲ, ನನಗೆ ಎಸ್‌ಐಟಿ ಮೇಲೆ ವಿಶ್ವಾಸವಿದೆ, ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.

ಬಿಜೆಪಿ ಯಾವತ್ತಾದರೂ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದೆಯಾ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವ ಕೆ.ಜೆ. ಜಾರ್ಜ್ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಿತ್ತು, ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

ಬಿಜೆಪಿಯವರೇ ಸಿಬಿಐ ಅನ್ನು ’ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್’ ಎಂದು ಬಣ್ಣಿಸಿದ್ದರು, ದೇವೇಗೌಡರು ’ಚೋರ್ ಬಚಾವೋ ಸಂಸ್ಥೆ’ ಎಂದಿದ್ದರು, ಈಗ ಸಿಬಿಐ ಮೇಲೆ ವಿಶ್ವಾಸ ಬಂತೆ, ನನಗೆ ಸಿಬಿಐ ಮೇಲೆ ವಿಶ್ವಾಸವಿದೆ, ನಮ್ಮ ಪೊಲೀಸರ ಬಗ್ಗೆಯೂ ನಂಬಿಕೆ ಇದೆ, ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ.

ಮಧ್ಯಪ್ರವೇಶ ಮಾಡುವುದಿಲ್ಲ

ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಾಗಲೀ, ತನಿಖೆಯಲ್ಲಾಗಲೀ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ಎಸ್‌ಐಟಿ ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ, ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ.

ಅಂತಾರಾಷ್ಟ್ರೀಯ ಮಟ್ಟದ ತನಿಖೆ ಅಗತ್ಯವಿಲ್ಲ, ನಮ್ಮ ಪೊಲೀಸರ ಮೇಲೆ ನಂಬಿಕೆ ಇಡಬೇಕು, ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುವುದು ನಮ್ಮ ಪೊಲೀಸರಲ್ಲವೇ, ವಿಶೇಷ ತನಿಖಾ ದಳ ರಚಿಸಿರುವಾಗ ನಮ್ಮ ಪೊಲೀಸರನ್ನು ನಂಬಿಕೆ ಇರಬೇಕಲ್ಲವೆ.

ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪದಲ್ಲಿ ಹುರುಳಿಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ, ನಿರೀಕ್ಷಣಾ ಜಾಮೀನು ಅರ್ಜಿ ಏಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.

ದುಡುಕಿ ಮುಖ್ಯಮಂತ್ರಿ ಹುದ್ದೆ ಅವಕಾಶ ಕಳೆದುಕೊಳ್ಳಬೇಡಿ
ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ವಿದ್ಯಾರ್ಥಿನಿಯನ್ನು ಅಭಿನಂದಿಸಿದ ಮುಖ್ಯಮಂತ್ರಿ, ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ‍್ಯಾಂಕ್ ಪಡೆಯಬೇಕು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು ಎಂದು ಆಶಿಸಿದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದಲೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ.

ತಾವೂ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, ಇಂದು ಹೋಬಳಿಗೊಂದರಂತೆ 800ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
belive in sit investigationno cbi enquiry to prajval case - cmsslc result - ankita done good work - siddaramaiah
1 FacebookTwitterPinterestEmail
admin

previous post
ದುಡುಕಿ ಮುಖ್ಯಮಂತ್ರಿ ಹುದ್ದೆ ಅವಕಾಶ ಕಳೆದುಕೊಳ್ಳಬೇಡಿ
next post
ಬರ ನಿರ್ವಹಣೆಗೆ ಅನುಮತಿ ಕೊಡಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ