ಬೆಂಗಳೂರು:ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ ಎನ್ನುವ ಎಚ್.ಡಿ.ಕುಮಾರಸ್ವಾಮಿ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ, ವಿಜಯಪರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದರು.
ಜೆಡಿಎಸ್ ಗತಿ ಕಾದು ನೋಡೋಣ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ, ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ, ಕಾದು ನೋಡೋಣ.
ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿದ್ದಾರೆ, ಪೆನ್‌ಡ್ರೈವ್ ಪ್ರಕರಣ ಆ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ.
ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ, ಬಿಜೆಪಿಯಿಂದ ಕ್ಲೀನ್‌ಚಿಟ್ ಪಡೆದುಕೊಳ್ಳುವುದು ಇದರ ಉದ್ದೇಶವಾಗಿದೆ.
ಸದ್ಯಕ್ಕೆ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದ್ದು, ತನಿಖಾ ಸಂಸ್ಥೆ ತನ್ನ ಕೆಲಸ ಮಾಡಲಿ, ಈ ಬಗ್ಗೆ ಸಚಿವನಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು.