ಬೆಂಗಳೂರು:ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ’ಐಎನ್‌ಡಿಐಎ’ ಒಕ್ಕೂಟದ ಪರ ಅಲೆಯಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಪರೇಷನ್ ಮಾಡುವ ಬಗ್ಗೆ ಮಾತನಾಡಿದ್ದಾರೆ, ಆ ರಾಜ್ಯದಲ್ಲಿ ಅವರ ಸರ್ಕಾರವೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ, ಅವರ ಊಹೆಗಳೆಲ್ಲಾ ರಿವರ್ಸ್ ಆಗಲಿವೆ ಎಂದರು.

ಎಸ್‌ಐಟಿ ಉತ್ತರ ನೀಡುತ್ತದೆ
ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧದ ಮಹಿಳೆ ಅಪಹರಣಕ್ಕೆ ಸಂಬಂಧಿಸಿದ ಆಡಿಯೋ ವಿಡಿಯೋ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಉತ್ತರ ನೀಡುತ್ತದೆ, ಘಟನೆ ಬಗ್ಗೆ ತಮಗೇನೂ ಗೊತ್ತಿಲ್ಲ, ನನ್ನ ಹೆಸರು ಬಳಸಿದರೆ ಮಾಧ್ಯಮಗಳು ಸುದ್ದಿ ಹಾಕುತ್ತವೆ ಎಂಬ ಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಡಿ.ಕೆ. ಶಿವಕುಮಾರ್ ಕುತಂತ್ರ ಎಂಬ ಆರ್. ಅಶೋಕ್ ಮತ್ತು ಅಶ್ವಥ್ ನಾರಾಯಣ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ಕೊಡೋಣ ಎಂದರು.
