Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೇವಣ್ಣ ಬಂಧನ ರಾಜಕೀಯ ಪ್ರೇರಿತ

by admin May 14, 2024
written by admin May 14, 2024 0 comments 2 minutes read
0FacebookTwitterPinterestEmail
229

ಇದೆಲ್ಲದರ ಹಿಂದೆ ಸರ್ಕಾರದ ದೊಡ್ಡ ತಿಮಿಂಗಿಲ !

ಬೆಂಗಳೂರು:ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದೆಲ್ಲದರ ಹಿಂದೆ ಸರ್ಕಾರದಲ್ಲಿರುವ ದೊಡ್ಡ ತಿಮಿಂಗಿಲ ಇದೆ ಎಂದು ಗುಡುಗಿದರು.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ ಎಂದು ನೇರವಾಗಿ ಆರೋಪಿಸಿದರು.

ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನಡೆದ ವಾದ-ಪ್ರತಿವಾದದಿಂದ ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಮತ್ತು ನಮ್ಮ ಕುಟುಂಬವನ್ನು ಗುರಿಯಾಗಿಟ್ಟುಕೊಂಡಿದ್ದು ಎಂಬುದು ಮೇಲ್ನೋಟಕ್ಕೆ ಕಾಣುತ್ತದೆ.

ತಪ್ಪು ಮಾಡದವರನ್ನು ಶಿಕ್ಷಿಸಿ, ಆರೋಪಿಗಳನ್ನು ಬಂಧಿಸದಿರುವುದಕ್ಕೇ ಸರ್ಕಾರದಲ್ಲಿರುವ ದೊಡ್ಡ ತಿಮಿಂಗಲವೇ ಕಾರಣ ಎಂದು ಶಿವಕುಮಾರ್ ಹೆಸರೇಳದೇ ಅವರ ವಿರುದ್ಧ ಹರಿಹಾಯ್ದರು.

ತೇಜೋವಧೆ ಮಾಡಲು ಸಭೆ

ಅಷ್ಟೇ ಅಲ್ಲ, ದೊಡ್ಡ ತಿಂಮಿಂಗಲ, ನನ್ನ ತೇಜೋವಧೆ ಮಾಡಲು ಮಂಡ್ಯದ ಐದು ಚಿಕ್ಕ ತಿಮಿಂಗಲಗಳ ಜೊತೆ ಸಭೆ ನಡೆಸಿ, ಅವರ ಬಾಯಿಂದ ಆರೋಪಗಳನ್ನು ಮಾಡಿಸುತ್ತಿದ್ದಾರೆ.

ನನ್ನದು ತೆರೆದ ಪುಸ್ತಕ, ಮಾಡಿದ ತಪ್ಪನ್ನು ವಿಧಾನಸಭೆಯಲ್ಲೇ ಒಪ್ಪಿಕೊಂಡಿದ್ದೇನೆ, ನಾನು ಯಾರಿಗೂ ಅನ್ಯಾಯ ಮಾಡಿಲ್ಲ, ಕಷ್ಟವನ್ನೂ ಕೊಟ್ಟಿಲ್ಲ, ಆದರೆ ನಾನು ಕಷ್ಟ ಅನುಭವಿಸಿದ್ದೇನೆ, ತಾಕತ್ತಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ತಿಮಿಂಗಲಗಳಿಗೆ ಸವಾಲು ಹಾಕಿದರು.

ಮಾಹಿತಿ ತಂತ್ರಜ್ಞಾನ ಯುಗ ಬೆಳೆಯುತ್ತಿದ್ದಂತೆ ಇಂತಹ ಸಿಡಿಗಳ ಜಾಲಕ್ಕೆ ಸಿಲುಕಿ ಕುಟುಂಬಗಳು ನಾಶವಾಗುತ್ತಿವೆ, ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಲು ಎಸ್‌ಐಟಿ ಪ್ರಮಾಣಿಕ ತನಿಖೆ ನಡೆಸಿ, ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.

ಆರೋಪಿಯನ್ನು ಕರೆತರಲಿ

ಮಕ್ಕಳು ದಾರಿ ತಪ್ಪಿದರೆ ತಂದೆ-ತಾಯಿ ಏನೂ ಮಾಡಲು ಸಾಧ್ಯವಿಲ್ಲ, ಪ್ರಜ್ವಲ್ ರೇವಣ್ಣ ಅವರನ್ನು ವಹಿಸಿಕೊಂಡು ಮಾತನಾಡುವ ಪ್ರಶ್ನೆಯೇ ಇಲ್ಲ, ರೆಡ್ ಕಾರ್ನರ್, ಬ್ಲೂಕಾರ್ನರ್ ಎಂದು ಹೇಳಿಕೊಂಡು ಕಾಲ ಕಳೆಯುವ ಬದಲು ಗೃಹ ಸಚಿವ ಡಾ.ಪರಮೇಶ್ವರ್ ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಆರೋಪಿಯನ್ನು ಕರೆತರಲಿ.

ಅದನ್ನು ಬಿಟ್ಟು ಗೌಡರ ಕುಟುಂಬಕ್ಕೆ ಮಸಿ ಬಳಿಯಬೇಕೆಂಬ ಉದ್ದೇಶದಿಂದಲೇ ದೊಡ್ಡ ತಿಮಿಂಗಲದ ಮಾತು ಕೇಳಿಕೊಂಡು ಸರ್ಕಾರಕ್ಕೆ ಮಸಿ ಬಳಿದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಸಂತ್ರಸ್ತೆಯೊಬ್ಬರು ಕೇಂದ್ರ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಪ್ರಕರಣವನ್ನು ತನಿಖೆ ಮಾಡಿದ್ದೀರಾ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಎಸ್‌ಐಟಿ ಮುಂದಿಟ್ಟುಕೊಂಡು ನೀವು ನಮ್ಮ ಕುಟುಂಬದವರ ಮೇಲೆ ಗುರಿ ಮಾಡಿಕೊಂಡು ದಾಳಿ ಮಾಡುತ್ತಿದ್ದೀರಿ, ಇದು ನಿಮಗೆ ತಿರುಗುಬಾಣವಾಗುತ್ತದೆ.

ಲೋಕಸಭಾ ಚುನಾವಣಾ ಮತದಾನಕ್ಕೂ ಮುನ್ನ ಪೆನ್‌ಡ್ರೈವ್ ಹಂಚಿ ಮಹಿಳೆಯರ ಮಾನ ತೆಗೆದ ಆರೋಪಿಗಳನ್ನು ಇದುವರೆಗೂ ಏಕೆ ಬಂಧಿಸಿಲ್ಲ.

ಜೈಲಿನಿಂದ ರೇವಣ್ಣ ಬಿಡುಗಡೆ
ಗೃಹ ಸಚಿವರಿಗೆ ತರಾಟೆ

ಇದರ ಹಿಂದೆ ಇರುವ ದೊಡ್ಡ ತಿಮಿಂಗಲವನ್ನು ಪ್ರಶ್ನೆ ಮಾಡುವ ತಾಕತ್ತು ನಿಮಗಿದೆಯೇ ಎಂದು ಗೃಹ ಸಚಿವರನ್ನು ತರಾಟೆಗೆ ತೆಗೆದುಕೊಂಡರು.

ಎಲ್ಲವೂ ಬಯಲಾಗುತ್ತದೆ, ತಪ್ಪಿತಸ್ತರಿಗೆ ಶಿಕ್ಷೆ ಕಾದಿದೆ, ಸ್ವಲ್ಪ ಕಾದು ನೋಡಿ ಎಂದರು.

ನಮ್ಮ ಬಳಿ ಪೆನ್‌ಡ್ರೈವ್ ಇರುವುದು ಅಶ್ಲೀಲ ಪೆನ್‌ಡ್ರೈವ್ ಅಲ್ಲ, ವರ್ಗಾವರ್ಗಿಗೆ ಸಂಬಂಧಿಸಿದ ದಾಖಲೆ.

ತಪ್ಪಿತಸ್ತರ ವಿರುದ್ಧ ಮುಖ್ಯಮಂತ್ರಿ ಅವರು ಕ್ರಮ ಕೈಗೊಳ್ಳುತ್ತೇನೆ ಎಂದರೆ ಅದನ್ನು ಬಹಿರಂಗ ಪಡಿಸುತ್ತೇನೆ.

ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ

ವಕೀಲರಾದ ದೇವರಾಜೇಗೌಡರನ್ನು ಒಂದು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದು ಏಕೆ, ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯಿತು, ಆಡಿಯೋ ಮೂಲಕ ಸಿಕ್ಕಿಬಿದ್ದ ದೊಡ್ಡ ತಿಮಿಂಗಲವನ್ನು ಬಿಟ್ಟು ದೇವರಾಜೇಗೌಡರನ್ನು ಬಂಧನ ಮಾಡಿದ್ದಾರೆ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

ವಿಡಿಯೋದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರಕಾರಕ್ಕೆ ಅನುಕಂಪ ಎನ್ನುವುದು ಇದೆಯೇ, ಈ ಪ್ರಕರಣಕ್ಕೆ ಸಂಬಂಧಿಸಿ ನಾನು ಯಾರನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ, ಮಾಹಿತಿ ತಂತ್ರಜ್ಞಾನದ ಈ ಕಾಲದಲ್ಲಿ ಅಪರಾಧಿ ನಿರಪರಾಧಿ ಆಗುತ್ತಾನೆ, ಸರಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ, ಅದನ್ನು ಬಿಟ್ಟು ರೇವಣ್ಣ ಸುತ್ತ ತನಿಖೆ ಗಿರಕಿ ಹೊಡೆಯುವ ಅಗತ್ಯವಿಲ್ಲ ಎಂದರು.

ಕೆಲವೇ ದಿನಗಳಲ್ಲಿ ಇದೆಲ್ಲಾ ಹೊರಗೆ ಬರಲಿದೆ, ಮಹಿಳೆಯರಿಗೆ ಬೆದರಿಸಿದ್ದು, ಧಮ್ಕಿ ಹಾಕಿದ್ದು ಎಲ್ಲವೂ ಆಚೆ ಬರಲಿದೆ, ನೀವು ಅದರ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಗೃಹ ಸಚಿವರೇ ಎಂದು ಡಾ.ಜಿ.ಪರಮೇಶ್ವರ್ ಅವರನ್ನು ನೇರವಾಗಿ ಪ್ರಶ್ನಿಸಿದರು.

ಹಾಸನದಲ್ಲಿ ಪೆನ್‌ಡ್ರೈವ್‌ಗಳನ್ನು ಹಂಚಿರುವ ವ್ಯಕ್ತಿಗಳು ಎಲ್ಲಿ, ಎಫ್‌ಐಆರ್ ದಾಖಲಾಗಿರುವ ಒಬ್ಬ ವ್ಯಕ್ತಿಯನ್ನೂ ಎಸ್‌ಐಟಿ ಹಿಡಿಯಲಿಲ್ಲ, ವಿಡಿಯೋಗಳನ್ನು ಮೊದಲು ಕದ್ದು ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣನಾದ ಕಾರು ಚಾಲಕನನ್ನು ಇದುವರೆಗೂ ತನಿಖಾ ತಂಡ ಬಂಧನ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
big man behind this - hdkbring the real culprit - hdkrevanna arrest politicaly motivated - hd kumara swamy
0 FacebookTwitterPinterestEmail
admin

previous post
ಜೈಲಿನಿಂದ ರೇವಣ್ಣ ಬಿಡುಗಡೆ
next post
ಕರ್ನಾಟಕದಲ್ಲಿ ಸರಣಿ ಚುನಾವಣೆ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ