Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದಾವೆಗೆ ಜೆಡಿಎಸ್ ಆಗ್ರಹ

by admin May 22, 2024
written by admin May 22, 2024 0 comments 2 minutes read
0FacebookTwitterPinterestEmail
207

ಪ್ರಜ್ವಲ್ ಪ್ರಕರಣ ಕುರಿತ ಹೇಳಿಕೆ

ಬೆಂಗಳೂರು:ನಾಲ್ಕು ನೂರು ಮಹಿಳೆಯರ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಆರೋಪಿಸಿದ್ದ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ಇಂದಿಲ್ಲಿ ದೂರು ನೀಡಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್‌ರೇಪ್ ಬಗ್ಗೆ ಹೇಳಿದ್ದರು, ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್‌ಐಟಿ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಪೊಲೀಸ್ ಡಿಜಿಪಿಗೆ ದೂರು

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ನಗರದ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಅವರ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದೆ.

ಕಾಂಗ್ರೆಸ್ ನಾಯಕ ಹಾಗೂ ವಯನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ, ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ, ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಮೇ 2ರಂದು ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ, ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಜೆಡಿಎಸ್ ಸಲ್ಲಿಸಿದೆ.

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ
ಜನಪ್ರತಿನಿಧಿಯಾಗಿ ಸಲ್ಲದ ಹೇಳಿಕೆ

ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವುದರ ಬಗ್ಗೆ ಮಾತನಾಡದೆ, ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆಯಾಗಿದೆ, ನಾಲ್ಕು ನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲಾ ಮಾಹಿತಿ ಇದೆ ಹಾಗೂ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿ ಕೇಸ್ ದಾಖಲಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಈ ತಂಡ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಕರೆಸಬೇಕು.

ನಾಲ್ಕು ನೂರು ಮಹಿಳೆಯರ ರೇಪ್ ಎಂಬುದಾಗಿ ಹೇಳಿದ್ದು ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ್ದಾರೆ, ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.

ಪೆನ್‌ಡ್ರೈವ್ ಏಕಪಕ್ಷೀಯ ತನಿಖೆ

ಅಲ್ಲದೆ, ಪೆನ್‌ಡ್ರೈವ್ ಹಂಚಿಕೆ ಬಗ್ಗೆ ಜೆಡಿಎಸ್ ಆಯೋಗ ಮಾತನಾಡಿ, ಎಸ್‌ಐಟಿ ಏಕಪಕ್ಷೀಯ ತನಿಖೆ ನಡೆಸುತ್ತಿದೆ, ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ.

ಪೆನ್ ಡ್ರೈವ್ ಹಂಚಿದ ಆರೋಪಿಗಳ ಬಗ್ಗೆ ಮೌನ ವಹಿಸಿದೆ, ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೂ ಅವರನ್ನು ಎಸ್‌ಐಟಿ ಬಂಧನ ಮಾಡಿಲ್ಲ ಎಂದು ಜೆಡಿಎಸ್ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dgp receives complaintjds complaint aganist rahul gandhipendrive - one sided investigation - jdsstatement on prajval case
0 FacebookTwitterPinterestEmail
admin

previous post
ಸಂಚಾರ ದಟ್ಟಣೆ ನಿವಾರಣೆಗೆ ’ಡಬ್ಬಲ್ ಡೆಕ್ಕರ್’ ವ್ಯವಸ್ಥೆ
next post
ಪರಿಷತ್ ಚುನಾವಣೆ ಟಿಕೆಟ್‌ಗೆ ಭಾರೀ ಪೈಪೋಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ