Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪರಿಷತ್ ಚುನಾವಣೆ ಟಿಕೆಟ್‌ಗೆ ಭಾರೀ ಪೈಪೋಟಿ

by KM Shivaraju May 22, 2024
written by KM Shivaraju May 22, 2024 0 comments 2 minutes read
0FacebookTwitterPinterestEmail
210

ಬೆಂಗಳೂರು:ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13ರಂದು ನಡೆಯಲಿರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಸಚಿವ ಎನ್.ಎಸ್.ಬೋಸರಾಜು, ಬಿಜೆಪಿಯಿಂದ ಅಶೋಕ್ ಹಾರ್ನಳ್ಳಿ, ರವಿಕುಮಾರ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಪರಿಷತ್ತಿನ ಹನ್ನೊಂದು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 7, ಬಿಜೆಪಿಗೆ 3 ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವುದು ನಿಶ್ಚಿತವಾಗಿದ್ದು, ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಟಿಕೆಟ್‌ಗಾಗಿ ಮೂರೂ ಪಕ್ಷಗಳಲ್ಲಿ ಬಿರುಸಿನ ಲಾಬಿ ಆರಂಭವಾಗಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದಾವೆಗೆ ಜೆಡಿಎಸ್ ಆಗ್ರಹ
ನೂರಕ್ಕೂ ಹೆಚ್ಚು ಆಕಾಂಕ್ಷಿ

ಆಡಳಿತಾರೂಢ ಕಾಂಗ್ರೆಸ್‌ನಲ್ಲಂತೂ ಏಳು ಸ್ಥಾನಗಳಿಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಪ್ರತಿಪಕ್ಷ ಬಿಜೆಪಿಗೆ ಮೂರು ಸ್ಥಾನ ದಕ್ಕಲಿದ್ದು, ಇದಕ್ಕಾಗಿ 10 ಮಂದಿ ಪ್ರಬಲ ಪೈಪೋಟಿ ನಡೆಸಿದ್ದಾರೆ.

ಇನ್ನು ಜೆಡಿಎಸ್‌ಗೆ ಒಂದು ಸ್ಥಾನ ದೊರೆಯಲಿದ್ದು ಅದಕ್ಕೆ ನಾಲ್ವರು ಭಾರೀ ಪ್ರಬಲರೇ ಪೈಪೋಟಿ ನಡೆಸಿದ್ದು, ಮೂರೂ ಪಕ್ಷಗಳು ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅಭ್ಯರ್ಥಿಗಳ ಆಯ್ಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೋಜನಕೂಟದಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಪ್ರಜ್ವಲ್ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ
ಬಹುತೇಕರಿಗೆ ಮತ್ತೆ ಟಿಕೆಟ್

ಪರಿಷತ್ ಸದಸ್ಯತ್ವದಿಂದ ನಿವೃತ್ತಿ ಹೊಂದುತ್ತಿರುವ ಬಹುತೇಕರಿಗೆ ಮತ್ತೆ ಟಿಕೆಟ್ ದೊರೆಯುವ ಸಾಧ್ಯತೆ ಇಲ್ಲ.

ಇನ್ನು ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಸಂಪುಟದ ಸದಸ್ಯರಾಗಿರುವ ಎನ್.ಎಸ್.ಬೋಸರಾಜು ಅವರ ಸದಸ್ಯತ್ವ ಅವಧಿ ಮುಕ್ತಾಯವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಪುನಃ ವಿಧಾನಪರಿಷತ್ತಿನ ಕಣಕ್ಕಿಳಿಸುವುದು ಖಚಿತವಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಅವರ ಸದಸ್ಯತ್ವದ ಅವಧಿ ಮುಕ್ತಾಯವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮತ್ತೊಂದು ಅವಧಿಗೆ ಮುಂದುವರಿಯಲು ಅವರು ಬಯಸಿದ್ದಾರೆ.

ಸಿದ್ದರಾಮಯ್ಯ ತಮ್ಮ ಪುತ್ರನ ಬದಲು ಪಕ್ಷದ ಕಾರ್ಯಕರ್ತ ವಿಜಯಕುಮಾರ್ (ಮೈಸೂರು) ಅವರಿಗೆ ಒಕ್ಕಲಿಗ ಕೋಟಾದಿಂದ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸಲಹೆ ಮಾಡಿದ್ದಾರೆ.

ಶಿವಕುಮಾರ್ ಪಟ್ಟು

ಆದರೆ, ಶಿವಕುಮಾರ್ ತಮ್ಮ ರಾಜಕೀಯ ದೂರದೃಷ್ಟಿಯಿಂದ ಡಾ.ಯತೀಂದ್ರ ಅವರನ್ನೇ ಪರಿಷತ್ತಿಗೆ ಅಭ್ಯರ್ಥಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇದೇ ರೀತಿ ನಟರಾಜ್ ಗೌಡ, ಚಾಮರಾಜನಗರದ ನರೇಂದ್ರ, ಬಿ.ಎಲ್.ಶಂಕರ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಟಿಕೆಟ್‌ಗಾಗಿ ಲಾಬಿ ನಡೆಸಿದ್ದು, ಈ ಮಧ್ಯೆ ಜಾತಿ, ಪ್ರದೇಶಾವಾರು ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ.

ಕುರುಬ, ಒಕ್ಕಲಿಗ, ಲಿಂಗಾಯತ, ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ ಮತ್ತು ಮಹಿಳೆಗೆ ಪ್ರಾತಿನಿಧ್ಯ ನೀಡಲು ನಿರ್ಧರಿಸಿರುವ ಕಾಂಗ್ರೆಸ್ ಟಿಕೆಟ್ ನೀಡುವ ಸಂಬಂಧ ಮೇ 27ರಂದು ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ.

ಸಂಚಾರ ದಟ್ಟಣೆ ನಿವಾರಣೆಗೆ ’ಡಬ್ಬಲ್ ಡೆಕ್ಕರ್’ ವ್ಯವಸ್ಥೆ
ಮೇ 29 ನಂತರ ಅಂತಿಮ ಪಟ್ಟಿ

ಈ ಚರ್ಚೆಯ ನಂತರ ವಿಧಾನಪರಿಷತ್ತಿನಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಪಟ್ಟಿ ತಯಾರಾಗಲಿದ್ದು ಮೇ 29 ರಂದು ದಿಲ್ಲಿಯಲ್ಲಿ ನಡೆಯಲಿರುವ ಚರ್ಚೆಯ ನಂತರ ಅಂತಿಮ ಪಟ್ಟಿ ಸಿದ್ಧವಾಗಲಿದೆ.

ಬಿಜೆಪಿಗೆ 3 ಸ್ಥಾನಗಳನ್ನು ಗೆಲ್ಲಲು ಅವಕಾಶವಿದ್ದು ಹಿರಿಯ ನ್ಯಾಯವಾದಿ ಅಶೋಕ್ ಹಾರ್ನಳ್ಳಿ, ಹಾಲಿ ಸದಸ್ಯರಾಗಿರುವ ರವಿಕುಮಾರ್ ಅವರಿಗೆ ಟಿಕೆಟ್ ಖಚಿತವಾಗಿದ್ದು, ಉಳಿದ ಒಂದು ಸ್ಥಾನ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಇಲ್ಲವೇ ಸಿ.ಟಿ.ರವಿ ಅವರಿಗೆ ದೊರೆಯಲಿದೆ.

ಜಾತ್ಯತೀತ ಜನತಾದಳಕ್ಕೆ ಒಂದು ಸ್ಥಾನ ಗೆಲ್ಲುವ ಅವಕಾಶವಿದ್ದು ಕುಪೇಂದ್ರರೆಡ್ಡಿ, ಬಿ.ಎಂ.ಫಾರೂಕ್ ಮತ್ತು ಜವರಾಯಿಗೌಡರ ಮಧ್ಯೆ ತೀವ್ರ ಪೈಪೋಟಿ ಇದ್ದು ಜವರಾಯಿಗೌಡರಿಗೆ ಈ ಸ್ಥಾನ ದೊರಕುವ ಸಾಧ್ಯತೆ ಇದೆ.

ವಿಧಾನಸಭೆಯ ಬಲಾಬಲದ ಆಧಾರದ ಮೇಲೆ ಪರಿಷತ್ತಿಗೆ ಆಯ್ಕೆಗೊಳ್ಳಲು ಒಬ್ಬರಿಗೆ 19 ಮತಗಳ ಅಗತ್ಯವಿದೆ. ಇದರ ಆಧಾರದ ಮೇಲೆ ಕಾಂಗ್ರೆಸ್‌ಗೆ ಏಳು, ಬಿಜೆಪಿಗೆ ಮೂರು ಹಾಗೂ ಜೆಡಿಎಸ್‌ಗೆ ಒಂದು ಸ್ಥಾನ ದಕ್ಕಲಿದ್ದು, ಮೂರೂ ಪಕ್ಷಗಳು ತಮ್ಮ ತಮ್ಮ ಶಕ್ತಿಗನುಗುಣವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದ್ದು, ನಿರೀಕ್ಷೆಯಂತೆ ನಡೆದರೆ, 11 ಮಂದಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres 7 seats - bjp 3 seats - jds will get one seatcouncil's 11 seats electionhundreds of aspirantsjune 13th election
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ದಾವೆಗೆ ಜೆಡಿಎಸ್ ಆಗ್ರಹ
next post
ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿರ್ಧಾರ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ