62
ಬದುಕಿನ ಕ್ಷಣಗಳನ್ನು ನೆನಪಿಸಿಕೊಂಡ ಸಿದ್ದರಾಮಯ್ಯ
ಮೈಸೂರು:ನನಗೆ ಮೈಸೂರು ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಬದುಕಿನ ಹಿಂದಿನ ಕ್ಷಣಗಳನ್ನು ನೆನಪಿಸಿಕೊಂಡರು.
ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು, ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನೆನಪು ಮನಸ್ಸಿಗೆ ಸದಾ ಹತ್ತಿರ
ಹುಟ್ಟೂರಿನಿಂದ ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ.
ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಮುಖ್ಯಮಂತ್ರಿ ಸ್ಮರಿಸಿದ್ದಾರೆ.
ಟ್ವೀಟ್ನೊಂದಿಗೆ ತಾವು ಮೈಲಾರಿ ಹೋಟೆಲ್ನಲ್ಲಿ ಉಪಹಾರ ಸೇವಿಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.