Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾಂಗ್ರೆಸ್‌ನ ಮೊದಲ ಬಾರಿ ಶಾಸಕರಿಗೆ ಬಿಜೆಪಿ ಗಾಳ !

by KM Shivaraju May 25, 2024
written by KM Shivaraju May 25, 2024 0 comments 2 minutes read
0FacebookTwitterPinterestEmail
523

ಬೆಂಗಳೂರು:ಕಾಂಗ್ರೆಸ್‌ನಿಂದ ಇದೇ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಗೊಂಡಿರುವ ಬಹುತೇಕ ಶಾಸಕರು ಬಿಜೆಪಿಯತ್ತ ಹೆಜ್ಜೆ ಇಟ್ಟಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದತೆ ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಳಿಸಲು ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕಾರ್ಯತಂತ್ರ ಸಿದ್ಧಗೊಂಡಿದೆ.

ಇದರ ಉಸ್ತುವಾರಿ ಅಲ್ಲಿನ ಮುಖ್ಯಮಂತ್ರಿಗಳೇ ವಹಿಸಿಕೊಂಡಿದ್ದು, ಜೊತೆಗೆ ಎನ್‌ಸಿಪಿಯ ಹಿರಿಯ ನಾಯಕ ಪ್ರಫುಲ್ ಪಟೇಲ್, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತರಲು ಯತ್ನಿಸುತ್ತಿದ್ದಾರೆ.

ಇಬ್ಬರು ಸಚಿವರ ಮೂಲಕ ಆಪರೇಷನ್ ಕಮಲ

ಸಿದ್ದರಾಮಯ್ಯ ಸಂಪುಟದಲ್ಲಿರುವ ಇಬ್ಬರು ಸಚಿವರ ಮೂಲಕ ಆಪರೇಷನ್ ಕಮಲಕ್ಕೆ ಶಾಸಕರನ್ನು ಸೆಳೆಯುವ ಕಾರ್ಯ ಅತ್ಯಂತ ಗೌಪ್ಯವಾಗಿ ನಡೆದಿದೆ.

ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಅಭಿವೃದ್ಧಿಯಾಗದೆ, ಆಡಳಿತ ಪಕ್ಷದ ಶಾಸಕರೇ ಜನರಿಂದ ಛೀಮಾರಿಗೆ ಒಳಗಾಗುತ್ತಿದ್ದಾರೆ.

ಅದರಲ್ಲೂ ಆಡಳಿತ ಪಕ್ಷದಲ್ಲಿ ಪ್ರಥಮ ಬಾರಿಗೆ ವಿಧಾನಸಭೆಗೆ ಆಯ್ಕೆಗೊಂಡವರಿಗೆ ಏನು ಮಾಡಬೇಕೆಂದು ತೋಚದಾಗಿದೆ.

ಬಹುತೇಕರಿಗೆ ಅಸಮಾಧಾನ

ಜನಬಲ, ಹಣಬಲದಿಂದ ಚುನಾವಣೆ ಗೆದ್ದ ನಂತರ ಕ್ಷೇತ್ರದ ಅಭಿವೃದ್ಧಿ ಕಾರ್ಯ ಆಗದಿರುವುದು ಬಹುತೇಕರಿಗೆ ಅಸಮಾಧಾನ ತಂದಿದೆ.

ಈ ಬಗ್ಗೆ ತಮ್ಮ ಪಕ್ಷದ ನಾಯಕರು ಹಾಗೂ ಸಚಿವರ ಬಳಿ ಹೇಳಿಕೊಂಡರೂ ಪ್ರಯೋಜನವಾಗುತ್ತಿಲ್ಲ.

ಇನ್ನು ಸಚಿವರು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ಗುತ್ತಿಗೆಗಳನ್ನು ನೇರವಾಗಿ ನೀಡಿ ಸ್ಥಳೀಯ ಶಾಸಕರನ್ನು ಕಡೆಗಾಣಿಸುತ್ತಿದ್ದಾರೆ ಎಂಬ ಅಸಮಾಧಾನವೂ ಇದೆ.

ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದರೆ ಜನರ ಕಷ್ಟಕ್ಕೆ ಸ್ಪಂದಿಸಬಹುದು, ಆದರೆ ಕಳೆದ ಒಂದು ವರ್ಷದಿಂದ ಇದು ಸಾಧ್ಯವಾಗಿಲ್ಲ.

ಜನ ಮೂಲಸೌಕರ್ಯ ಕೇಳುತ್ತಾರೆ

ಎಷ್ಟೇ ಗ್ಯಾರಂಟಿ ಕೊಟ್ಟರೂ ಜನತೆ ಮೂಲಸೌಕರ್ಯವನ್ನೂ ಕೇಳುತ್ತಾರೆ, ಶಾಸಕರಾಗಿ ಒಂದು ರಸ್ತೆ ಮಾಡಲು ಆಗಲಿಲ್ಲ ಎಂದರೆ, ನಾವು ಅಧಿಕಾರಕ್ಕೆ ಬಂದು ಏನು ಸುಖ ಎಂಬ ವ್ಯಥೆ ಅವರಲ್ಲಿ ಕಾಡುತ್ತಿದೆ.

ಇಂತಹವರನ್ನೇ ಗುರಿಯಾಗಿಟ್ಟಕೊಂಡು ಬಿಜೆಪಿ ಆಪರೇಷನ್ ಕಮಲ ಆರಂಭಿಸಿದೆ, ಬಹುತೇಕ ಶಾಸಕರು ಮತ್ತು ಮುಖಂಡರು ಮಹಾರಾಷ್ಟ್ರ ಹಾಗೂ ಗೋವಾದ ನಾಯಕರ ಜೊತೆ ಗೌಪ್ಯ ಸಂಪರ್ಕದಲ್ಲಿದ್ದಾರೆ.

ಇದು ಒಂದು ಹಂತಕ್ಕೆ ತಲುಪುತ್ತಿದ್ದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ನಿರಂತರವಾಗಿ ಬೆಂಗಳೂರಿಗೆ ಬಂದು ಮುಖಂಡರೊಂದಿಗೆ ಸಮಾಲೋಚಿಸಿ, ಹಿಂತಿರುಗುತ್ತಿದ್ದಾರೆ.

ಇದರ ಸುಳಿವು ಮುಖ್ಯಮಂತ್ರಿ ಅವರ ಗಮನಕ್ಕೂ ಬಂದಿದೆ, ಹೀಗಾಗಿಯೇ ಹಿರಿಯ ಶಾಸಕರಿಗೆ ಅಧಿಕಾರ ನೀಡಿದ್ದಾರೆ.

ನಿಮ್ಮ ಮಗನನ್ನು ಸಾಯಲು ವಿದೇಶಕ್ಕೆ ಕಳಿಸಿದಿರಾ !
ಶಾಸಕರ ನಿಧಿ ಬಿಡುಗಡೆಯಾಗಿಲ್ಲ

ಮುಂಗಡಪತ್ರದಲ್ಲಿ ಶಾಸಕರ ನಿಧಿಗೆ ಹಣ ಮೀಸಲಿರಿಸಿದ್ದಾರೆ, ಆದರೆ ಅದು ಬಿಡುಗಡೆಯಾಗಿಲ್ಲ.

ಲೋಕಸಭಾ ಚುನಾವಣೆಯ ಬಿರುಸಿನಲ್ಲೂ ಈ ಆಪರೇಷನ್ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಸಕ್ತ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸಂಖ್ಯೆಯಲ್ಲಿ ಬಲಿಷ್ಠವಾಗಿದೆ, ಪ್ರತಿಪಕ್ಷ ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್‌ನ ಒಟ್ಟು ಶಾಸಕರ ಸಂಖ್ಯೆ 85.

ಎನ್‌ಡಿಎ ಕೂಟಕ್ಕೆ 30 ಸದಸ್ಯರ ಅಗತ್ಯ

ಎನ್‌ಡಿಎ ಕೂಟಕ್ಕೆ ವಿಧಾನಸಭೆಯಲ್ಲಿ 113 ಶಾಸಕರ ಬಲ ಗಳಿಸಲು 30 ಸದಸ್ಯರ ಅಗತ್ಯವಿದೆ.

ಈ ಹಿಂದೆ ಎರಡು ಬಾರಿ ಆಪರೇಷನ್ ಕಮಲ ಮಾಡಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 18 ರಿಂದ 20 ಶಾಸಕರ ರಾಜೀನಾಮೆ ಕೊಡಿಸಿ, ಬಿಜೆಪಿ ಅಧಿಕಾರಕ್ಕೆ ಬಂದಿತ್ತು.

ಆದರೆ ಇದೀಗ ಸಂಖ್ಯೆ ದೊಡ್ಡದಿದೆ, ಅಗತ್ಯದಷ್ಟು ಶಾಸಕರ ರಾಜೀನಾಮೆ ಕೊಡಿಸುತ್ತಾರೋ, ಇಲ್ಲವೇ ಮಹಾರಾಷ್ಟ್ರ ಮಾದರಿಯಲ್ಲಿ ಮೂರನೇ ಎರಡರಷ್ಟು ಶಾಸಕರನ್ನು ಸೆಳೆದು ಅಧಿಕಾರಕ್ಕೆ ಬರುತ್ತಾರೊ ಎಂಬ ಮಾತುಗಳು ಕೇಳಿಬರುತ್ತಿವೆ.

ಏನೇ ಅದರೂ ಆಪರೇಷನ್ ಕಮಲ ಅಂತೂ ಗೌಪ್ಯವಾಗಿ ಬಿರುಸಿನಿಂದ ನಡೆದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka govt. in troublenda activeneed more than 30 mla'soperation lotus
0 FacebookTwitterPinterestEmail
KM Shivaraju

previous post
ನಿಮ್ಮ ಮಗನನ್ನು ಸಾಯಲು ವಿದೇಶಕ್ಕೆ ಕಳಿಸಿದಿರಾ !
next post
ಕೆಪಿಸಿಸಿ ಅಧ್ಯಕ್ಷಗಾದಿಗೆ ದೆಹಲಿಯಲ್ಲಿ ಲಾಬಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ