Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಜ್ವಲ್ ನಿರೀಕ್ಷಣಾ ಜಾಮೀನು ಅರ್ಜಿ

by KM Shivaraju May 29, 2024
written by KM Shivaraju May 29, 2024 0 comments 2 minutes read
0FacebookTwitterPinterestEmail
250

ಬೆಂಗಳೂರು:ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಂಧಿಸದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಪ್ರಜ್ವಲ್ ವಕೀಲರು, ಎಸ್‌ಐಟಿ ಹೂಡಿರುವ ಮೂರು ಮೊಕದ್ದಮೆಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ 31ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ.

ಪ್ರಜ್ವಲ್ ಹಿಂತಿರುಗುವ ಅನುಮಾನ

ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಪ್ರಜ್ವಲ್ ನಗರಕ್ಕೆ ಹಿಂತಿರುಗುವ ಬಗ್ಗೆ ಅನುಮಾನಗಳು ಎದುರಾಗಿವೆ.

ಆದರೆ, ಜರ್ಮನಿಯ ಮ್ಯೂನಿಕ್ ನಗರದಿಂದ ಬೆಂಗಳೂರಿಗೆ ಆಗಮಿಸಲು ವಿಮಾನ ಟೆಕೆಟ್ ಕಾಯ್ದಿರಿಸಿದ್ದಾರೆ.

ಈ ಹಿಂದೆಯೂ ಎರಡು ಬಾರಿ ಟಿಕೆಟ್ ಕಾಯ್ದಿರಿಸಿದ್ದ ಪ್ರಜ್ವಲ್, ನಂತರ ತಮ್ಮ ಮನಸ್ಸು ಬದಲಿಸಿ ಭಾರತಕ್ಕೆ ಹಿಂತಿರುಗಿರಲಿಲ್ಲ ಎಂಬುದನ್ನು ಸ್ಮರಿಸಬಹುದು.

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ಬಂಧನ
ಮೂರು ಪ್ರಕರಣಗಳಿಗೆ ಜಾಮೀನು ಕೋರಿಕೆ

ಸಿಐಡಿ ಠಾಣೆ, ಹೊಳೆನರಸೀಪುರ ಠಾಣೆ, ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇದರ ಮಧ್ಯೆಯೇ ಪ್ರಜ್ವಲ್ ಪರ ವಕೀಲರು, ಕೆಲಸದಾಕೆ ನೀಡಿದ ದೂರು 107/2024, ಅಲ್ಲದೆ, ಅಪಹರಣಕ್ಕೆ ಸಂಬಂಧಿಸಿದಂತೆ ಸಿಐಡಿ 20/2024 ಪ್ರಕರಣ, ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ 02/2024 ಪ್ರಕರಣಗಳಲ್ಲಿ ನಮ್ಮ ಕಕ್ಷಿದಾರರನ್ನು ಬಂಧಿಸದಂತೆ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಗೆ ಮುನ್ನ ಪ್ರತಿವಾದಿಗಳಿಗೆ ಸಮನ್ಸ್ ನೀಡಬೇಕಾಗುತ್ತದೆ.

ಈಗಾಗಲೇ ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣ ಅವರಿಗೆ ಎರಡು ಪ್ರಕರಣಗಳಲ್ಲಿ ಜಾಮೀನು ದೊರೆತಿದೆ.

ನ್ಯಾಯಾಲಯದ ಮುಂದೆ ಪ್ರಜ್ವಲ್ ವಾದ

ನಾನು ಪ್ರವಾಸ ಕೈಗೊಳ್ಳುವ ಮುನ್ನ ನನ್ನ ವಿರುದ್ಧ ಯಾವುದೇ ರೀತಿಯ ಪ್ರಕರಣಗಳು ದಾಖಲಾಗಿರಲಿಲ್ಲ.

ನಾನು ಈ ಹಿಂದೆ ನಿಗದಿಯಾದ ಕಾರ್ಯಕ್ರಮದಂತೆ ಪ್ರವಾಸ ಕೈಗೊಂಡೆ, ಮುರು ದಿನಗಳ ನಂತರ ನನ್ನ ಮೇಲಿನ ಆರೋಪಗಳ ತನಿಖೆಗೆ ಎಸ್‌ಐಟಿ ರಚನೆ ಆಯಿತು.

ನಂತರ ಎಸ್‌ಐಟಿ ನನಗೆ ನೀಡಿದ ನೋಟಿಸ್‌ಗೆ ಉತ್ತರ ನೀಡಿ ಕಾಲಾವಕಾಶ ಕೋರಿದ್ದೆ ಎಂಬುದೂ ಸೇರಿದಂತೆ ಪ್ರಜ್ವಲ್ ತಮ್ಮ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ, ರಾಜಕೀಯ ಪ್ರೇರಿತವಾಗಿ ವಿರೋಧಿಗಳು ಇಂತಹ ದೂರು ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಿಡಿಯೊ ಸಂದೇಶ

ಪ್ರಜ್ವಲ್ ಇದೇ 31ಕ್ಕೆ ಹಿಂತಿರುಗಿ ಅಂದೇ ಎಸ್‌ಐಟಿ ಮುಂದೆ ಹಾಜರಾಗುವುದಾಗಿಯೂ ವಿಡಿಯೊ ಸಂದೇಶ ಕಳುಹಿಸಿದ್ದರು.

ವಿಡಿಯೊ ಸಂದೇಶ ಬಂದ ಎರಡು ದಿನಕ್ಕೆ ಅವರ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇದರ ಮಧ್ಯೆ, ಗೃಹ ಸಚಿವ ಡಾ.ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ಹಿಂತಿರುಗುತ್ತಿದ್ದಂತೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರ ಹಾಳುಗೆಡವಿದ ಕಾಂಗ್ರೆಸ್
ವಿಮಾನ ನಿಲ್ದಾಣಗಳಲ್ಲಿ ಅಲರ್ಟ್

ಪ್ರಜ್ವಲ್ ಹೇಳಿಕೆ ಹಿನ್ನೆಲೆಯಲ್ಲಿ ಎಸ್‌ಐಟಿ ರಾಷ್ಟ್ರದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಸಂದೇಶ ರವಾನೆ ಮಾಡಿ, ಅವರನ್ನು ವಶಕ್ಕೆ ತೆಗೆದುಕೊಳ್ಳುವಂತೆ ಅಲರ್ಟ್ ಮಾಡಿದೆ.

ಇದರ ನಡುವೆಯೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡಗಳು ಕಾಯುತ್ತಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bail application comes on May 31st before the courtprajval anticipatory bail applicationprajval return doubtful
0 FacebookTwitterPinterestEmail
KM Shivaraju

previous post
ಶಿಕ್ಷಣ ಕ್ಷೇತ್ರ ಹಾಳುಗೆಡವಿದ ಕಾಂಗ್ರೆಸ್
next post
ಮುಖ್ಯಮಂತ್ರಿ ಮನೆಗೆ ಬಿಜೆಪಿ ಮುತ್ತಿಗೆ ಯತ್ನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ