Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು

by admin May 30, 2024
written by admin May 30, 2024 0 comments 1 minutes read
0FacebookTwitterPinterestEmail
134

ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಒತ್ತಾಯ

ಬೆಂಗಳೂರು:ದಲಿತರ ಹಣ ನುಂಗಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ಒತ್ತಾಯಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳನ್ನು ಸರ್ಕಾರವೇ ನುಂಗಿ ನೀರು ಕುಡಿದಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದಕ್ಕೆ ನೇರ ಹೊಣೆ.

ಇಲಾಖಾ ಸಚಿವ ನಾಗೇಂದ್ರ ಅವರನ್ನು ಜೂನ್ 6ರೊಳಗೆ ಸಂಪುಟದಿಂದ ವಜಾಗೊಳಿಸದಿದ್ದರೆ, ಇಡೀ ರಾಜ್ಯಾದ್ಯಂತ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದರು.

ಸಚಿವರು ರಾಜೀನಾಮೆ ನೀಡಲಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ರಾಜೀನಾಮೆ ನೀಡುವವರೆಗೂ ನಾವು ವಿಶ್ರಮಿಸುವುದಿಲ್ಲ, ಅಷ್ಟೇ ಅಲ್ಲ, ಹಗರಣದಲ್ಲಿ ಪಾಲುದಾರರಾಗಿರುವ ಅಧಿಕಾರಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರಕರಣ ಮುಚ್ಚಿ ಹಾಕಲೆಂದೇ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ, ಸಿಐಡಿ ಎಂದರೆ, ಕಾಂಗ್ರೆಸ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್, ಇದರಿಂದ ಯಾವುದೇ ನ್ಯಾಯ ದೊರಕದು ಎಂದರು.

ಮುಖ್ಯಮಂತ್ರಿ ಮನೆಗೆ ಬಿಜೆಪಿ ಮುತ್ತಿಗೆ ಯತ್ನ
ಟಕಾ.., ಟಕ್ ಹಣ ವರ್ಗಾವಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಚುನಾವಣಾ ಭಾಷಣದಲ್ಲಿ ಮಾತನಾಡಿ, ತಮ್ಮ ಸರಕಾರ ಬಂದ ಬಳಿಕ ಮಹಿಳೆಯರ ಬ್ಯಾಂಕ್ ಖಾತೆಗೆ ಟಕಾ.., ಟಕ್, ಟಕಾ.., ಟಕ್ ಹಣ ಹಾಕುವುದಾಗಿ ಹೇಳಿದ್ದರು, ಅವರ ಮಾತನ್ನು ಅನುಸರಿಸಿದ ರಾಜ್ಯ ಕಾಂಗ್ರೆಸ್‌ನ ಎಲ್ಲ ಸಚಿವರು, ಟಕ್.., ಟಕಾ.., ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ನಾಲ್ಕರಂದು 25 ಕೋಟಿ ಟಕಾ.., ಟಕ್ ವರ್ಗಾವಣೆ, 6ರಂದು 25 ಕೋಟಿ ಟಕಾ.., ಟಕ್ ವರ್ಗಾವಣೆ, 21ರಂದು 44 ಕೋಟಿ ಟಕಾ.., ಟಕ್ ವರ್ಗಾವಣೆ, ರಾಜ್ಯ ಖಜಾನೆಯಿಂದ 43 ಕೋಟಿ ಟಕಾ.., ಟಕ್ ವರ್ಗಾವಣೆ, ಮತ್ತೆ 21ರಂದು 50 ಕೋಟಿ ಟಕಾ.., ಟಕ್ ಟ್ರಾನ್ಸ್‌ಫರ್ ಆಗಿದೆ.

ಕಾಂಗ್ರೆಸ್ಸಿನವರು ಇಷ್ಟು ಮೊತ್ತವನ್ನು ಅವರ ಲೂಟಿ ಖಾತೆಗೆ ಹಾಕಿದ್ದಾರೆ, ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ.

187 ಕೋಟಿ ರೂ. ನುಂಗಲು ಒಬ್ಬ ಮಂತ್ರಿಯಿಂದ ಸಾಧ್ಯವಿಲ್ಲ, ಇದು ಸಣ್ಣ ಮೊತ್ತವೇನಲ್ಲ, ಅವರ ಜೀವನ, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದರು.

ಪ್ರಜ್ವಲ್ ಬಂಧನಕ್ಕೆ ಜನಪರ ಸಂಘಟನೆಗಳ ಆಗ್ರಹ
ದಲಿತರ ಹಣ ಮಾಯ

ರಾಹುಲ್ ಗಾಂಧಿ ಹೇಳಿದಂತೆ 25 ಸಾವಿರ ಕೋಟಿ ರೂ. ದಲಿತರ ಹಣ ಮಾಯವಾಗಿದೆ, ಎಲ್ಲಿಗೆ ಹೋಯಿತು, ಯಾರಿಗೆ ಹೋಯಿತೆಂದು ಗೊತ್ತಿಲ್ಲ, ಯಾವುದಕ್ಕೆ ಬಳಸಿದರೆಂದೂ ಗೊತ್ತಿಲ್ಲ, ಇವತ್ತು ಅಧಿಕಾರಿಗಳು ಟಕಾ.., ಟಕ್ ಎಂದು ಸತ್ತು ಹೋಗುತ್ತಿದ್ದಾರೆ, ಬಿತ್ತನೆ ಬೀಜದ ಬೆಲೆ ಶೇ. 70 ರಷ್ಟು ಟಕಾ.., ಟಕ್ ಏರಿಕೆಯಾಗಿದೆ.

ಕಾಂಗ್ರೆಸ್ಸಿನವರಿಗೆ ರಾಮನ ಕಂಡರೆ ಆಗುವುದಿಲ್ಲ, ವಾಲ್ಮೀಕಿ ಮಹರ್ಷಿ ಕಂಡರೆ ಆಗೋಲ್ಲ ಆದರೆ, ವಾಲ್ಮೀಕಿ ನಿಗಮದ ಹೆಸರಿನಲ್ಲಿ ಇದ್ದ 187 ಕೋಟಿ ರೂ. ಎಗರಿಸಿದ್ದು ಬ್ರಹ್ಮಾಂಡ ಭ್ರಷ್ಟಾಚಾರ, ಕಾಂಗ್ರೆಸ್ಸಿನ ಒಂದು ವರ್ಷದ ಸಾಧನೆ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
187 crore loot - proof for congres corruptionbjp protestexpel minister nagendra - bjpvalmiki corporation scam - cbi enquiry demanded
0 FacebookTwitterPinterestEmail
admin

previous post
ಪ್ರಜ್ವಲ್ ಬಂಧನಕ್ಕೆ ಜನಪರ ಸಂಘಟನೆಗಳ ಆಗ್ರಹ
next post
ಪ್ರಜ್ವಲ್ ಕೊನೆಗೂ ರಾಷ್ಟ್ರಕ್ಕೆ ವಾಪಸ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ