43
ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಎಸ್ಐಟಿ ತನಿಖೆ ಚುರುಕಾಗಿದೆ
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ರಚಿಸಲಾಗಿದೆ, ತನಿಖೆ ಚುರುಕಾಗಿ ನಡೆಯುತ್ತಿದೆ, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.