Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ: ಸಚಿವ ಎಂ. ಬಿ. ಪಾಟೀಲ

by admin June 2, 2024
written by admin June 2, 2024 0 comments 3 minutes read
0FacebookTwitterPinterestEmail
181
ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸಲು ರಾಜ್ಯ ಸರ್ಕಾರದ ಸರ್ವ ಪ್ರಯತ್ನ

ಬೆಂಗಳೂರು:  ‘ಕರ್ನಾಟಕ ಬಿಡಿ, ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್‌ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.  ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್‌ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ಸಚಿವರು ವಿವರಗಳನ್ನು ಹಂಚಿಕೊಂಡಿದ್ದಾರೆ.

‘ದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು’ ಎಂದು ಅವರು ತಿಳಿಸಿದರು.

ಕುಸಿತದ ವಿವರಗಳು

‘ಹಣಕಾಸು ವರ್ಷ 2023ರಲ್ಲಿ 71 ಶತಕೋಟಿ  ಡಾಲರ್‌ಗಳಷ್ಟಿದ್ದ ದೇಶಿ ಎಫ್‌ಡಿಐ, ಹಣಕಾಸು ವರ್ಷ 2024 ರಲ್ಲಿ 70 ಶತಕೋಟಿ ಡಾಲರ್‌ಗೆ  ಕುಸಿದಿದೆ.

‘ಹಣಕಾಸು ವರ್ಷ 2020-21ರಲ್ಲಿ  4.42 ಲಕ್ಷ ಕೋಟಿ ರೂ.,  2021-22ರಲ್ಲಿ 4.37  ಲಕ್ಷ ಕೋಟಿ ರೂ., 2022-23ರಲ್ಲಿ 3.67 ಲಕ್ಷ ಕೋಟಿ ರೂ. ಮತ್ತು  2023-24ರಲ್ಲಿ 3.47 ಲಕ್ಷ ಕೋಟಿ ರೂ.ಗೆ   ಇಳಿದಿದೆ.  ಕಳೆದ 4 ವರ್ಷಗಳಲ್ಲಿ ಎಫ್‌ಡಿಐ ನಿರಂತರವಾಗಿ ಹೀಗೆ ಕುಸಿಯುತ್ತಲೇ ಸಾಗಿರುವುದರತ್ತ ಸಚಿವರು ಬೆಳಕು ಚೆಲ್ಲಿದ್ದಾರೆ.

‘ದೇಶದಲ್ಲಿ ಹೂಡಿಕೆಯಾಗುವ ‘ಎಫ್‌ಡಿಐʼನಲ್ಲಿ ಬಹುಪಾಲು ಈಕ್ವಿಟಿ ಸ್ವರೂಪದಲ್ಲಿ ಇರುತ್ತದೆ. ಹಿಂದಿನ ಮೂರು ಹಣಕಾಸು ವರ್ಷಗಳಲ್ಲಿ  ಎಫ್‌ಡಿಐ ಈಕ್ವಿಟಿ ಹೂಡಿಕೆಯು ಕಳವಳಕಾರಿ ಮಟ್ಟದಲ್ಲಿ ಇಳಿಕೆಯಾಗಿದೆ. 2022-23ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023-24ರಲ್ಲಿ ಹೂಡಿಕೆಯಲ್ಲಿನ ಇಳಿಕೆಯು ಶೇ. 3 ರಷ್ಟು ಮಾತ್ರ ದಾಖಲಾಗಿದೆ. ಆದರೆ, ಅದಕ್ಕೂ ಮುಂಚಿನ 4 ಹಣಕಾಸು ವರ್ಷಗಳಲ್ಲಿನ ಇಳಿಕೆ ಪ್ರಮಾಣವು ಶೇ. 25ಕ್ಕಿಂತಲೂ ಹೆಚ್ಚಿಗೆ ಇದೆʼ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಉದಾಸೀನ ಧೋರಣೆ

‘ಎಫ್‌ಡಿಐ ಆಕರ್ಷಿಸುವಲ್ಲಿ ಮೊದಲ ಸ್ಥಾನದಲ್ಲಿ ಇದ್ದ ರಾಜ್ಯವು ಈಗ 3ನೇ ಸ್ಥಾನಕ್ಕೆ ಇಳಿಯಲು ಕೇಂದ್ರ ಸರ್ಕಾರದ ಧೋರಣೆ ಹಾಗೂ ಈ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿ ಇದ್ದ ಬಿಜೆಪಿ ಸರ್ಕಾರದ ಉದಾಸೀನ ನಿಲುವು ಮುಖ್ಯ ಕಾರಣಗಳಾಗಿವೆ. 

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಹೂಡಿಕೆಗೆ ಒಲವು ತೋರಿಸಿದ್ದ ವಿದೇಶಿ ಹೂಡಿಕೆದಾರರು ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಒತ್ತಾಸೆಯ ಮೇರೆಗೆ  ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳತ್ತ ಮುಖ ಮಾಡಿರುವುದೂ  ಇದಕ್ಕೆ ಕಾರಣʼ ಎಂದು ಸಚಿವರು ವಿವರಿಸಿದ್ದಾರೆ.

‘ದೇಶದ ಪರಿಸ್ಥಿತಿಯೇ ಹೀಗಿದ್ದ ಮೇಲೆ ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ಆದರೆ, ಅದು ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಎಫ್‌ಡಿಐ ಪಾತಾಳಕ್ಕೆ ಇಳಿದಷ್ಟು ಆಗಿಲ್ಲ. 2023-24ರಲ್ಲಿ ಇಳಿಕೆ ಪ್ರಮಾಣ ಕಡಿಮೆ ಆಗಿದ್ದು, ಪರಿಸ್ಥಿತಿಯನ್ನು ಗಣನೀಯವಾಗಿ ಸುಧಾರಿಸಲು  ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವು ರಚನಾತ್ಮಕವಾಗಿ ಕಾರ್ಯೋನ್ಮುಖವಾಗಿದೆ. ಎಫ್‌ಡಿಐ ಆಕರ್ಷಿಸುವಲ್ಲಿ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹೂಡಿಕೆಗೆ ಸೂಕ್ತ ಭೂಮಿಕೆ ಸಿದ್ಧಪಡಿಸುವಲ್ಲಿ ರಾಜ್ಯ ಸರ್ಕಾರವು ಸರ್ವ ಪ್ರಯತ್ನ ಮಾಡುತ್ತಿದೆʼ ಎಂದು ಹೇಳಿದ್ದಾರೆ.

ಎಫ್‌ಡಿಐ ಒಳಹರಿವಿಗೆ ಅಡ್ಡಿಯಾದ ಪ್ರತಿಕೂಲತೆಗಳು

‘ಕರ್ನಾಟಕದಲ್ಲಿ  ಎಫ್‌ಡಿಐಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ನವೋದ್ಯಮ ಹಾಗೂ ಐಟಿ ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳಿಗೆ ನಿದರ್ಶನಗಳಾಗಿವೆ. ಕೇಂದ್ರ ಸರ್ಕಾರದ ನೀತಿ ನಿರೂಪಣೆಯಲ್ಲಿನ ದೋಷಗಳ ಕೊಡುಗೆಯೂ ಗಮನಾರ್ಹವಾಗಿವೆ. ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಕೇಂದ್ರದಲ್ಲಿ ತನ್ನದೇ ಪಕ್ಷದ ಅಧಿಕಾರದಲ್ಲಿದ್ದರೂ (ಡಬಲ್‌ ಎಂಜಿನ್‌ ಸರ್ಕಾರ) ಎಫ್‌ಡಿಐ ಕುಸಿತ ತಡೆಗಟ್ಟಲು ಕ್ರಮ ಕೈಗೊಳ್ಳದಂತೆ ಪ್ರಭಾವ ಬೀರುವಲ್ಲಿ ವಿಫಲವಾಗಿರುವುದೂ ವೇದ್ಯವಾಗುತ್ತದೆ.

ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳತ್ತ ಹರಿಯುತ್ತಿದ್ದ ಎಫ್‌ಡಿಐ ಯನ್ನು ರಾಜ್ಯದತ್ತ ತಿರುಗುವಂತೆ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರವು ಯಾವುದೇ ರಚನಾತ್ಮಕ ಪ್ರಯತ್ನ ಮಾಡದಿರುವುದೇ ಇಂದಿನ ಪರಿಸ್ಥಿತಿಗೆ ಮುಖ್ಯ ಕಾರಣವಾಗಿದೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಹೂಡಿಕೆದಾರರ ಗಮನ ಸೆಳೆಯಲು ಸರ್ವ ಪ್ರಯತ್ನ

‘ಇಂತಹ ಪ್ರತಿಕೂಲತೆಗಳ ನಡುವೆಯೂ ರಾಜ್ಯವು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಬಹುರಾಷ್ಟ್ರೀಯ ಕಂಪನಿಗಳ ಬಂಡವಾಳ ಹೂಡಿಕೆಯ ಆಕರ್ಷಕ ತಾಣವಾಗಿ ಗಮನ ಸೆಳೆಯುತ್ತಿದೆʼ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಕರ್ನಾಟಕ ರಾಜ್ಯವು ವಿಶ್ವದಾದ್ಯಂತ ವಿವಿಧ ದೇಶಗಳ ಬಹುರಾಷ್ಟ್ರೀಯ ಕಂಪನಿಗಳಿಂದ ಬಂಡವಾಳ ಹೂಡಿಕೆಯನ್ನು ಆಯಸ್ಕಾಂತದಂತೆ ಸೆಳೆಯುತ್ತಿದೆ.  ಆದರೆ, ದೇಶದ ಆರ್ಥಿಕ ಪ್ರಗತಿಯ ಹಾದಿಯಲ್ಲಿನ ಅಡಚಣೆಗಳು, ಹೂಡಿಕೆದಾರರ ಬದಲಾದ ಒಲವು – ನಿಲುವು, ಜಾಗತಿಕ ವಿದ್ಯಮಾನಗಳ ಕಾರಣಕ್ಕೆ ರಾಜ್ಯದಲ್ಲಿಯೂ ʼಎಫ್‌ಡಿಐʼ ಒಳಹರಿವು ಕಡಿಮೆಯಾಗಿದೆʼ ಎಂದು ಹೇಳಿದ್ದಾರೆ.

1.13 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಕರ್ಷಣೆ

‘ದೇಶದಲ್ಲಿನ ‘ಎಫ್‌ಡಿಐʼನ ಒಟ್ಟಾರೆ ಇಳಿಕೆ ಪ್ರವೃತ್ತಿ ಹಾಗೂ ರಾಜಕೀಯ ಕಾರಣಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್‌ ಸರ್ಕಾರವು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಎಫ್‌ಡಿಐ ಒಳಹರಿವು ಉತ್ತೇಜಿಸಲು ಹಲವಾರು ಬಗೆಗಳಲ್ಲಿ ಕಾರ್ಯಪ್ರವೃತ್ತವಾಗಿದೆ. ಕರ್ನಾಟಕವು 2023-24 ರ ಹಣಕಾಸು ವರ್ಷದಲ್ಲಿ ದೇಶಿ ಹಾಗೂ ವಿದೇಶಿ ಕಂಪನಿಗಳಿಂದ ₹  1.13 ಲಕ್ಷ ಕೋಟಿ ಮೌಲ್ಯದ  ಬಂಡವಾಳ ಹೂಡಿಕೆ ಆಕರ್ಷಿಸಿದೆ.

ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ವಿದ್ಯುತ್ ಚಾಲಿತ (ಇವಿ) ವಾಹನಗಳ ಲಿಆನ್ ಬ್ಯಾಟರಿ ತಯಾರಿಕೆ, ಉಕ್ಕು ತಯಾರಿಕೆಯಂತಹ  ಪ್ರಮುಖ ತಯಾರಿಕಾ ವಲಯ,   ದತ್ತಾಂಶ ಕೇಂದ್ರಗಳ ಸ್ಥಾಪನೆ ಮತ್ತಿತರ ಹಲವಾರು ಕ್ಷೇತ್ರಗಳಲ್ಲಿ ಈ ಹೂಡಿಕೆ ಮೊತ್ತವು ರಾಜ್ಯಕ್ಕೆ ಹರಿದು ಬರುತ್ತಿದೆʼ ಎಂದು ಸಚಿವರು ತಿಳಿಸಿದ್ದಾರೆ.

ಜಾಗತಿಕ ವಿದ್ಯಮಾನಗಳ ಜೊತೆಗೆ ಕೇಂದ್ರ ಸರ್ಕಾರದ ಕೆಲ ನಿರ್ಧಾರಗಳೂ ಎಫ್‌ಡಿಐ ಕುಸಿತಕ್ಕೆ ಕಾರಣಗಳಾಗಿವೆ. ತಯಾರಿಕಾ ವಲಯದಲ್ಲಿ ಸ್ಥಳೀಯವಾಗಿ ಜೋಡಣೆ ಸ್ವರೂಪದ ಉದ್ದಿಮೆಗಳಿಗೆ ಕೇಂದ್ರವು ಆದ್ಯತೆ ನೀಡುತ್ತಿದೆ. ಇಂತಹ ಉದ್ದಿಮೆಗಳು ತಮ್ಮ ಕಾರ್ಯನಿರ್ವಹಣೆಗೆ ವಿದೇಶಗಳನ್ನೇ ಹೆಚ್ಚಾಗಿ ಅವಲಂಬಿಸಬೇಕಾಗಿದೆ.

 ವಿದೇಶಗಳಿಂದ ಬಿಡಿಭಾಗಗಳ ಪೂರೈಕೆಯಲ್ಲಿನ ಅಡಚಣೆಗಳು ಮತ್ತು ತೆರಿಗೆ ಪದ್ಧತಿಯು ಈ ಉದ್ದಿಮೆಗಳ ಕಾರ್ಯನಿರ್ವಹಣೆ ಮೇಲೆ ವ್ಯತಿರಿಕ್ತ ಪ್ರಭಾವ ಬೀರುತ್ತಿವೆ.  ತಯಾರಿಕಾ ವಲಯದಲ್ಲಿನ ಎಫ್‌ಡಿಐ ಹೂಡಿಕೆಗೆ ಅಡ್ಡಿಯಾಗಿವೆ.

ಈ ಉದ್ದಿಮೆಗಳ ಪೂರ್ಣ ಪ್ರಮಾಣದ ತಯಾರಿಕೆಗೆ ಅವಕಾಶ ಮಾಡಿಕೊಟ್ಟರೆ ಮತ್ತು ಅವುಗಳ ದಕ್ಷ ಕಾರ್ಯನಿರ್ವಹಣೆಗೆ ಇರುವ ಅಡೆತಡೆಗಳನ್ನು ನಿವಾರಿಸಲು ಕ್ರಮ ಕೈಗೊಂಡರೆ ಈ ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಎಫ್‌ಡಿಐ ಹರಿದು ಬರಲಿದೆ ಎನ್ನುವ ಹೂಡಿಕೆ ತಜ್ಞರ ಸಲಹೆಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದೂ ಸಚಿವ ಪಾಟೀಲ ಅವರು ತಿಳಿಸಿದ್ದಾರೆ.

ನನಗೆ ಗೊತ್ತಿಲ್ಲ, ಏನೂ ತಿಳಿದಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ: ಪ್ರಜ್ವಲ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
capital investmentdouble engineFailurefall in FDI inflowsgovernment contributedM. B. Patilministermultinational companiesstate governmentsuitable landwhole country
0 FacebookTwitterPinterestEmail
admin

previous post
ನನಗೆ ಗೊತ್ತಿಲ್ಲ, ಏನೂ ತಿಳಿದಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ: ಪ್ರಜ್ವಲ್
next post
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ