Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ

by admin June 9, 2024
written by admin June 9, 2024 0 comments 2 minutes read
0FacebookTwitterPinterestEmail
260

ಕಾಂಗ್ರೆಸ್ ನಲ್ಲಿ ಒಳ ಜಗಳಗಳು ಆಗಿಲ್ಲ: ಗೃಹ ಸಚಿವ ಪರಮೇಶ್ವರ

ಬೆಂಗಳೂರು :  ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್ಲ. ಈಗ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಹಿರಿಯರನ್ನು ಪರಿಗಣಿಸುತ್ತಿಲ್ಲ ಎಂಬ ಆರೋಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ರೀತಿ ಏನು ಇಲ್ಲ. ಸಂದರ್ಭ ಅನುಸಾರ ಅಂತಹ ಮಾತುಗಳನ್ನು ಹೇಳಿರುತ್ತೇವೆ. ನಮ್ಮಲ್ಲಿ ಒಳ ಜಗಳಗಳು ಆಗಿಲ್ಲ.

ತುಮಕೂರಿನ ಶಾಸಕ ಸುರೇಶ್‌ಗೌಡ ಅವರು ನಮ್ಮ‌ ಪಕ್ಷದಲ್ಲಿನ ಒಳ ಜಗಳವನ್ನು ಎಲ್ಲಿ ನೋಡಿದ್ದಾರೋ, ಎಲ್ಲಿ ಆಗಿದೆಯೋ ಅವರಿಗೆ ಗೊತ್ತು. ಯಾವುದಾದರು ವಿಚಾರಗಳು ಬಂದಾಗ ಒಬ್ಬೊಬ್ಬರು ಅಭಿಪ್ರಾಯಗಳನ್ನು ಹಂಚಿಕೊಂಡಿರುವುದು ಸಹಜ. ಅಂತಹ ಸಂದರ್ಭದಲ್ಲಿ ಬಿಟ್ಟರೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಒಳ ಜಗಳಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಸಂಪುಟ ದರ್ಜೆ ಸಚಿವರಾಗಿ ಕುಮಾರಸ್ವಾಮಿ ಪ್ರಮಾಣ

ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಹಂಚಿಕೊಳ್ಳಲು ಕ್ಯಾಬಿನೆಟ್ ಇದೆ. ಪಕ್ಷಕ್ಕೆ ಸಂಬಂಧಪಟ್ಟ ತೀರ್ಮಾನಗಳನ್ನು ಕೈಗೊಳ್ಳಲು ಕೋರ್‌ಕಮಿಟಿ ಸಭೆ ಮಾಡಬಹುದು. ಇದಕ್ಕೆ ಅವಕಾಶಗಳನ್ನು ಪಕ್ಷದ ಅಧ್ಯಕ್ಷರು ಕೊಡಬೇಕಾಗುತ್ತದೆ. ಸಂದರ್ಭ ಬಂದಾಗ ಅವರು ಮಾಡುತ್ತಾರೆ ಎಂದರು.

ಪ್ರಬಲ ಸಚಿವರ ಕ್ಷೇತ್ರಗಳಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವುದಕ್ಕೆ ಸಮಿತಿ ರಚನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ಜಿಲ್ಲೆ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋತಿದ್ದೇವೆ. ಈ ಬಗ್ಗೆ ಪರಿಶೀಲನೆ ಮಾಡುವ, ಆತ್ಮಾವಲೋಕನಾ ಮಾಡಿಕೊಳ್ಳುವ ಅಗತ್ಯವಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ನಾವೆಲ್ಲ ಅದನ್ನು ಒಪ್ಪುತ್ತೇವೆ. ಮುಂದೆ ನಮಗೆ ಏನು ಸಲಹೆ ಮಾಡುತ್ತಾರೆ. ಅದನ್ನು ಪಾಲನೆ ಮಾಡುವ ಪದ್ಧತಿ ನಮ್ಮ ಪಕ್ಷದಲ್ಲಿದೆ ಎಂದು ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದಲ್ಲಿ ಸರ್ಕಾರ ಭಾಗಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿಯವರ ಒತ್ತಾಯದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಹೇಳಿದ್ದಕ್ಕೆಲ್ಲ ಎಸ್ ಅನ್ನೋದಿಕ್ಕೆ ಆಗಲ್ಲ.

ತನಿಖೆಯನ್ನು ಪ್ರಾರಂಭ ಮಾಡಿದ್ದೇವೆ. ಬ್ಯಾಂಕ್‌ನಲ್ಲಿ ಫ್ರಾಡ್ ಆಗಿದೆ ಅಂತ ಸಿಬಿಐನವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಆಗಲಿ. ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಎಸ್ಐಟಿಗೆ ಸೂಚಿಸಿದ್ದೇವೆ. ತನಿಖೆ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಾಯ ಮಾಡಲು ಆಗುವುದಿಲ್ಲ. ಅವರ ತನಿಖೆಗೆ ಸಮಯ ಕೊಡಬೇಕಾಗುತ್ತದೆ. ಏನೆಲ್ಲ ಹೇಳಿಕೆಗಳು ಬರುತ್ತವೆ ಪರಿಶೀಲಿಸುತ್ತಾರೆ. ಸಿಬಿಐನವರು ಅಧಿಕೃತವಾಗಿ ಯಾವುದೇ ಪತ್ರ ಬರೆದಿಲ್ಲ ಎಂದು ತಿಳಿಸಿದರು.

ನರೇಂದ್ರ ಮೋದಿ ಅವರಿಗೆ ಅಭಿನಂದನೆ

ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ.  ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಜನ ಸಮುದಾಯ ಅನೇಕ ತೊಂದರೆಗಳಿಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಅನೇಕ ನೀತಿಗಳನ್ನು ಮಾಡುವ ಸಂದರ್ಭದಲ್ಲಿ ಜನರ ದೃಷ್ಟಿಯಿಂದ ರೂಪಿಸಬೇಕು ಎಂಬುದು ಪ್ರಜಾಪ್ರಭುತ್ವದಲ್ಲಿದೆ. ಜನರಿಗೆ ವಿರುದ್ಧವಾದ ತೀರ್ಮಾನಗಳನ್ನು, ಕಾನೂನುಗಳನ್ನು ಕಳೆದ ಹತ್ತು ವರ್ಷದಲ್ಲಿ ಮಾಡಿದ್ದಾರೆ. ಏನೆಲ್ಲ ತಪ್ಪುಗಳಾಗಿದೆಯೋ ಅದೆಲ್ಲವನ್ನು ಸರಿಪಡಿಸಿಕೊಂಡು ಜನಪರ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ರಾಜ್ಯಕ್ಕೆ ಹೆಚ್ಚು ಸಚಿವ ಸ್ಥಾನಗಳನ್ನು ಸಿಗಲಿ ಎಂದು ಆಪೇಕ್ಷೆ ಪಡುತ್ತೇನೆ. ಇಲ್ಲಿವರೆಗೂ ನೇಮಕವಾದ ರಾಜ್ಯವನ್ನು ಪ್ರತಿನಿಧಿಸಿದ ಕೇಂದ್ರ ಸಚಿವರು ರಾಜ್ಯದ ಹಿತ ಕಾಪಾಡುವುದರಲ್ಲಿ ವಿಫಲರಾಗಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಹೋರಾಟ ಮಾಡುವಲ್ಲಿ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನುಳಿದ ಸಚಿವರು ವಿಫಲರಾಗಿದ್ದಾರೆ. ನಮಗೆ ಉಪಯೋಗವಾಗುವಂತಹ ಖಾತೆಗಳನ್ನು ನೀಡಲಿ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressHome Ministerinter-district transfersNo infightingparameshwarpoliceSpeedy drive
0 FacebookTwitterPinterestEmail
admin

previous post
ಸಂಪುಟ ದರ್ಜೆ ಸಚಿವರಾಗಿ ಕುಮಾರಸ್ವಾಮಿ ಪ್ರಮಾಣ
next post
ಕುಮಾರಸ್ವಾಮಿಗೆ ದೊಡ್ಡ ಗೌರವ ನೀಡಿದ ಮೋದಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ