Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಟ ದರ್ಶನ್ ರಕ್ಷಿಸುವ ಪ್ರಯತ್ನ ಮಾಡಿಲ್ಲ

by admin June 12, 2024
written by admin June 12, 2024 0 comments 2 minutes read
0FacebookTwitterPinterestEmail
91

ಬೆಂಗಳೂರು:ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ರಕ್ಷಣೆಗೆ ಯಾವ ರಾಜಕಾರಣಿಯೂ ಪ್ರಯತ್ನ ಮಾಡಿಲ್ಲ, ಸರ್ಕಾರದಿಂದ ನಾವ್ಯಾರೂ ಮಧ್ಯ ಪ್ರವೇಶಿಸುವುದಿಲ್ಲ, ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆಯೋ ಅದನ್ನು ಪೊಲೀಸರು ಮಾಡುತ್ತಾರೆ, ಎಲ್ಲರಿಗೂ ಕಾನೂನು ಒಂದೇ, ನಟ ದರ್ಶನ್‌ಗೂ ಒಂದೇ ಕಾನೂನು, ಪರಮೇಶ್ವರ್‌ಗೂ ಒಂದೇ ಕಾನೂನು, ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.

ದರ್ಶನ್ ದೂರು ಕೊಡಬಹುದಾಗಿತ್ತು

ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ, ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು, ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು, ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ.

ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು, ಆದರೆ, ಘಟನೆ ನಡೆದು ಹೋಗಿದೆ, ಯಾರೂ ಏನೂ ಮಾಡಲು ಆಗುವುದಿಲ್ಲ, ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಕಾನೂನು ಪ್ರಕಾರ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ.

ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ, ಪ್ರಕರಣದಲ್ಲಿ ಭಾಗಿಯಾಗಿದ್ದ ೧೩ ಜನರನ್ನು ಈಗಾಗಲೇ ಬಂಧಿಸಲಾಗಿದೆ, ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ.

ತನಿಖೆ ನಂತರ ಎಲ್ಲ ಮಾಹಿತಿ

ತನಿಖೆ ಪೂರ್ಣಗೊಂಡ ನಂತರ ಎಲ್ಲ ಮಾಹಿತಿ ಗೊತ್ತಾಗುತ್ತದೆ, ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು ನಾವು ಕೇಳುವುದಿಲ್ಲ, ಅವರೂ ನಮಗೆ ಹೇಳುವುದಿಲ್ಲ ಎಂದರು.

ನಟ ದರ್ಶನ್ ಅವರ ಘಟನೆಗಳು ಇದೇ ಮೊದಲಲ್ಲ, ಮಾಧ್ಯಮಗಳಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ, ಪೊಲೀಸರು ತನಿಖೆ ಮಾಡುತ್ತಾರೆ, ತನಿಖೆ ನಂತರ ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ನೋಡಬೇಕು, ಪೊಲೀಸರಿಗೆ ಫ್ರೀ ಹ್ಯಾಂಡ್ ಇದೆ, ಸೆಕ್ಷನ್ ಹಾಕುವುದಕ್ಕೆ ಅವರು ಸಮರ್ಥರು, ನಮ್ಮನ್ನು ಕೇಳಿಕೊಂಡು ಸೆಕ್ಷನ್ ಹಾಕುವುದಿಲ್ಲ ಎಂದರು.

ರಾಜ್ಯ ಜೆಡಿಎಸ್‌ಗೆ ಹೊಸ ನಾಯಕತ್ವ
ನಿಯಮದ ಚೌಕಟ್ಟಿನಲ್ಲಿ ಪೊಲೀಸರ ವರ್ಗಾವಣೆ

ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸಂಬಂಧಿಸಿದಂತೆ ಶಿಸ್ತು ಬದ್ಧವಾಗಿ ನಿಯಮದ ಚೌಕಟ್ಟಿನಲ್ಲಿ ನಡೆಯಬೇಕಾಗುತ್ತದೆ, ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ, ಪೋರ್ಟಲ್ ಅರ್ಜಿಗಳು ನಿಯಮದ ಪ್ರಕಾರ ಆಗುತ್ತವೆ.

ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳಿವೆ, ಅವನ್ನು ಮೀರಿ ವರ್ಗಾವಣೆ ಮಾಡಲು ಆಗುವುದಿಲ್ಲ, ಹಾಗೆ ಮಾಡಬೇಕಾದರೆ ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದು ವರ್ಷದ ನಿಯಮವಿತ್ತು, ಸದನದಲ್ಲಿ ಕಾನೂನು ಬದಲಾಯಿಸಿ ಎರಡು ವರ್ಷ ಮಾಡಲಾಗಿದೆ, ಇರುವಂತಹ ನಿಯಮ ಉಲ್ಲಂಘನೆ ಮಾಡಿ, ವರ್ಗಾವಣೆ ಮಾಡುವುದಕ್ಕೆ ಅವಕಾಶವಿಲ್ಲ, ಡಿಜಿಯಾಗಲಿ, ನಾನಾಗಲೀ ಅಥವಾ ಯಾರೇ ಆಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

ವರ್ಗಾವಣೆಗೆ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿರುವುದಕ್ಕೆ ಸಿಬ್ಬಂದಿಗಳಿಗೆ ಸಣ್ಣಪುಟ್ಟ ತೊಂದರೆಗಳು ಆಗಿದ್ದರೆ ಸರಿಪಡಿಸುವುದಕ್ಕೆ ಸೂಚನೆ ನೀಡಲಾಗುವುದು, ಅವರಿಗೂ ಕುಟುಂಬಗಳಿವೆ, ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕಾಗುತ್ತದೆ ಎಂದರು.

545 ಪಿಎಸ್‌ಐ ನೇಮಕಾತಿ

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಕುರಿತು ಕೋರ್ಟ್‌ನಿಂದ ಆದೇಶ ತಂದಾಗ, ನಮ್ಮ ಕೈ ಕಟ್ಟಿ ಹಾಕಿದಂತಾಗುತ್ತದೆ, ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಆದೇಶ ಕೊಡಬೇಕೆಂಬ ಉದ್ದೇಶದಿಂದ ಪರೀಕ್ಷೆ ಪೂರ್ಣಗೊಳಿಸಿದ್ದೇವೆ.

ಈ ಹಂತದಲ್ಲಿ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ, ಸದರಿ ಪ್ರಕರಣ ಮುಗಿದರೆ ಮುಂದಿನ ನೇಮಕಾತಿಗಳಿಗೆ ಅನುಕೂಲವಾಗುತ್ತದೆ, 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actor darshanno cbi enquiryno one rescuing himpolice transfersrules should be followed
0 FacebookTwitterPinterestEmail
admin

previous post
ಕಚೇರಿ ಪೂಜೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ
next post
ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿಹಿ ಸುದ್ದಿ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ