Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

by admin June 18, 2024
written by admin June 18, 2024 0 comments 2 minutes read
0FacebookTwitterPinterestEmail
778

ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ. ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು:

ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ ರೂ., ತಾಲ್ಲೂಕು ಕೇಂದ್ರಗಳಿಗೆ 20 ಸಾವಿರ ರೂ.ನ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ರೂ. ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ರೂ. ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು.

ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ

ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ.

ಕೆಂಪೇಗೌಡರು ನಿರ್ಮಾಣ ಮಾಡಿದ್ದ ಗೋಪುರಗಳನ್ನು ದಾಟಿ ಬೆಂಗಳೂರು ಮೂರು, ನಾಲ್ಕು ಪಟ್ಟು ಹೆಚ್ಚು ಬೆಳೆದಿದೆ. ಬೆಂಗಳೂರು ಇಷ್ಟು ಅಗಾಧವಾಗಿ ಬೆಳೆಯಬಹುದು ಎನ್ನುವ ಕಲ್ಪನೆ ಸ್ವತಃ ಕೆಂಪೇಗೌಡರಿಗೆ ಇರಲಿಲ್ಲ. ಈ ನಗರ ಸ್ಥಾಪಿಸಿದ ಮಹಾನ್ ವ್ಯಕ್ತಿಯ ಜಯಂತಿಯನ್ನು ಇತರೇ ಸಾಧಕರ ಜಯಂತಿಯಂತೆ ಆಚರಿಸಬೇಕಿದೆ.

ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿ

ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾರ್ಡ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕಾ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು.

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ

ಸಮಾಧಿ ಹಾಗೂ ಕೋಟೆ ಅಭಿವೃದ್ದಿಗೆ ಕ್ರಿಯಾ ಯೋಜನೆ

ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ದಿಪಡಿಸುವ ಕ್ರಿಯಾಯೋಜನೆ ಸಿದ್ದ ಪಡಿಸಲಾಗಿದೆ. ಅವರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು.

ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮ್ಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಚಿಸಲಾಗಿದೆ.

ಕೆಂಪೇಗೌಡರನ್ನು ಕೇವಲ ಒಂದು ಜಾತಿಗೆ ಸೀಮಿತ ಮಾಡಬಾರದು. ಜಾತ್ಯಾತೀತ ತತ್ವದಲ್ಲಿ ಆಚರಣೆ ಮಾಡಬೇಕು. ಕೆಂಪೇಗೌಡರ ಜಯಂತಿ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ಈ ರೀತಿ ನಮ್ಮ ಸರ್ಕಾರ ಬಿಂಬಿಸುವುದಿಲ್ಲ. ಎಲ್ಲ ವರ್ಗದ ಜನರಿಗೂ ಕೆಂಪೇಗೌಡರು ಸಹಕಾರ ನೀಡಿದ್ದಾರೆ.

ಬಸವಣ್ಣ ನವರ ಜಯಂತಿಯನ್ನು ಕೇವಲ ಲಿಂಗಾಯತರು ಹಾಗೂ ಅಂಬೇಡ್ಕರ್ ಅವರ ಜಯಂತಿಯನ್ನು ಪರಿಶಿಷ್ಟರು ಮಾಡುತ್ತಿದ್ದಾರೆ. ನಾವು ಎಲ್ಲಾ ಸಂಘ ಸಂಸ್ಥೆಗಳನ್ನು, ಸಮುದಾಯಗಳನ್ನು ಸೇರಿಸಿಕೊಂಡು ಆಚರಣೆ ಮಾಡಬೇಕು. ಸಭೆಯಲ್ಲಿ 100 ಕ್ಕೂ ಉತ್ತಮವಾದ ಸಲಹೆಗಳು ಬಂದಿವೆ. ಇದರಲ್ಲಿ ಸೂಕ್ತವಾದವುಗಳನ್ನು ಅಧಿಕಾರಿಗಳ ಬಳಿ ಚರ್ಚಿಸಲಾಗುವುದು.

ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಆದ್ಯತೆ

ಇತರೇ ರಾಜ್ಯಗಳ ಶೇ 60 ರಷ್ಟು ಜನರು ಬೆಂಗಳೂರಿನ ವಾತಾವರಣ, ಶಿಕ್ಷಣ ಸೇರಿದಂತೆ ಇತರೇ ಸೌಲಭ್ಯಗಳಿಗೆ ಮಾರುಹೋಗಿದ್ದಾರೆ. ದೆಹಲಿ ನಂತರ ಬೆಂಗಳೂರನ್ನು ದೇಶ- ವಿದೇಶಿಯರು ನೋಡುವಂತಾಗಿದೆ. ಸರ್ವಜನಾಂಗಕ್ಕೂ ಬೆಂಗಳೂರು ಆಪ್ತವಾಗಿದೆ.

ಕೆಂಪೇಗೌಡರ ಅಭಿವೃದ್ದಿಯ ಹೆಜ್ಜೆ ನಂತರ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ವಿಕಾಸಸೌಧ, ಉದ್ಯೋಗ ಸೌಧ ನಿರ್ಮಾಣವಾಯಿತು. ಇದಾದ ನಂತರ ಪ್ರವಾಸೋದ್ಯಮದಲ್ಲಿ ಸ್ವಲ್ಪ ಹಿಂದೆ ಬಿದ್ದಿದೆ. ಒಂದಷ್ಟು ಹಳೆಯ ದೇವಾಲಯಗಳು ಬಿಟ್ಟರೆ ಪ್ರೇಕ್ಷಣೀಯ ಸ್ಥಳಗಳು ಇಲ್ಲ. ಅಲ್ಲದೇ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಸಮಸ್ಯೆ ನಿವಾರಣೆಗೆ ಕಟ್ಟಡಗಳನ್ನು ಒಡೆಯಲು ಆಗುವುದಿಲ್ಲ. ಆದ ಕಾರಣ ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ.

ಮೂಲಸೌಕರ್ಯಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈ ನಾಡು ಕಟ್ಟಿದಂತಹ ಕೆಂಪೇಗೌಡರನ್ನು ನಾವು ಸ್ಮರಿಸಿಕೊಳ್ಳಬೇಕು. ಹಿಂದಿನ ಸರ್ಕಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿತ್ತು.

ಅದರ ಅಕ್ಕಪಕ್ಕ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ತರಾತುರಿಯಲ್ಲಿ ಪ್ರಧಾನಮಂತ್ರಿಗಳನ್ನು ಕರೆಸಿ ಕೆಂಪೇಗೌಡರ ಪ್ರತಿಮೆಯನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿದೆ. ಈ ಉಸ್ತುವಾರಿಯನ್ನು ಸಚಿವರಾದ ಮುನಿಯಪ್ಪ ಅವರು ಹಾಗೂ ಕೃಷ್ಣಭೈರೇಗೌಡರು ತೆಗೆದುಕೊಳ್ಳಲಿದ್ದಾರೆ.

ದೇವದಾರಿ ಗಣಿಗಾರಿಕೆ ಯೋಜನೆ : ಪರಿಸರ ರಕ್ಷಣೆಗೆ ಕಂಪನಿ ಬದ್ಧ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1 lakh rupeescelebrationconstituencyD.K.SivakumardcmdebateEducation OfficersKempegowdaKempegowda Jayantiorganize seminarschool childrenstudentsTaluk Centres
0 FacebookTwitterPinterestEmail
admin

previous post
ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ
next post
ಚನ್ನಪಟ್ಟಣದಲ್ಲಿ ಜನರ ನಾಡಿಮಿಡತ ಅರಿಯಲುಡಿ.ಕೆ.ಶಿವಕುಮಾರ್ ಟೆಂಪಲ್ ರನ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ