69
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಂದ ತೆರವಾದ ವಿಧಾನ ಪರಿಷತ್ತಿನ ಒಂದು ಸ್ಥಾನದ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಈ ಸ್ಥಾನಕ್ಕೆ ಜುಲೈ 12ರಂದು ಚುನಾವಣೆ ನಡೆಯಲಿದ್ದು, ಜೂನ್ 25ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಅವಿರೋಧ ಆಯ್ಕೆ ಖಚಿತ
ವಿಧಾನಸಭೆಯ ಸಂಖ್ಯಾಬಲ ಆಧಾರದ ಮೇಲೆ ಆಡಳಿತಾರೂಢ ಕಾಂಗ್ರೆಸ್ಗೆ ಈ ಸ್ಥಾನ ದಕ್ಕಲಿದ್ದು, ಈಗಾಗಲೇ ಬಸನಗೌಡ ಬಾದರ್ಲಿ ಪಕ್ಷದ ಅಭ್ಯರ್ಥಿಯೆಂದು ವರಿಷ್ಠರು ಪ್ರಕಟಿಸಿದ್ದಾರೆ. ಬಾದರ್ಲಿ ಅವಿರೋಧ ಆಯ್ಕೆಯಾಗುವುದು ಖಚಿತ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಶೆಟ್ಟರ್ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಲಾಗಿತ್ತು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶೆಟ್ಟರ್ ಮಾತೃ ಪಕ್ಷಕ್ಕೆ ತೆರಳುವ ಮುನ್ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.