Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಪರಿಶಿಷ್ಟರ ಹಾಸ್ಟೆಲ್‌ಗಳ ನಿರ್ಲಕ್ಷ್ಯಕ್ಕೆ ಅಧಿಕಾರಿಗಳಿಗೆ ತರಾಟೆ

by admin June 18, 2024
written by admin June 18, 2024 0 comments 2 minutes read
0FacebookTwitterPinterestEmail
182

ಬೆಂಗಳೂರು:ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ ಹಾಸ್ಟೆಲ್‌ಗಳಿಗೆ ಸರ್ಕಾರ ಭರಪೂರ ಹಣ ನೀಡಿದರೂ ಅವುಗಳ ಸ್ಥಿತಿ ಚಿಂತಾಜನಕವಾಗಿಯೇ ಇದೆ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತರಾಟೆಗೆ ತೆಗೆದುಕೊಂಡರು.

ನಿಮಗೆ ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ಸೇವೆಯಲ್ಲಿರಲು ನಾಲಾಯಕ್ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ರಾತ್ರಿ ವೇಳೆ ವ್ಯವಸ್ಥೆ ಗಮನಿಸುವುದು ಕಡ್ಡಾಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಲ್ಲದೆ, ಇನ್ನು ಮುಂದೆ ರಾತ್ರಿಯಲ್ಲಿ ಪರಿಶೀಲಿಸಿ ವ್ಯವಸ್ಥೆ ಗಮನಿಸುವುದು ಕಡ್ಡಾಯ ಎಂದರು.

ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದಿದ್ದರೂ, ಹಾಸಿಗೆ, ಬೆಡ್‌ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು, ಅನಗತ್ಯವಾಗಿ ೪ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿಸಿ, ಸೇವೆಗಳನ್ನು ಪಡೆಯಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಬಡವರ ಮಕ್ಕಳು ಎಂದರೆ ನಿಮಗೆ ನಿರ್ಲಕ್ಷ್ಯ, ಅವರ ಬಗ್ಗೆ ಕಾಳಜಿ ತೋರಿವುದಿಲ್ಲ, ಸರ್ಕಾರ ನೀಡಿದ ಹಣವನ್ನು ಬಳಕೆ ಮಾಡಿ ಅವರಿಗೆ ಬದುಕು ಕಟ್ಟಿಕೊಳ್ಳಲು ಒಂದು ವ್ಯವಸ್ಥೆ ಮಾಡಲು ನಿಮಗೇನು ಬಂದಿದೆ ಎಂದರು.

ಶೈಕ್ಷಣಿಕ ಗುಣಮಟ್ಟ ಏರಿಕೆ ಆಗುತ್ತಿಲ್ಲ

ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್‌ಗಳಿಗೆ ಸಾಕಷ್ಟು ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ, ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ, ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ನಿಯಮಿತವಾಗಿ ಹಾಸ್ಟೆಲ್‌ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು, ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ.ನಲ್ಲಿ 1875.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ.

ಆದರೆ ಹಣ ಖರ್ಚಾದರೂ ಹಾಸ್ಟೆಲ್ ಹಾಗೂ ಶಿಕ್ಷಣದ ಗುಣಮಟ್ಟ ಏಕೆ ಏರಿಕೆಯಾಗಿಲ್ಲ ಎಂದು ಪ್ರಶ್ನಿಸಿದರು.

39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಶೇ.77ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ, 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ.

ಹಾಸ್ಟೆಲ್‌ಗಳಿಗೆ ಸಂಜೆ ವೇಳೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ, ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ, ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ, ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ, ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahschedule hostelstake care in nights
0 FacebookTwitterPinterestEmail
admin

previous post
ಪೆಟ್ರೋಲ್, ಡೀಸೆಲ್ ದರ ಇಳಿಕೆ ಇಲ್ಲ
next post
ಪರಿಷತ್ ಉಪಚುನಾವಣೆಗೆ ಬಾದರ್ಲಿ ಕಾಂಗ್ರೆಸ್ ಅಭ್ಯರ್ಥಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ