ಬೆಂಗಳೂರು:ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು.
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ಪ್ರಗತಿಯಲ್ಲಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಸಚಿವ ಅಶ್ವಿನಿ ವೈಷ್ಣವ್ ಸಕಾರಾತ್ಮಕ ಸ್ಪಂದನೆ
ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು-ಸತ್ಯಮಂಗಲ-ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕೋರಲಾಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.