Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ರಾಜ್ಯದ 94 ಯುವಜನರಿಗೆ ಸ್ಲೊವಾಕಿಯಾದಲ್ಲಿ ಉದ್ಯೋಗ

by admin June 22, 2024
written by admin June 22, 2024 0 comments 2 minutes read
0FacebookTwitterPinterestEmail
232

ಬೆಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ರಾಜ್ಯದ ಯುವಜನರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಇದರ ಭಾಗವಾಗಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‌ಗಳನ್ನು ಪೂರೈಸಿದ 94 ಯುವಜನರಿಗೆ ಸ್ಲೊವಾಕಿಯಾದಲ್ಲಿ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಅರಸುತ್ತಿದ್ದ ಯುವಜನರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ.

ಕೌಶಲ್ಯಾರ್ಹತೆಗೆ ತಕ್ಕ ಉದ್ಯೋಗ

ಯುವಜನರ ಕೌಶಲ್ಯಾರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ನೀಡಲಾಗುತ್ತಿದೆ, ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರ ರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳ ಬಗ್ಗೆಯೂ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿ, ಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸಾಕಷ್ಟು ಮುಂದಿದೆ. ಇದನ್ನು ಮನಗಂಡ ಸ್ಲೊವಾಕಿಯಾ ರಾಷ್ಟ್ರ, ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು.

ತಕ್ಷಣವೇ ಕಾರ್ಯಪ್ರವೃತ್ತರಾದ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ತಮ್ಮ ಅಧಿಕಾರಿಗಳ ತಂಡವನ್ನು ಸಿದ್ಧವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವಾಕಿಯಾ ರಾಷ್ಟ್ರ 2,500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 54 ಮಂದಿ ಐಟಿಐ, 31 ಮಂದಿ ಡಿಪ್ಲೊಮೊ ಸೇರಿದಂತೆ 94 ಅಭ್ಯರ್ಥಿಗಳನ್ನು ಆ ದೇಶಕ್ಕೆ ಬೀಳ್ಕೊಡಲಾಗಿದೆ.

ಬಿಡದಿ ಸಮೀಪ ತರಬೇತಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪದ ಟೊಯೋಟಾ ಕೀರ್ಲೋಸ್ಕರ್‌ನಲ್ಲಿ ತರಬೇತಿ ನೀಡಲಾಯಿತು. ಈ ಮೊದಲು ಇಲ್ಲಿ ತರಬೇತಿ ಪಡೆಯಲು 35,000 ರೂ. ವೆಚ್ಚವಾಗುತ್ತಿತ್ತು.

ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳೇ ಇಲ್ಲಿ ತರಬೇತಿ ಪಡೆಯುತ್ತಾರೆ ಎಂಬುದನ್ನು ಮನಗಂಡ ಸಚಿವ ಪಾಟೀಲ್ ಅವರು, ಯಾವುದೇ ಒಬ್ಬ ಅಭ್ಯರ್ಥಿ ನಯಾಪೈಸೆ ಖರ್ಚಿಲ್ಲದೆ, ಎಲ್ಲ ಹಣವನ್ನು ಇಲಾಖೆ ವತಿಯಿಂದಲೇ ಭರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಾನವೀಯತೆ ಮೆರೆದರು.

ತರಬೇತಿ ಪಡೆದ ನಂತರ ಸ್ಲೊವಾಕಿಯಾದಲ್ಲಿ ಇವರಿಗೆ ತಿಂಗಳಿಗೆ 970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂನ್ 5 ರಂದು ಮೊದಲ ತಂಡ ಹಾಗೂ ಜೂ.20 ರಂದು 2ನೇ ತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದು ಉಳಿದ ತಂಡಗಳು ಸ್ಲೊವಾಕಿಯಾಕ್ಕೆ ತೆರಳಲಿದೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬ್ಲೂಕಾಲರ್ ಭರ್ತಿಗೆ ಚಾಲನೆ

ಕೆಎಸ್‌ಡಿಸಿ ಇದೀಗ 37 ಚಾಲಕರನ್ನು ಹಂಗೇರಿ ದೇಶಕ್ಕೆ ಕಳುಹಿಸಿಕೊಟ್ಟಿದೆ, ಅಲ್ಲದೆ ಮಾರಿಷಸ್‌ಗೆ ವೆಲ್ಡರ್‌ಗಳು, ಬಾಯ್ಲರ್ ತಯಾರಕರು ಮತ್ತು ಇತರ ಬ್ಲೂಕಾಲರ್ ಕೆಲಸಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ, ನಾರ್ವೆಯಿಂದ ದಾದಿಯರ ಬೇಡಿಕೆ ಪೂರೈಸಲು ಮುಂದಾಗಿದೆ. ಅಲ್ಲದೆ ಸ್ಲೊವಾಕಿಯಾ ಕೂಡ ಹೆಚ್ಚುವರಿಯಾಗಿ ದೊಡ್ಡ ಸಂಖ್ಯೆಯ ಆಪರೇಟರ್‌ಗಳನ್ನು ಕೇಳಿಕೊಂಡಿದೆ.

ಜೊತೆಗೆ ಗಲ್ಫ್‌ಮತ್ತು ಯುರೋಪ್ ರಾಷ್ಟ್ರಗಳಿಂದಲೂ ಬೇಡಿಕೆಗಳು ಬಂದಿದ್ದು, ಇದನ್ನು ಈಡೇರಿಸುವಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ತಿಳಿಸಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆ ಕಲಿಕೆ ಅಗತ್ಯತೆ ಮನಗಂಡಿರುವ ಕೌಶಲ್ಯಾಭಿವೃದ್ಧಿ ನಿಗಮ, ಆಯ್ಕೆಯಾಗುವ ಉದ್ಯೋಗಾಕಾಂಕ್ಷಿಗಳಿಗೆ ಉಚಿತವಾಗಿ ಇಂಗ್ಲೀಷ್ ಭಾಷೆ ಕಲಿಕೆ ತರಬೇತಿಗೆ ಮುಂದಾಗಿದೆ. ಇದಕ್ಕಾಗಿಯೇ ಇಂಗ್ಲೀಷ್ ಭಾಷೆಯಲ್ಲಿ ಪರಿಣಿತಿ ಹೊಂದಿರುವವರಿಂದ ತರಬೇತಿ ನೀಡುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
94 youths get job in slovakiyadr.sarana prakash patilkarnataka skill development corporation
0 FacebookTwitterPinterestEmail
admin

previous post
ಮೂರು ಉಪ ಮುಖ್ಯಮಂತ್ರಿಗಳ ಬೇಡಿಕೆ ಮತ್ತೆ ಮುನ್ನೆಲೆಗೆ
next post
ದಿನ ಎಣಿಸುತ್ತಿರುವ ಸಿದ್ದರಾಮಯ್ಯ ಸರ್ಕಾರ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ