Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಹೊಸ ಕಾರ್ಯಕ್ರಮದ ಮೂಲಕ ಮತದಾರರ ಋಣ ತೀರಿಸುವೆ : ಹೆಚ್ ಡಿಕೆ

by admin June 22, 2024
written by admin June 22, 2024 0 comments 1 minutes read
0FacebookTwitterPinterestEmail
229

ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಪ್ರಚಂಡ ಗೆಲುವು

ಬೆಂಗಳೂರು : ಮೇಕೆ ದಾಟು ಹಾಗೂ ಮಹದಾಯಿ ಸೇರಿದಂತೆ ನನೆಗುದಿಗೆ ಬಿದ್ದಿರುವ ಯೋಜನೆಗಳ ಜೊತೆಗೆ ಹೊಸ ಕಾರ್ಯಕ್ರಮಗಳನ್ನು ರಾಜ್ಯಕ್ಕೆ ತರುವ ಮೂಲಕ ಮತದಾರರ ಋಣ ತೀರಿಸುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಕಳೆದ ಲೋಕಸಭಾ ಚುಣಾವಣೆಯಲ್ಲಿ ಎನ್‌ಡಿಎ ಕೂಟದ 19 ಸಂಸದರನ್ನು ದೆಹಲಿಗೆ ಕಳುಹಿಸಿದ್ದೀರಿ. ನಾವು ಒಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಲಾಖೆಗಳಿಗೆ ಸಂಬಂಧಪಟ್ಟ ಕೇಂದ್ರ ಸಚಿವರ ಮನವೊಲಿಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ.

ಪ್ರಲ್ಹಾದ್ ಜೋಷಿ ಅವರು ಕೇಂದ್ರ ಸಂಪುಟದಲ್ಲಿ ಹಿರಿಯರಿದ್ದಾರೆ. ಅವರು ಎಲ್ಲರ ಜೊತೆಯೂ ಒಳ್ಳೆ ಸಂಬಂಧ ಇಟ್ಟುಕೊಂಡಿದ್ದಾರೆ. ಅಲ್ಲದೆ, ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರ ಸಹಕಾರದಿಂದ ಹಳೆ ಯೋಜನೆಗಳ ಜೊತೆಗೆ ಹೊಸ ಕಾರ್ಯಕ್ರಮಗಳನ್ನು ತಂದು ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ದುಡಿಯುತ್ತೇವೆ.

ಲೋಕಸಭಾ ಚುಣಾವಣೆಯಲ್ಲಿ ಆಯ್ಕೆಗೊಂಡ ಎನ್‌ಡಿಎ ಕೂಟದ ನೂತನ ಸಂಸದರಿಗೆ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಲ್ವರು ಸಚಿವರೂ ಸೇರಿ 19 ಸಂಸದರು ರಾಜ್ಯದ ಧ್ವನಿಯಾಗಿ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ ವಂಚನೆ

ಅದರಲ್ಲೂ ಮುಖ್ಯವಾಗಿ ಜಲಶಕ್ತಿ ಮತ್ತು ರೈಲ್ವೆ ಇಲಾಖೆ ನಮ್ಮ ಸೋಮಣ್ಣ ಅವರ ಬಳಿಯೇ ಇದೆ. ಅವರ ಸಹಕಾರದಿಂದ ಕಾರ್ಯಕ್ರಮಗಳನ್ನು ಸುಲಭವಾಗಿ ಅನುಷ್ಟಾನಗೊಳಿಸಲು ಮುಂದಾಗುತ್ತೇವೆ.
ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿದ ಪ್ರತಿಫಲದಿಂದ ನಮಗೆ 19 ಸ್ಥಾನಗಳು ದೊರೆತಿವೆ.

ನಮ್ಮ ನಿರೀಕ್ಷೆ 27 ಇತ್ತು. ಕಾಂಗ್ರೆಸ್‌ನ ಗ್ಯಾರಂಟಿ ಹಾಗೂ ಅಪಪ್ರಚಾರದಿಂದ ನಮ್ಮ ಗುರಿಯನ್ನು ಮುಟ್ಟಲಾಗಲಿಲ್ಲ, ಆದರೂ ನಾಲ್ಕೈದು ಕ್ಷೇತ್ರಗಳಲ್ಲಿ ಅಲ್ಪಮತಗಳಿಂದ ಸೋಲನುಭವಿಸಿದ್ದೇವೆ.

ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ

ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಹೇಳಿದ್ದರು. ಸಿದ್ದರಾಮಯ್ಯ ಅವರು ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ಹೇಳುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಸಾಮಗ್ರಿಗಳ ಬೆಲೆ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ದೂರಿದರು.

ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಗ್ಯಾರಂಟಿಗಳಿಂದಲೇ ಗೆಲ್ಲಬಹುದೆಂಬ ಭ್ರಮೆ ಹುಸಿಯಾಗಿದೆ, ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಹೋರಾಟ ಮಾಡಿದರೆ ಮುಂಬರುವ ಬೆಂಗಳೂರು, ಮೈಸೂರು ನಗರಪಾಲಿಕೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬಹುದು ಎಂದರು.

ಸ್ಥಳೀಯವಾಗಿ ಉಭಯ ಪಕ್ಷದ ಕಾರ್ಯಕರ್ತರಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸಿಕೊಂಡು ಮುಂಬರುವ ಚುನಾವಣೆಗಳನ್ನು ಎದುರಿಸಲು ಸಿದ್ಧರಾಗಿ.
ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅನ್ನು ಧೂಳೀಪಟ ಮಾಡುವುದಲ್ಲದೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟ ಅಧಿಕಾರ ಹಿಡಿಯುವುದು ಶತಸಿದ್ಧ ಎಂದರು.

ದಿನ ಎಣಿಸುತ್ತಿರುವ ಸಿದ್ದರಾಮಯ್ಯ ಸರ್ಕಾರ !

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
HdHeavy Industries MinisterHuge victorykumaraswamyMahadayiMeke Datunew programspanchayat electionspromisedsettle votersstalled projectsUnion Steelzp-tp
0 FacebookTwitterPinterestEmail
admin

previous post
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ ವಂಚನೆ
next post
ಹೆಚ್ ಎಂಟಿ‌ ಪುನಶ್ಚೇತನಕ್ಕೆ ವರದಿ ಕೇಳಿದ ಹೆಚ್ ಡಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ