ಬೆಂಗಳೂರು:ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜುಲೈ 1ರವರೆಗೆ ಸಿಐಡಿ ವಶಕ್ಕೆ ನ್ಯಾಯಾಲಯ ನೀಡಿದೆ.
ನಿನ್ನೆಯಷ್ಟೇ ಬಂಧಿತರಾಗಿದ್ದ ಅವರನ್ನು 14 ದಿನ ನ್ಯಾಯಾಂಗ ವಶಕ್ಕೆ ನೀಡಿದ್ದ ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಪೊಲೀಸರು ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದೆ.
ಪೊಲೀಸರ ವಶಕ್ಕೆ ನೀಡಿ ಆದೇಶ
ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ ವಾದ-ಪ್ರತಿವಾದದ ನಂತರ ಒಂದು ವಾರ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.
ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದರು.prajval also
ಸೂರಜ್ ವಿಧಾನ ಪರಿಷತ್ ಸದಸ್ಯರಾಗಿರುವುದರಿಂದ ಪೊಲೀಸರು ನಗರದ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ರಜಾ ದಿನವಾದ ನಿನ್ನೆ ಹಾಜರುಪಡಿಸಿದಾಗ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು.
ಸಿಐಡಿ ಮನವಿ
ಈ ಮಧ್ಯೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದ್ದರಿಂದ ಪೊಲೀಸರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡರು.
ಸೂರಜ್ ರೇವಣ್ಣ ಮೊಬೈಲ್ ಸೇರಿದಂತೆ ಕೆಲವು ದಾಖಲೆಗಳನ್ನು ಸಿಐಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬ್ಲ್ಯಾಕ್‌ಮೇಲ್ ವಿಚಾರವಾಗಿ ಮೊಬೈಲ್ ಸಾಕ್ಷ್ಯಗಳನ್ನು ನೀಡಲು ಸೂರಜ್ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದ್ದರು.
ಪ್ರಜ್ವಲ್ ಜೈಲಿನಲ್ಲಿ
ಸೂರಜ್ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಅತ್ಯಾಚಾರ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ತಂದೆ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿ ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು.
ನಂತರ ರೇವಣ್ಣ ಅವರಿಗೆ ನ್ಯಾಯಾಲಯ ನೀಡಿದ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.