Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಫೇಕ್‌ನ್ಯೂಸ್ ತಡೆಗಟ್ಟದ ಅಧಿಕಾರಿಗಳ ವಿರುದ್ಧ ಕ್ರಮ

by admin July 6, 2024
written by admin July 6, 2024 0 comments 2 minutes read
0FacebookTwitterPinterestEmail
243

ಬೆಂಗಳೂರು:ಫೇಕ್‌ನ್ಯೂಸ್ ವಿಪರೀತ ಹೆಚ್ಚುತ್ತಿವೆ, ಸಮಾಜದ ನೆಮ್ಮದಿಗೆ ಕಂಟಕವಾಗಿವೆ, ಇವುಗಳ ಪ್ರಸಾರ ತಡೆಗಟ್ಟಿ, ಇಲ್ಲವಾದರೆ ಕ್ರಮ ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪೊಲೀಸ್ ಅಧಿಕಾರಿಗಳನ್ನು ಎಚ್ಚರಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಫೇಕ್‌ನ್ಯೂಸ್‌ಗಳ ತಡೆಗೆ ಫ್ಯಾಕ್ಟ್‌ಚೆಕ್ ಘಟಕಗಳನ್ನು ಸ್ಥಾಪಿಸಲಗಿದೆ, ಆದರೂ ಫೇಕ್‌ನ್ಯೂಸ್‌ಗಳು ಹೆಚ್ಚಾಗುತ್ತಿವೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಕೃತಕ ಬುದ್ಧಿಮತ್ತೆ ಬಳಸಿ

ಕೃತಕ ಬುದ್ಧಿಮತ್ತೆ ಬಳಸಿ, ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ, ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು, ಮಾದಕದ್ರವ್ಯ ಮಾರುವವರು ಯಾರು, ರೌಡಿಗಳು ಯಾರು, ರಿಯಲ್ ಎಸ್ಟೇಟ್ ದಂಧೆ ನಡೆಸುವವರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರುತ್ತದೆ, ಆದರೂ ಏಕೆ ಇವುಗಳು ನಿಲ್ಲುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಮಗೆ ಗನ್‌ಗಳನ್ನು ಕೊಟ್ಟಿರುವುದು ಏತಕ್ಕೆ, ಇದರ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ, ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದರು.

ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲವೆಂದರೆ ನಾಚಿಕೆಗೇಡು, ಇದನ್ನು ಸರಿಪಡಿಸಿಕೊಳ್ಳಿ.

ಠಾಣೆಗಳಿಗೆ ಭೇಟಿ ಕಡ್ಡಾಯ

ಪೊಲೀಸ್ ಮ್ಯಾನ್ಯುಯಲ್ ಪ್ರಕಾರ ಎಸ್‌ಪಿ, ಡಿಸಿಪಿ, ಐಜಿಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ.

ಎಸ್‌ಪಿ ಮತ್ತು ಐಜಿಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲಿಸಿದರೆ ಅಕ್ರಮ ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಮಾದಕದ್ರವ್ಯ ಮಾರಾಟ ತಡೆಗಟ್ಟಬಹುದು.

ನಾಳೆಯಿಂದಲೇ ಎಸ್‌ಪಿ ಮತ್ತು ಐಜಿಗಳು ಠಾಣೆಗಳಿಗೆ ಭೇಟಿ ನೀಡಬೇಕು, ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸದೆ ಕೂಲಂಕಷ ಪರಿಶೀಲನೆ ನಡೆಸಬೇಕು.

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ
ಎಸ್‌ಪಿ, ಐಜಿ ನೇರ ಹೊಣೆ

ತಮ್ಮ ಠಾಣೆಯ ವ್ಯಾಪ್ತಿಯಲ್ಲಿ ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಮಾದಕದ್ರವ್ಯ ಮಾರಾಟ ನಿಲ್ಲಿಸದಿದ್ದರೆ ಎಸ್‌ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತ್ಮಕ ಪೊಲೀಸ್ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ ಪೊಲೀಸ್‌ಗೆ ಇರುವ ಉನ್ನತ ಹೆಸರನ್ನು ಉಳಿಸಿ, ಬೆಳೆಸಬೇಕು.

ಸಮಾಜದಲ್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು, ಕಾನೂನು ಸುವ್ಯವಸ್ಥೆ ಸುರಕ್ಷಿತವಾಗಿದ್ದರೆ ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯ, ಇದರಿಂದ ತಲಾ ಆದಾಯ, ಜಿಡಿಪಿ ಬೆಳವಣಿಗೆಯೂ ಆಗುತ್ತದೆ.

ಕರ್ತವ್ಯ ಸರಿಯಾಗಿ ನಿರ್ವಹಿಸಿ

ಜಾತಿ ವ್ಯವಸ್ಥೆಯಿಂದಾಗಿ ಸಮಾಜ ಅಸಮಾನತೆಯಿಂದ ಕೂಡಿದೆ, ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ಕೆಳಗಿನ ಅಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ.

ಬೀಟ್, ಸಂಚಾರ, ಹೈವೇ ಪಟ್ರೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಬೇಕು.

ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು, ಇಂಟೆಲಿಜೆಂಟ್ ಪೊಲೀಸರು ಎಚ್ಚರದಿಂದ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು, ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು, ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ, ಈ ಕೊಲೆ ತಪ್ಪಿಸಬಹುದಿತ್ತು ಎಂದರು.

ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ
ಕರ್ನಾಟಕ ಪೊಲೀಸ್‌ಗೆ ಅಭಿನಂದನೆ

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ್ದಕ್ಕೆ ಗೃಹ ಸಚಿವರಿಗೆ ಹಾಗೂ ಕರ್ನಾಟಕ ಪೊಲೀಸ್‌ಗೆ ಅಭಿನಂದನೆಗಳು ಎಂದರು.

ಇದೇ ಸಂದರ್ಭದಲ್ಲಿ ಸೀನ್ ಆಫ್ ಕ್ರೈಂ ಕೈಪಿಡಿ, ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ – ಸಂಚಯ ಆಪ್, ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ, ಬೆಂಗಳೂರು ಸಿಟಿ ಪೊಲೀಸ್-ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ ಸಾಧಿಸುವ ಸಾಧನ), ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ) ಬಿಡುಗಡೆ ಮಾಡಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahfact checkfake newssenior police officers meet
0 FacebookTwitterPinterestEmail
admin

previous post
ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ
next post
ಸೀಕ್ರೆಟ್ ಟಾಸ್ಕ್ ಆಫ್ ಅಗರ್ವಾಲ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ