Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ರಾಜ್ಯಕ್ಕೆ 3 ಖಾಸಗಿ ಹೊಸ ವೈದ್ಯಕೀಯ ಕಾಲೇಜು

by admin July 8, 2024
written by admin July 8, 2024 0 comments 2 minutes read
0FacebookTwitterPinterestEmail
311

ಬೆಂಗಳೂರು:ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ಖಾಸಗಿ ಹೊಸ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು, ಕನಕಪುರ ಮತ್ತು ರಾಮನಗರಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ನಿರಾಕರಿಸಿದೆ.

ಮೂರು ಖಾಸಗಿ ವೈದ್ಯಕೀಯ ಕಾಲೇಜುಗಳಾದ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ (ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‌ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಾಗಲಕೋಟೆ) ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದೆ.

ಬಿಜಿಎಸ್‌ಗೆ 150, ಪಿಇಎಸ್‌ಗೆ 100 ಹಾಗೂ ಬಾಗಲಕೋಟೆ ಎಸ್‌ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ.

ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ರಾಜ್ಯದಿಂದ ಈ ಬಾರಿ ಎನ್‌ಎಂಸಿಗೆ ಮನವಿ ಮಾಡಲಾಗಿತ್ತು, ರಾಮನಗರ ಮತ್ತು ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ.

ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆ

ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿಕೆಯಾಗಲಿದ್ದು, ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ.

ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್‌ಎಂಸಿ ಅನುಮೋದನೆ ನೀಡಿದ್ದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದವು.

ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್‌ಗಳು ಇರಬೇಕೆಂಬ ನಿಯಮವಿದೆ.

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು
ಮಾನದಂಡಗಳ ಪಾಲನೆ ಕಡ್ಡಾಯ

ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ, ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಲು ಎಂಎನ್‌ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕು.

2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಲಾಗಿದೆ.

ಪ್ರತಿ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಇರಬೇಕೆಂಬ ಅನುಪಾತಕ್ಕೆ ಅನುಗುಣವಾಗಿ ಮಾನದಂಡ ರೂಪಿಸಲಾಗಿದೆ.

ಆಯೋಗದ ಮಾರ್ಗಸೂಚಿ

ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ.

ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು.

ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಸುಸಜ್ಜಿತ ಆಸ್ಪತ್ರೆ ಇರಬೇಕು

ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು ಜೊತೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವೂ ಇರಬೇಕು.

ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮರ್ಥ್ಯ ಹೊಂದಿರಬೇಕು, ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.

ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು, ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕು ಎಂಬ ಮಾನದಂಡಗಳಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no new govt. medical collage this yearthree new medical collage to statetotal medical seates raise to 12095
0 FacebookTwitterPinterestEmail
admin

previous post
ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು
next post
ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ