Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ಹಗರಣ: ಸಿಬಿಐ ತನಿಖೆ, ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

by admin July 10, 2024
written by admin July 10, 2024 0 comments 2 minutes read
0FacebookTwitterPinterestEmail
468

ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು:ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೨ರ ಜನವರಿ ೧೨ರಂದು ಕ್ರಯಪತ್ರ ಆಗಿದ್ದು, ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಮ್ಮ ಅವರಿಗೆ 1991ರ ಕಾನೂನು ಪ್ರಕಾರ 4,800 ಚದರಡಿ ಜಾಗ ಅಂದರೆ, 40×60ರ ಎರಡು ನಿವೇಶನಗಳನ್ನು ಮಾತ್ರ ಹಂಚಿಕೆ ಮಾಡಬೇಕಿತ್ತು, 14 ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಂಪೂರ್ಣ ಕಾನೂನುಬಾಹಿರ ಎಂದರು.

1992ರಲ್ಲೇ ಭೂಸ್ವಾಧೀನ

1992ರಲ್ಲೇ ಭೂಸ್ವಾಧೀನ ಆರಂಭವಾಗಿದೆ, 2004ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ, ಮುಡಾ ಸ್ವಾಧೀನದಲ್ಲಿದ್ದ ಜಾಗ ಮಲ್ಲಿಕಾರ್ಜುನ ಸ್ವಾಮಿ ಖರೀದಿ ಮಾಡಲು ಹೇಗೆ ಸಾಧ್ಯ.

ಪಾರ್ವತಮ್ಮ ಅವರ ಸಹೋದರ ಮಲ್ಲಿಕಾರ್ಜುನಸ್ವಾಮಿ 2009-10ರಲ್ಲಿ ದಾನಪತ್ರ ಮಾಡಿದಾಗಲೂ ಈ ಜಾಗ ಮುಡಾ ಸ್ವಾಧೀನದಲ್ಲಿತ್ತು, ಭೂಪರಿವರ್ತನೆ ಸಹಾ ಆಗಿತ್ತು, ದಾನಪತ್ರ ಮಾಡುವಾಗಲೂ ಕೃಷಿ ಭೂಮಿ ಆಗಿರಲಿಲ್ಲ, ಇಲ್ಲೂ ಸಹಾ ತಪ್ಪು ಮಾಹಿತಿ ನೀಡಲಾಗಿದೆ.

ಸಿದ್ದರಾಮಯ್ಯ ತಪ್ಪು ಮಾಹಿತಿ

ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ, ಮುಖ್ಯಮಂತ್ರಿಗಳ ಮುಖವಾಡ ಕಳಚಿಬಿದ್ದಿದೆ, ಬೆಲೆಬಾಳುವ ನಿವೇಶನಗಳನ್ನು ಹೇಗಾದರೂ ಕಬಳಿಸಬೇಕೆಂಬ ಉದ್ದೇಶದಿಂದ ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಲಾಗಿದೆ.

ಮೈಸೂರಿನ ಕೆಸರೇಗ್ರಾಮದ 3.16 ಎಕರೆ ಜಮೀನಿಗೆ ಬದಲಾಗಿ ತಮ್ಮ ಪತ್ನಿಗೆ 14 ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ, ಮುಡಾದಿಂದ ಭೂಸ್ವಾಧೀನಕ್ಕೆ ಬದಲಾಗಿ ಕೇವಲ 18 ಕೋಟಿ ರೂ. ಮೌಲ್ಯದ ನಿವೇಶನಗಳು ಲಭಿಸಿವೆ, ನಿಯಮದ ಪ್ರಕಾರ 62 ಕೋಟಿ ರೂ. ಮೌಲ್ಯದ ನಿವೇಶನಗಳು ನೀಡಬೇಕಿತ್ತು ಎಂದು ಮುಖ್ಯಮಂತ್ರಿ ತಪ್ಪು ಮಾಹಿತಿ ಕೊಟ್ಟಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು

ಸಿದ್ದರಾಮಯ್ಯ ಅವರು 2013ರ ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ 3.16 ಎಕರೆ ಭೂಮಿ ಬಗ್ಗೆ ಉಲ್ಲೇಖಿಸಿಲ್ಲ, ಇದು ಚುನಾವಣೆ ನಿಯಮಗಳ ಉಲ್ಲಂಘನೆಯಾಗಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಎಲ್ಲ ಬಡ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2 ಸಾವಿರ ರೂ. ಕೊಡುವುದಾಗಿ ಗ್ಯಾರಂಟಿಗಳ ವಾಗ್ದಾನ ಮಾಡಿದ್ದರು, ಆದರೆ, ತಮ್ಮ ಪತ್ನಿಗೆ 2 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ಕೊಟ್ಟಿದ್ದಾರೆ, ಪತ್ನಿ ಹೆಸರಿನಲ್ಲಿ 64 ಕೋಟಿ ರೂ.ಗಳಿಗೂ ಹೆಚ್ಚು ಬೆಲೆಯ ನಿವೇಶನಗಳನ್ನು ಪಡೆದಿರುವ ಬಗ್ಗೆ ರಾಜ್ಯದ ಜನ ಪ್ರಶ್ನೆ ಮಾಡುತ್ತಿದ್ದು, ಮುಖ್ಯಮಂತ್ರಿ ಉತ್ತರ ನೀಡಬೇಕು, ಹಗರಣದ ಹೊಣೆ ಹೊರಬೇಕು.

ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲೇ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ಮೊದಲ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ ಎಂದರು.

ಮುಡಾದಲ್ಲಿ 2 ಹಗರಣ

ಮುಡಾದಲ್ಲಿ 2 ಹಗರಣಗಳು ನಡೆದಿವೆ, ಮುಖ್ಯಮಂತ್ರಿ ಅವರ ಧರ್ಮಪತ್ನಿಗೆ ಹಂಚಿಕೆ ಮಾಡಿದ 14 ನಿವೇಶನ ಒಂದು ಪ್ರಕರಣವಾದರೆ, ಈ ಮಾಹಿತಿ ಬಹಿರಂಗವಾಗುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ತರಾತುರಿಯಲ್ಲಿ ಮೈಸೂರಿಗೆ ಧಾವಿಸಿ ಮುಡಾ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದು ಎಲ್ಲ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಿರುವುದು ಇನ್ನೊಂದು ಹಗರಣವಾಗಿದೆ ಎಂದರು.

ಮುಡಾ ಭ್ರಷ್ಟಾಚಾರ ಹಗರಣದ ತನಿಖೆ ನಡೆಸಿ ವರದಿ ನೀಡಿದ ಜಿಲ್ಲಾಧಿಕಾರಿಯನ್ನೂ ತರಾತುರಿಯಲ್ಲಿ ವರ್ಗಾವಣೆ ಮಾಡಲಾಗಿದೆ, ಸಚಿವ ಭೈರತಿ ಸುರೇಶ್, ಹಗರಣ ಮುಚ್ಚಿ ಹಾಕಲು ಎಲ್ಲ ಕಡತಗಳನ್ನು ಬೆಂಗಳೂರಿಗೆ ಒಯ್ದಿದ್ದಾರೆ ಎಂದು ಆರೋಪಿಸಿದರು.

ಒಟ್ಟಾರೆಯಾಗಿ ಮುಡಾದಲ್ಲಿ 5 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ನಿವೇಶನಗಳ ಅಕ್ರಮ ಹಂಚಿಕೆ ನಡೆದಿದೆ, ಹಗರಣದಲ್ಲಿ ಶಾಮೀಲಾದವರನ್ನು ಶಿಕ್ಷಿಸುವ ಬದಲು ರಕ್ಷಿಸಲು ಸಚಿವ ಭೈರತಿ ಸುರೇಶ್ ಮುಂದಾಗಿದ್ದಾರೆ.

ಬಡವರಿಗೆ ನಿವೇಶನ ಹಂಚಬೇಕು

ವಿವಾದಿತ ನಿವೇಶನ ಹಂಚಿಕೆ ರದ್ದು ಮಾಡಿ, ಅರ್ಹ ಬಡವರಿಗೆ ನಿವೇಶನ ಹಂಚಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‌ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ, ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು.

ಮುಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ವರದಿ ಬಳಿಕವೂ 15-6-2024ರಲ್ಲಿ ಸುಮಾರು 42 ಸೈಟ್‌ಗಳನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ, ಇಂಥ ಸಾವಿರಾರು ನಿವೇಶನಗಳನ್ನು ಸರ್ಕಾರ ಕಾನೂನುಬಾಹಿರವಾಗಿ ಕೊಟ್ಟಿದೆ, ಬಡವರು, ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿಕೆ ಮಾಡಿದ್ದಾರೆ.

ಮುಡಾದಲ್ಲಿನ ಭೂಹಗರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಜುಲೈ 12ರಂದು (ಶುಕ್ರವಾರ) ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ, ವಿಧಾನಸಭೆಯಲ್ಲಿನ ವಿರೋಧಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ಶಾಸಕರು, ಕಾರ್ಯಕರ್ತರು ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ದಲಿತರಿಗೆ ಮೀಸಲಿಟ್ಟ ಹಣ

ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ, ಬಿಜೆಪಿ ಪ್ರತಿಭಟನೆಯಿಂದಾಗಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದದ್ದಲ್ ಹಾಗೂ ನಾಗೇಂದ್ರ ಅವರನ್ನು ಎಸ್‌ಐಟಿ ವಿಚಾರಣೆಗೆ ಕರೆಯಿತು.

ಎಸ್‌ಐಟಿ ನಿಧಾನವಾಗಿ ಕೆಲಸ ಮಾಡುತ್ತಿದೆ, ರಾಜ್ಯ ಸರ್ಕಾರ ಸಚಿವರು, ಶಾಸಕರ ರಕ್ಷಣೆಗೆ ಮುಂದಾಗಿತ್ತು, ಹಗರಣವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ವಹಿಸಿದ ನಂತರ ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp protest on 12th in mysurucm siddaramaiah should resignmuda site scam
0 FacebookTwitterPinterestEmail
admin

previous post
ರಾಮನಗರ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಒತ್ತಡ
next post
ವಾಲ್ಮೀಕಿ ನಿಗಮ, ಮುಡಾ ಹಗರಣ ಸದನದಲ್ಲಿ ಚರ್ಚೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ