Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಾಲ್ಮೀಕಿ ನಿಗಮ, ಮುಡಾ ಹಗರಣ ಸದನದಲ್ಲಿ ಚರ್ಚೆ

by admin July 10, 2024
written by admin July 10, 2024 0 comments 1 minutes read
0FacebookTwitterPinterestEmail
287

ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲೂ ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆಯಲ್ಲಿನ ವಿರೋಧ ಪ್ರತಿಪಕ್ಷ ನಾಯಕ ಆರ್.ಅಶೋಕ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣ ಕುರಿತು ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು, ಜುಲೈ 15ರಿಂದ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಣೆ ಮಾಡಲು ಆಗ್ರಹಿಸಲಾಗುವುದು ಎಂದರು.

ರೈತರ ಆತ್ಮಹತ್ಯೆ ಪ್ರಕರಣಗಳು

ರಾಜ್ಯದಲ್ಲಿ ಝೀಕಾ ವೈರಸ್, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದರೂ ಅದರ ಬಗ್ಗೆ ಗಮನಹರಿಸಿಲ್ಲ, ಅಗತ್ಯ ಸಾಮಗ್ರಿಗಳ ಹಾಗೂ ಬಿತ್ತನೆ ಬೀಜಗಳ ದರ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ.

ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ, ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಎದುರಾಗಿದ್ದು, ಆಡಳಿತಕ್ಕೆ ಬಂದ ಒಂದೇ ವರ್ಷದಲ್ಲಿ ಕಾಂಗ್ರೆಸ್ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆ ಎಂದು ದೂರಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕಾಂಗ್ರೆಸ್‌ನ ಯಾರೂ ಭಾಗಿಯಾಗಿಲ್ಲ ಎಂದು ಹೇಳಿಕೊಂಡಿತ್ತು, ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ, ಎಸ್‌ಐಟಿ ತನಿಖೆ ನೆಪದಲ್ಲಿ ಎಲ್ಲರಿಗೂ ಕ್ಲೀನ್‌ಚಿಟ್ ನೀಡುವ ಪ್ರಯತ್ನ ನಡೆದಿದೆ, ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ, ನಿಗಮದ ಅಧ್ಯಕ್ಷರೇ ಖಾಸಗಿ ಹೋಟೆಲ್ ಒಂದರಲ್ಲಿ ಸಭೆ ಸೇರಿದ ಬಗ್ಗೆ ಹೇಳಿಕೆ ನೀಡಿದ್ದಾರೆ, ಈ ಕುರಿತ ಆಡಿಯೋದಲ್ಲಿ ಎಲ್ಲವೂ ಬಹಿರಂಗಗೊಂಡಿದೆ ಎಂದರು.

ಮುಡಾ ಹಗರಣ: ಸಿಬಿಐ ತನಿಖೆ, ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ದಲಿತರಿಗೆ ಮೀಸಲಿಟ್ಟ ಹಣ ಲೂಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ದಲಿತ ಕಾಲೋನಿಗೆ ರಸ್ತೆ, ಮನೆ ನಿರ್ಮಿಸಲು ಮೀಸಲಾಗಿತ್ತು, ದಲಿತರಿಗೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ, ಇದರ ವಿರುದ್ಧವೂ ಹೋರಾಟ ನಡೆಸಲಾಗುವುದು.

ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ, ಈ ಹೆಸರನ್ನು ಕಾಂಗ್ರೆಸ್ ನಾಯಕರು ಇಟ್ಟಿಲ್ಲ, ಇದನ್ನು ಬದಲಿಸಲು ಅವರಿಗೆ ಯಾವುದೇ ಹಕ್ಕು ಇಲ್ಲ, ಕರ್ನಾಟಕದಲ್ಲಿ ರಾಮ-ಕೃಷ್ಣ ಎಂಬ ಊರುಗಳ ಹೆಸರುಗಳನ್ನೂ ಬದಲಾಯಿಸುತ್ತಾರಾ, ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಆ ಪ್ರದೇಶಕ್ಕೆ ರಾಮಘಡ ಎಂಬ ಹೆಸರನ್ನೇ ಇಟ್ಟಿದ್ದರು.

ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ, ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ, ಆಯಾಯ ಜಿಲ್ಲೆಗೆ ಅದರದ್ದೇ ಆದ ಘನತೆ ಇದೆ, ಹುಚ್ಚರಂತೆ, ತುಘಲಕ್‌ನಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದು ಎಂದು ಎಚ್ಚರಿಕೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
muda - valmiki scamr.ashokraise in assembly
0 FacebookTwitterPinterestEmail
admin

previous post
ಮುಡಾ ಹಗರಣ: ಸಿಬಿಐ ತನಿಖೆ, ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
next post
ಮೈಸೂರು-ಕನಕಪುರ ನಡುವೆ ಇನ್ನೊಂದು ಏರ್‌ಪೋರ್ಟ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ