ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿಚಾರವಾಗಿ ಮುಂದೇನು ಮಾಡಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ಕಾವೇರಿ ನೀರು ಹರಿಸುವಂತೆ ಸಿಡ್ಲ್ಯೂಆರ್‌ಸಿ ಆದೇಶ ನೀಡಿದ್ದು, ಕಾನೂನು ತಜ್ಞರ ತಂಡದ ಜತೆ ಚರ್ಚಿಸಿದ್ದು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೂ ಮಾತುಕತೆ ನಡೆಸುತ್ತೇವೆ ಎಂದರು.
ಮುಡಾ: ಬಿಜೆಪಿ ರಾಜಕಾರಣ
ಮುಡಾ ಹಗರಣದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ, ಆ ಪಕ್ಷದ ನಾಯಕರ ಆರೋಪದಲ್ಲಿ ಹುರುಳಿಲ್ಲ, ಸಮಯ ಬಂದಾಗ ತಕ್ಕ ಉತ್ತರ ನೀಡುತ್ತೇವೆ, ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಬಿಜೆಪಿ ಅವಧಿಯಲ್ಲಿ ನಡೆದಿದೆ, ರಾಜಕೀಯ ಆರೋಪಗಳನ್ನು ಸಮರ್ಥವಾಗಿ ಎದುರಿಸುತ್ತೇವೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ, ಇ.ಡಿ. ವಿಚಾರಣೆ ಅವಶ್ಯಕತೆ ಇರಲಿಲ್ಲ, ಇ.ಡಿ. ತನಿಖೆ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ ಎಂದರು.