Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್‌ಗೆ ಮತ್ತೆ ಸಿಬಿಐ ತನಿಖೆ ಉರುಳು !

by admin July 15, 2024
written by admin July 15, 2024 0 comments 2 minutes read
0FacebookTwitterPinterestEmail
222

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಸಿಬಿಐ ಎಫ್‌ಐಆರ್ ರದ್ದುಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಕರ್ನಾಟಕದ ಮುಖ್ಯಮಂತ್ರಿಯಾಗಲು ಇನ್ನೊಂದು ಮೆಟ್ಟಿಲು ಬಾಕಿ ಇರುವಾಗಲೇ ನ್ಯಾಯಾಲಯದ ಈ ತೀರ್ಪು ಅವರನ್ನು ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸಿದೆ.

ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಇಲ್ಲ

ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡು ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಎಸ್.ಸಿ.ಶರ್ಮಾ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ತಮ್ಮ ವಿರುದ್ಧ ಸಿಬಿಐ ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಶಿವಕುಮಾರ್ ಈ ಮೊದಲು ರಾಜ್ಯ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಶಿವಕುಮಾರ್ ವಾದ ಆಲಿಸಿದ್ದ ನ್ಯಾಯಾಲಯ ಇದನ್ನು ರದ್ದುಪಡಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು.

ಎಷ್ಟು ಸತ್ಯ, ಎಷ್ಟು ಸುಳ್ಳು, ಬಯಲು ಮಾಡುವೆ !
ಹಿಂದಿನ ಸರ್ಕಾರದ ಅನುಮತಿ

ಹೈಕೋರ್ಟ್ ಮೊರೆ ಹೋಗುವುದಕ್ಕೂ ಮುನ್ನ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹಿಂದಿನ ಸರ್ಕಾರದ ಅನುಮತಿಯನ್ನು ಸಿದ್ದರಾಮಯ್ಯ ಸಂಪುಟ ಹಿಂದಕ್ಕೆ ಪಡೆದುಕೊಂಡಿತ್ತು.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ರಹದಾರಿ ಮಾಡಿಕೊಟ್ಟಿತ್ತು, ಇದನ್ನು ಸಿದ್ದರಾಮಯ್ಯ ಸರ್ಕಾರ ನಂತರದ ದಿನಗಳಲ್ಲಿ ಹಿಂದಕ್ಕೆ ಪಡೆದಿತ್ತು.

ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದ ಅನುಮತಿ ಹಿಂದಕ್ಕೆ ಪಡೆದಿರುವುದರಿಂದ ತಮ್ಮ ವಿರುದ್ಧದ ಸಿಬಿಐ ತನಿಖೆಯನ್ನು ರದ್ದುಪಡಿಸುವಂತೆ ಶಿವಕುಮಾರ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮುಡಾ-ವಾಲ್ಮೀಕಿ ನಿಗಮ ಹಗರಣಗಳಿಗೆ ಉತ್ತರ ಕೊಡಿ
ಹೆಚ್ಚು ಸಂಪತ್ತು ಗಳಿಕೆ

2013ರಿಂದ 2017ರ ಅವಧಿಯಲ್ಲಿ ಶಿವಕುಮಾರ್ ತಮ್ಮ ಆದಾಯ ಮೂಲಕ್ಕಿಂತ ಹೆಚ್ಚು ಸಂಪತ್ತು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್‌ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಶಿವಕುಮಾರ್ ಮನವಿ ಸಲ್ಲಿಸಿದ್ದರು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಅವರು, ಚಂದ್ರಬಾಬು ನಾಯ್ಡು ಪ್ರಕರಣವನ್ನು ಪೀಠದ ಮುಂದಿಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದರು.

ಮನವಿಗೆ ಪೀಠ ನಿರಾಸಕ್ತಿ

ಮುಂದುವರೆದು ಮುಕುಲ್ ರೋಹಟಗಿ ಅವರು, ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಬೇಕೆಂಬ ಮನವಿಗೆ ಪೀಠ ನಿರಾಸಕ್ತಿ ವ್ಯಕ್ತಪಡಿಸಿತು.

ಈ ಹಿಂದಿನ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರದಲ್ಲಿ ಶಿವಕುಮಾರ್ ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯ ಗಳಿಸಿದ್ದಾರೆಂಬುದು ಪ್ರಮುಖ ಆರೋಪ ಇದಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2016ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸಿದ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದರು.

ಈ ಹಂತದಲ್ಲಿ ವಾದ ಮಂಡಿಸಿದ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾದ ಪ್ರಕರಣವನ್ನು ಹಿಂಪಡೆಯಲಾಗದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿತು. ಇದೇ ವೇಳೆ ಸುಪ್ರೀಂಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು.

ರಾಜಧಾನಿಗೆ ವೈಟ್ ಟಾಪಿಂಗ್ ಶಾಶ್ವತ ರಸ್ತೆ ನಿರ್ಮಾಣ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
decision against dcm shivakumarpetition dismissedsupreme court
0 FacebookTwitterPinterestEmail
admin

previous post
ಎಷ್ಟು ಸತ್ಯ, ಎಷ್ಟು ಸುಳ್ಳು, ಬಯಲು ಮಾಡುವೆ !
next post
ವಾಹನಕ್ಕೆ ಜಾಗ ಇದ್ದರೆ ಮಾತ್ರ ಮನೆ ಕಟ್ಟಲು ಅನುಮತಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ